ಬೆಂಗಳೂರು:ಚುನಾವಣೆ ಸಮೀಪಿಸುತ್ತಿರುವಾಗ ಪಕ್ಷಗಳ ವಿರುದ್ಧ ಕೆಲವು ನಾಯಕರಿಂದ ಅಸಮಾಧಾನ ವ್ಯಕ್ತವಾಗುವುದು ಸಹಜ. ಇದೀಗ ಬಿಜೆಪಿ ವಿರುದ್ಧ ಮಾಜಿ ಸಚಿವ ಅನಂತಕುಮಾರ್ ಕುಟುಂಬದಿಂದ ಬೇಸರವೊಂದು ವ್ಯಕ್ತವಾಗಿದೆ. ಆದರೆ ಇದು ಚುನಾವಣೆ ವಿಚಾರಕ್ಕಾಗಿ ಅಲ್ಲ.
ಕೇಂದ್ರದ ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕರಾಗಿದ್ದ ಅನಂತಕುಮಾರ್ ಅವರ ಪುತ್ರಿ ವಿಜೇತಾ ಅನಂತಕುಮಾರ್ ಬಿಜೆಪಿ ವಿರುದ್ಧ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಭಾರತೀಯ ಜನತಾ ಪಕ್ಷವು ನನ್ನ ತಂದೆಯನ್ನು ಮರೆಯುತ್ತಿದೆ ಎಂಬುದನ್ನು ಅರಿತುಕೊಳ್ಳಬೇಕಿದೆ ಎಂದೂ ಅವರು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಅರುಣ್ ಸೋಮಣ್ಣಗೆ ಹೊಸ ಸ್ಥಾನ; ವಿ.ಸೋಮಣ್ಣಗೆ ಸಮಾಧಾನ?
ಅಪ್ಪ 1987ರಲ್ಲಿ ಔಪಚಾರಿಕವಾಗಿ ಬಿಜೆಪಿಗೆ ಸೇರಿದರು ಮತ್ತು ತಮ್ಮ ಕೊನೆಯ ಉಸಿರು ಇರುವವರೆಗೂ ಕೆಲಸ ಮಾಡಿದರು. ಉದ್ಘಾಟನಾ ಕಾರ್ಯಕ್ರಮಗಳು, ರಸ್ತೆಗಳು, ರೈಲು ಮಾರ್ಗಗಳಲ್ಲಿ ಅವರ ಹೆಸರನ್ನು ಉಲ್ಲೇಖಿಸುವ ಮೂಲಕ ಅವರ ಕೊಡುಗೆಗಳನ್ನು ಪಕ್ಷ ಗುರುತಿಸದಿರುವುದು ಕ್ಷುಲ್ಲಕವಾಗಿದೆ ಎಂದಿರುವ ಅವರು, ತಂದೆ ಲಕ್ಷಾಂತರ ಜನರ ಹೃದಯದಲ್ಲಿ ಜೀವಂತವಾಗಿದ್ದಾರೆ ಎಂದಿದ್ದಾರೆ.
ಪ್ಯಾನ್​-ಆಧಾರ್ ಲಿಂಕ್ ಗಡುವು ವಿಸ್ತರಣೆ: ನೀವೀಗ ಮಾಡಬೇಕಾದ್ದೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − one =
Remember me
