ಹುಬ್ಬಳ್ಳಿ:ಕೊಲೆಯಾಗಿದ್ದ ಗ್ರಾಮ ಪಂಚಾಯತ್ ಮಾಜಿ ಸದಸ್ಯರೊಬ್ಬರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಪ್ರಕರಣ ಕುತೂಹಲ ಕೆರಳಿಸಿದ್ದು, ಹಲವಾರು ಪ್ರಶ್ನೆಗಳನ್ನು ಮೂಡಿಸಿದೆ. ಧಾರವಾಡ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಇಲ್ಲಿನ ಗಂಗಿವಾಳ ಗ್ರಾಮ ಪಂಚಾಯತ್ ಮಾಜಿ ಸದಸ್ಯ ದೀಪಕ್ ಪಟಧಾರಿ ಅವರ ಪತ್ನಿ ಪುಷ್ಪಾ ಪಟಧಾರಿ ಆತ್ಮಹತ್ಯೆ ಮಾಡಿಕೊಂಡವರು. ಇಲ್ಲಿ ನವನಗರದಲ್ಲಿ ಈ ಪ್ರಕರಣ ನಡೆದಿದೆ. ಈಕೆ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ದೀಪಕ್ ಪಟಧಾರಿ ಕೊಲೆಯಾಗಿತ್ತು. ಹುಬ್ಬಳ್ಳಿ ಯಾಲೂಮಿನ ರಾಯನಾಳದ ಬಳಿ ಕೊಲೆ ನಡೆದಿದ್ದು, ಅದಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಪುಷ್ಪಾ ಅಲೆದಾಡುತ್ತಿದ್ದರು. ದೀಪಕ ಕುಟುಂಬಸ್ಥರ ಆಗ್ರಹದ ಮೇರೆಗೆ ಕೊಲೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ಒಪ್ಪಿಸಲಾಗಿತ್ತು. ಆ ಮೇರೆಗೆ ಸಿಐಡಿ ಅಧಿಕಾರಿಗಳಿಂದ ತನಿಖೆ ಚುರುಕುಗೊಂಡಿದ್ದು, ಮತ್ತೊಂದೆಡೆ ತನಿಖೆಗೆ ಆಗ್ರಹಿಸಿದ್ದ ಪತ್ನಿಯೇ ನೇಣು ಹಾಕಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಪಿಎಫ್​​ಐ ಬ್ಯಾನ್​ ‘ಸೆಪ್ಟೆಂಬರ್​ ಕ್ರಾಂತಿ’ ಎಂದು ಬಣ್ಣಿಸಿದ ಅಲೋಕ್ ಕುಮಾರ್​; ಯಾಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 17 =
Remember me
