ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆ ಗಳಿಗಾಗಿ ಸಿದ್ಧಪಡಿಸಲಾಗಿರುವ ಸಂಭಾವ್ಯ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್​ಗೆ ಸಲ್ಲಿಸಿದೆ.
ಅವಧಿ ಪೂರ್ಣಗೊಂಡಿರುವ ಗ್ರಾ.ಪಂ.ಗಳಿಗೆ ಚುನಾವಣೆ ನಡೆಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಸಂಭಾವ್ಯ ವೇಳಾಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದರು. ಸದ್ಯ ರಾಜ್ಯದಲ್ಲಿ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ವಿಧಾನಪರಿಷತ್​ನ 4 ಕ್ಷೇತ್ರಗಳಿಗೆ ಚುನಾವಣೆ ಚಾಲ್ತಿಯಲ್ಲಿದ್ದು, 18 ಜಿಲ್ಲೆಗಳಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಆಡಳಿತ ಯಂತ್ರ ಚುನಾವಣಾ ಕಾರ್ಯದಲ್ಲಿ ತೊಡಗಿದೆ. ಈ ಚುನಾವಣೆಗಳು ನ.12ಕೆ್ಕೆ ಮುಕ್ತಾಯಗೊಳ್ಳಲಿದ್ದು, ಆ ನಂತರವೇ ಗ್ರಾ.ಪಂ. ಚುನಾವಣೆಗಳನ್ನು ನಡೆಸಲು ಸಾಧ್ಯ ಎಂದು ಆಯೋಗ ತಿಳಿಸಿದೆ.
ಆಯೋಗದ ನಿಲುವು ಕೇಳಿದ ಕೋರ್ಟ್: ವಿಚಾರಣೆ ವೇಳೆ ಆಯೋಗದ ಪರ ವಕೀಲರು, ಚುನಾವಣೆ ಮುಂದೂಡುವಂತೆ ಮನವಿ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅ.3ಕೆ್ಕೆ ಆಯೋಗಕೆ್ಕೆ ಪತ್ರ ಬರೆದಿದ್ದರು. ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ಮನವಿಯನ್ನು ಕೋರ್ಟ್​ಗೆ ಸಲ್ಲಿಸುವಂತೆ ಸೂಚಿಸಿ ಅ.6ರಂದು ಸರ್ಕಾರಕೆ್ಕೆ ಪತ್ರ ಬರೆಯಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಪ್ರತಿಕ್ರಿಯಿಸಿ, ಚುನಾವಣೆ ಮುಂದೂಡುವಂತೆ ಮನವಿ ಮಾಡಿಲ್ಲ. ಸದ್ಯದ ಪರಿಸ್ಥಿತಿ ಅವಲೋಕಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿದೆ. ಚುನಾವಣೆ ನಡೆಸಬೇಕೆಂಬ ಉದ್ದೇಶ ಸರ್ಕಾರಕ್ಕೂ ಇದೆ. ಆದರೆ, ಈಗಿನ ಪರಿಸ್ಥಿತಿಯಲ್ಲಿ ಜನರ ಆರೋಗ್ಯವೂ ಮುಖ್ಯವಾಗಿದೆ ಎಂದು ತಿಳಿಸಿದರು.
ಆಗ ನ್ಯಾಯಪೀಠ, ಚುನಾವಣಾ ಆಯೋಗ ಸಾಂವಿಧಾನಿಕ ಸಂಸೆ್ಥೆಯಾಗಿದೆ. ಆದ್ದರಿಂದ, ಸರ್ಕಾರ ಬರೆದ ಪತ್ರಕೆ್ಕೆ ಆಯೋಗ ಸ್ಪಷ್ಟ ನಿಲುವು ತಿಳಿಸಬೇಕಾಗುತ್ತದೆ. ಆ ಬಳಿಕ ನ್ಯಾಯಾಲಯ ಅದನ್ನು ಪರಿಶೀಲಿಸಲಿದೆ. ಕರೊನಾ ಸಮಸೆ್ಯೆ ಇಡೀ ರಾಜ್ಯದಲ್ಲಿ ಒಂದೇ ರೀತಿ ಇಲ್ಲ. ಕೆಲವು ಜಿಲ್ಲೆೆಗಳಲ್ಲಿ ಪ್ರಕರಣಗಳ ಪ್ರಮಾಣ ಕಡಿಮೆ ಇದ್ದು, ಅಂಥ ಭಾಗಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಸಬಹುದು ಎಂದು ಸಲಹೆ ನೀಡಿತು. ನಿಲುವು ತಿಳಿಸಲು ಚುನಾವಣಾ ಆಯೋಗದ ವಕೀಲರು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ, ಅ.16ಕ್ಕೆ ವಿಚಾರಣೆ ಮುಂದೂಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
