ವಿಜಯಪುರ:ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾನುವಾರ ಬಬಲೇಶ್ವರ ವಿಧಾನಸಭೆ ಕ್ಷೇತ್ರದ ಬಿಜೆಪಿ ಪ್ರಶಿಕ್ಷಣ ವರ್ಗದ ಶಿಬಿರ ಮುಗಿಸಿಕೊಂಡು ಬರುವ ವೇಳೆ ಸಾರವಾಡ ಬಳಿ ಈ ಘಟನೆ ಸಂಭವಿಸಿದೆ.ಸಾರವಾಡದ ಈಶ್ವರ ದೇವಸ್ಥಾನದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಅದನ್ನು ಮುಗಿಸಿಕೊಂಡು ವಿಜಯಪುರಕ್ಕೆ ವಿಜುಗೌಡ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಎರಡೂ ಕಾರುಗಳು ಜಖಂಗೊಂಡಿದ್ದು, ವಿಜುಗೌಡ ಪಾಟೀಲ ಅವರ ಎದೆಗೆ ಪೆಟ್ಟುಬಿದ್ದಿದೆ. ಅವರ ಆಪ್ತ ಸಹಾಯಕ ಪ್ರಶಾಂತ ಕಾಲಿಗೂ ಪೆಟ್ಟಾಗಿದೆ. ಸದ್ಯ ವಿಜುಗೌಡರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಪ್ತ ಸಹಾಯಕ ಪ್ರಶಾಂತ ತಿಳಿಸಿದ್ದಾರೆ.
ಅರೆಬೆತ್ತಲಾಗಿ ಕುಣಿದು ಕುಪ್ಪಳಿದ ಮೆಸ್ಕಾಂ ಸಿಬ್ಬಂದಿಗೆ ಆಯ್ತು ತಕ್ಕಶಾಸ್ತಿ! ವಿಡಿಯೋ ವೈರಲ್

ಸಾವಿನ ಮನೆಯಲ್ಲೂ ಬಿಜೆಪಿ-ಜೆಡಿಎಸ್​ ರಾಜಕೀಯ?

ಇನ್ನೇನು ನಿಶ್ಚಿತಾರ್ಥ ನಡೆಯಬೇಕು… ಅಷ್ಟರಲ್ಲಿ ಬಂದ ಜವರಾಯ ಅಕ್ಕ-ತಂಗಿಯ ಪ್ರಾಣ ಹೊತ್ತೊಯ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 13 =
Remember me
