ಬೆಂಗಳೂರು/ಮಂಗಳೂರು:ಗ್ರಾಮ ಪಂಚಾಯಿತಿಗಳ ಅವಧಿ ಮೇ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಲಾಕ್​ಡೌನ್​ನಿಂದ ಚುನಾವಣೆ ಮುಂದೂಡಲು ಸರ್ಕಾರ ನಿರ್ಧರಿಸಿದೆ. ಸದ್ಯ ಪಂಚಾಯತ್​ಗಳ ಮುಂದಿನ ಕಾರ್ಯನಿರ್ವಹಣೆಗೆ ಆಡಳಿತಾಧಿಕಾರಿ ನೇಮಿಸಬೇಕೇ ಅಥವಾ ಹಾಲಿ ಸದಸ್ಯರನ್ನೇ ಮುಂದುವರಿಸಬೇಕೇ ಎನ್ನುವ ಗೊಂದಲ ಉಂಟಾಗಿದ್ದು, ತಜ್ಞರ ಅಭಿಪ್ರಾಯ ಪಡೆದು ಮುಂದಿನ ಹೆಜ್ಜೆ ಇಡಲು ಸರ್ಕಾರ ನಿರ್ಧರಿಸಿದೆ.
ನವೆಂಬರ್​ನಲ್ಲಿ ಚುನಾವಣೆ ನಡೆಸಲು ಸರ್ಕಾರ ರಾಜ್ಯ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದೆ. ಪಂಚಾಯತ್​ರಾಜ್ ಕಾಯ್ದೆಯನ್ವಯ ಗ್ರಾಪಂಗಳ ಅವಧಿ ಮುಗಿದ ಬಳಿಕ ಮುಂದೂಡಲು ಅವಕಾಶವಿಲ್ಲ. ಆದರೆ ಕರೊನಾ ಸೋಂಕು ರಾಷ್ಟ್ರೀಯ ವಿಪತ್ತು ಎಂದು ಘೊಷಣೆಯಾಗಿರುವ ಕಾರಣ ಸರ್ಕಾರಕ್ಕೆ ಮುಂದೂಡುವ ಅವಕಾಶ ದೊರೆತಿದೆ.

ಕರೊನಾ ಕಾರಣಕ್ಕೆ ಗ್ರಾಪಂ ಚುನಾವಣೆ ಮುಂದೂಡಿಕೆ ಅನಿವಾರ್ಯ. ಹಾಲಿ ಸದಸ್ಯರನ್ನು ಮುಂದುವರಿಸುವ ಬಗ್ಗೆಯೂ ಸರ್ಕಾರ ಚಿಂತಿಸಿದ್ದು, ತಜ್ಞರ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳಲಿದೆ.| ಕೋಟ ಶ್ರೀನಿವಾಸ ಪೂಜಾರಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
