ಕೋಲಾರ:ಶಾಸಕರ ಬೆಂಬಲಿಗರ ಕಿರುಕುಳದಿಂದ ಬೇಸತ್ತು ಗ್ರಾಮ ಪಂಚಾಯತ್ ಅಧ್ಯಕ್ಷೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೋಲಾರ ತಾಲೂಕು ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ‌ ಪುಷ್ಪಾ ಬಾಬು ಆತ್ಮಹತ್ಯೆಗೆ ಯತ್ನಿಸಿದವರು.
ಕೋಲಾರ ಶಾಸಕ ಶ್ರೀನಿವಾಸ ಗೌಡ ಹಾಗೂ ಗ್ರಾಮಪಂಚಾಯಿತಿ ಉಪಾಧ್ಯಕ್ಷ ನಾಗೇಶ್​ ಹಾಗೂ ವಿಜಯಕುಮಾರ್ ಅವರ ಬೆಂಬಲಿಗರು ನೀಡುತ್ತಿದ್ದ ಕಿರುಕುಳ ತಾಳಲಾರದೆ ಇವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಶಾಸಕರು ಮತ್ತು ಗ್ರಾಮಪಂಚಾಯತ್ ಉಪಾಧ್ಯಕ್ಷರ ಬೆಂಬಲಿಗರು ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಕುರಿತು ಪುಷ್ಪಾ ಡೆತ್​ನೋಟ್​ನಲ್ಲಿ ಬರೆದಿಟ್ಟು, ನಿದ್ರೆ ಮಾತ್ರೆ ಸೇವಿಸಿದ್ದಾರೆ. ವಿಷಯ ತಿಳಿದು ಅವರನ್ನು ತಕ್ಷಣ ಆರ್​.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಮತ್ತೊಬ್ಬ ತಹಸೀಲ್ದಾರ್​ರಿಂದ ಕೋವಿಡ್​ ನಿಯಮ ಉಲ್ಲಂಘನೆ; ಕಾನೂನಿಗೂ ಮೀರಿ ಅದ್ಧೂರಿ ಕಾರ್ಯಕ್ರಮ

ನನ್ನ ಪತಿ ಹಲವು ವಿದ್ಯಾರ್ಥಿನಿಯರನ್ನು ಬಳಸಿಕೊಂಡಿದ್ದಾರೆ; ಪ್ರಾಧ್ಯಾಪಕನ ಕಾಮಪುರಾಣವನ್ನು ಬಿಚ್ಚಿಟ್ಟ ಪತ್ನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + sixteen =
Remember me
