ತೀರ್ಥಹಳ್ಳಿ:ಶಿಕಾರಿಗೆ ತೆರಳಿದ್ದ ವೇಳೆ ಬೇಟೆಗಾರರು ಹಾರಿಸಿದ ಗುಂಡು ತಗುಲಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶನಿವಾರ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕಿನ ನೊಣಬೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಾಂತರಾಜ್ (46) ಮೃತರು.
ಶನಿವಾರ ತಾಲೂಕಿನ ನೊಣಬೂರು ಮತ್ತು ಅರಳಿಸುರುಳಿ ವ್ಯಾಪ್ತಿಯ ಅಂಬುತೀರ್ಥದ ಸಮೀಪ 12 ಮಂದಿ ಕಾಡುಪ್ರಾಣಿ ಶಿಕಾರಿಗೆ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದ್ದು ಕಾಂತರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಕ್ಷಣವೇ ಅವರನ್ನು ಅಂಬುತೀರ್ಥದ ಸಮೀಪದಿಂದ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಕರೆದೊಯ್ದಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಜೆಸಿ ಆಸ್ಪತ್ರೆಗೆ ಧಾವಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಘಟನೆಯ ಕುರಿತು ಮಾಹಿತಿ ಪಡೆದರು. ಕಾಂತರಾಜ್ ಅವಿವಾಹಿತನಾಗಿದ್ದು ಕೆಲ ದಿನಗಳ ಹಿಂದೆ ತೀರ್ಥಹಳ್ಳಿಯಲ್ಲಿ ಆಯೋಜಿಸಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದಲ್ಲಿ ತರಬೇತಿ ಪಡೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಡನನ್ನು ಬಿಟ್ಟು ಇಬ್ಬಿಬ್ಬರ ಜತೆ ಲಿವಿಂಗ್ ಟುಗೆದರ್​; ಅವಳಿಗಾಗಿ ಒಬ್ಬನಿಂದ ಇನ್ನೊಬ್ಬನ ಕೊಲೆಯತ್ನ!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 5 =
Remember me
