ಬೆಂಗಳೂರು:ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಅದರ ಹಿಂದಿರುವ ಸಿದ್ಧಸೂತ್ರದಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ. ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದೇ. ಅವರೇ ಶ್ರೀಮನ್ ಸಿದ್ದರಾಮಣ್ಣ ಎಂದು ಸಿಎಂ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.ಜತೆಗೆ ಗೃಹ ಸಚಿವ ಜಿ. ಪರಮೇಶ್ವರ ಹಾಗೂ ರಾಜಣ್ಣಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪಂಥಾಹ್ವಾನ ನೀಡಿದ್ದಾರೆ.ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ನಾನು ಹೇಳಿದ್ದೆಲ್ಲವೂ ಸತ್ಯ. ಅಪ್ಪಟ ಸತ್ಯ. ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ. ಆ ದಾಖಲೆಗಳನ್ನು ತೆಗೆದುಕೊಂಡು ಎಲ್ಲಿಗೆ ಬರಲಿ, ಹೇಳಿ? ಆಗ ಕ್ರಮ ಜರುಗಿಸುವ ದಮ್ಮು ತಾಕತ್ತನ್ನು ತೋರುವಿರಾ? ಅಥವಾ ಪಲಾಯನ ಮಾಡುವಿರಾ? ಎಂದು ಸವಾಲು ಹಾಕಿದ್ದಾರೆ.ಬಹಿರಂಗ ಚರ್ಚೆಗೂ ನಾನು ತಯಾರು. ನೀವು ಸಿದ್ಧವೇ? ಎಲ್ಲಿ? ಯಾವಾಗ? ಎಷ್ಟೊತ್ತಿಗೆ? ನೀವು ನಿಗದಿ ಮಾಡುತ್ತೀರಾ? ನಾನು ನಿಗದಿ ಮಾಡಲಾ? ಅಲ್ಲಿ ನಾನು ಹೇಳಿದ್ದೇನು ಎಂಬ ಬಗ್ಗೆ ಚರ್ಚಿಸೋಣ ಎಂದು ಸಚಿವರಿಬ್ಬರನ್ನುದ್ದೇಶಿಸಿ ಸವಾಲೆಸೆದಿದ್ದಾರೆ.ವಿಕ್ರಂ ಸಿಂಹ ಪ್ರಕರಣದಲ್ಲಿ ಎಚ್.ಡಿ ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಪರಮೇಶ್ವರ್ ಹಾಗೂ ರಾಜಣ್ಣ ಹೇಳಿದ್ದರು. ಈ ಅಭಿಪ್ರಾಯಕ್ಕೆ ಎಚ್‌ಡಿಕೆ ತಿರುಗೇಟು ನೀಡಿದ್ದಾರೆ.ದಾಖಲೆ ಇಟ್ಟುಕೊಂಡೇ ವಿಕ್ರಮ ಸಿಂಹ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಬೇಕಿದ್ದರೆ ದಾಖಲೆಗಳನ್ನು ನಾನೇ ತಂದುಕೊಡುತ್ತೇನೆ. ಆಮೇಲೆ ಕ್ರಮ ಜರುಗಿಸುವ ದಮ್ಮು, ತಾಕತ್ತು ಇದೆಯಾ? ಎಂದು ಕೆಣಕಿದ್ದಾರೆ.‘ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ’ ಅನ್ನುವುದನ್ನು ಇವರು ಅರ್ಥ ಮಾಡಿಕೊಳ್ಳಬೇಕು. ತಪ್ಪಿದರೆ, ಸತ್ಯದ ಪರ ನಿಲ್ಲುವ ನೈತಿಕತೆಯನ್ನಾದರೂ ತೋರಬೇಕು ಎಂದು ಅವರು ಕಿಡಿಕಾರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
