| ವಿಲಾಸ ಮೇಲಗಿರಿ ಬೆಂಗಳೂರುಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಮತ್ತೊಂದು ದೃಢ ಹೆಜ್ಜೆ ಇಟ್ಟಿದ್ದು, ಗ್ರಾಮ ಮಟ್ಟದಿಂದಲೇ ಸ್ತ್ರೀ ಸುರಕ್ಷತೆ, ಸ್ವಾವಲಂಬನೆಗೆ ಅಡಿಪಾಯ ಹಾಕುತ್ತಿದೆ. ಅದಕ್ಕೆ ಪೂರಕವಾಗಿ ಸಂಪನ್ಮೂಲ ವಿನಿಯೋಗಕ್ಕೂ ಮುಂದಾಗಿದೆ.
ಮಹಿಳೆಯರ ಕಲ್ಯಾಣ ಕಾರ್ಯಕ್ರಮಗಳಿಗೆ ತಳಮಟ್ಟದಲ್ಲಿ ಸಂಪನ್ಮೂಲ ಸಂಗ್ರಹ ಹಾಗೂ ವಿನಿಯೋಗ ದೊಡ್ಡ ಸಮಸ್ಯೆಯಾಗಿತ್ತು. ಈ ಸಮಸ್ಯೆ ಪರಿಹಾರಕ್ಕೆ ಗ್ರಾಮ ಪಂಚಾಯಿತಿಗಳಲ್ಲೇ ಅನುದಾನ ನಿಗದಿಪಡಿಸಿದೆ. ಗ್ರಾಮ ಪಂಚಾಯಿತಿಗಳು ನಿರ್ವಹಿಸುತ್ತಿರುವ ಎಲ್ಲ ಕಾರ್ಯಕ್ರಮಗಳಿಗೆ ನಿಗದಿಪಡಿಸಿದ ಅನುದಾನದಲ್ಲಿ ಶೇ.5 ಅನ್ನು ಸ್ತ್ರೀಸಬಲೀಕರಣ ಕಾರ್ಯಕ್ರಮಗಳಿಗಾಗಿ ವಿನಿಯೋಗಿಸುವಂತೆ ಸ್ಪಷ್ಟ ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯದಲ್ಲಿ 6022 ಗ್ರಾಮ ಪಂಚಾಯಿತಿಗಳಿದ್ದು, ಈ ಹಂತದಿಂದಲೇ ಮಹಿಳೆಯರಿಗೆ ಶಕ್ತಿ ತುಂಬುವ ಹಿನ್ನೆಲೆ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಮಾರ್ಗದರ್ಶಿ ಸೂತ್ರಗಳನ್ನು ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಮಹಿಳೆಯರ ಮೇಲಿನ ದೌರ್ಜನ್ಯ, ಮಕ್ಕಳ ಪೋಷಣೆ, ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ, ಮಹಿಳಾ ಗ್ರಾಮಸಭೆ ನಡೆಸಿ ಅಹವಾಲು ಆಲಿಕೆ, ಆರೋಗ್ಯ ರಕ್ಷಣಾ ಕಾರ್ಯಕ್ರಮಗಳ ಅನುಷ್ಠಾನ, ಸ್ವಾಬಲಂಬನೆಗೆ ತರಬೇತಿ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಸ್ಥಳೀಯವಾಗಿಯೇ ಆಯೋಜಿಸುವಂತೆ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ನಿರ್ದೇಶನ ನೀಡಿದೆ.
ಅನುದಾನ ಎಲ್ಲಿಂದ?:ಗ್ರಾಮ ಪಂಚಾಯಿತಿಗಳು ನಿರ್ವಹಿಸುತ್ತಿರುವ ಅನಿರ್ಬಂಧಿತ ಹಾಗೂ ಸ್ವಂತ ನಿಧಿಯಲ್ಲಿರುವ ಅನುದಾನದ ಶೇ.5 ಅನ್ನು ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗಾಗಿ ವಿನಿಯೋಗಿಸುವಂತೆ ಸ್ಪಷ್ಟ ಆದೇಶ ನೀಡಲಾಗಿದೆ.
ಸ್ವಂತ ಸಂಪನ್ಮೂಲ ಹೇಗೆ? ಎಷ್ಟು?:ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಆದಾಯ ವಾರ್ಷಿಕ ಸುಮಾರು 1600 ಕೋಟಿ ರೂ. ಇದೆ. ಅದರ ಶೇ.5 ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಅನಿರ್ಬಂಧಿತ ಅನುದಾನದಲ್ಲಿ ಶೇ.5 ಸೇರಿ ಒಟ್ಟು ವಾರ್ಷಿಕ 100 ಕೋಟಿ ರೂ. ಮೊತ್ತವನ್ನು ಮಹಿಳಾ ಸಬಲೀರಕರಣಕ್ಕೆ ವ್ಯಯಿಸಲು ಉದ್ದೇಶಿಸಲಾಗಿದೆ.
ಗ್ರಾಮ ಪಂಚಾಯಿತಿ ಆದಾಯದಲ್ಲಿ ಶೇ.5 ಅನ್ನು ಮಹಿಳಾ ಕಾರ್ಯಕ್ರಮಗಳಿಗೆ ವಿನಿಯೋಗಿಸಲು ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಆದರೆ ಬಹುತೇಕ ಗ್ರಾಮ ಪಂಚಾಯಿತಿಗಳ ಸ್ವಂತ ಆದಾಯ ಪ್ರಮಾಣ ಕಡಿಮೆ ಇದೆ. ಹಾಗಾಗಿ ಸರ್ಕಾರ ಕೂಡ ತತ್ಸಮಾನ ಅನುದಾನವನ್ನು ನೀಡಬೇಕು.
| ಚೈತ್ರಾ ಮೋಹನ್, ಅಧ್ಯಕ್ಷರು, ಹಸೂಡಿ ಗ್ರಾಮ ಪಂಚಾಯಿತಿ, ಶಿವಮೊಗ್ಗ ಜಿಲ್ಲೆ

ಪ್ರಧಾನಿ ಮೋದಿಯನ್ನು ‘ಖಿಲಾಡಿ ನಂ. 1’ ಎಂದು ಕರೆದ ನಟ ಪ್ರಕಾಶ್ ರಾಜ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 11 =
Remember me
