ಉಡುಪಿ:ಕೊಲೆ ಆರೋಪದ ಮೇಲೆ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಕೊಲೆ ಆರೋಪಿ.
ಪ್ರಾಣೇಶ್ ಯಡಿಯಾಳ ಅವರ ಕಾರು ನಿನ್ನೆ ರಾತ್ರಿ ಯಡಮೊಗೆ ನಿವಾಸಿ ಉದಯ ಗಾಣಿಗ (45) ಎಂಬವರಿಗೆ ಡಿಕ್ಕಿ ಹೊಡೆದಿದ್ದು, ಅವರನ್ನು ಸಾರ್ವಜನಿಕರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವಿಗೀಡಾಗಿದ್ದರು. ಈ ಅಪಘಾತದ ಬಳಿ ಪ್ರಾಣೇಶ್ ಅಲ್ಲಿಂದ ಪರಾರಿಯಾಗಿದ್ದು, ಕೊಲೆ ಮಾಡುವ ಉದ್ದೇಶದಿಂದಲೇ ಬೇಕಂತಲೇ ಕಾರನ್ನು ಡಿಕ್ಕಿ ಹೊಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ:ಫಸ್ಟ್ ಡೋಸ್​ ಲಸಿಕೆ ತೆಗೆದುಕೊಳ್ಳುತ್ತಿದ್ದಂತೆ ಫಸ್ಟ್​ ಹೀಗೇನಾದ್ರೂ ಮಾಡ್ಬಿಟ್ಟೀರಾ ಜೋಕೆ..!!!
ಪರಾರಿಯಾಗಿದ್ದ ಪ್ರಾಣೇಶ್​ ನಿನ್ನೆ ತಡರಾತ್ರಿ ಉಳ್ಳೂರು-74 ಗ್ರಾಮ ಪಂಚಾಯತ್ ಸದಸ್ಯರ ಮನೆಯಲ್ಲಿದ್ದ ಕುರಿತು ಸುಳಿವು ಪಡೆದ ಶಂಕರನಾರಾಯಣ ಪೊಲೀಸರು ಅಲ್ಲಿಗೆ ತೆರಳಿ ಪ್ರಾಣೇಶ್​ನನ್ನು ವಶಕ್ಕೆ ಪಡೆದಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪ್ರಾಣೇಶ್​ ಅಕ್ರಮ ಎಸಗುತ್ತಿದ್ದು, ಅದನ್ನು ಪ್ರಶ್ನಿಸಿ ಉದಯ ಗಾಣಿಗ ಸ್ಟೇಟಸ್​ ಹಾಕಿಕೊಂಡಿದ್ದರ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ಅಲ್ಲದೆ ಉದಯ ಅವರು ಪ್ರಾಣೇಶ್ ಕಾರ್ಯವೈಖರಿಯನ್ನು ಆಗಾಗ ಪ್ರಶ್ನೆ ಮಾಡಿದ್ದರಿಂದ ಅವರು ಉದಯ ವಿರುದ್ಧ ದ್ವೇಷ ಹೊಂದಿದ್ದಾರೆ ಎಂಬ ಆರೋಪಗಳೂ ಕೇಳಿಬಂದಿವೆ.
ಸರ್ಕಾರದ ಹಣ ನುಂಗಬೇಡಿ ಎಂದು ಸ್ಟೇಟಸ್​ ಹಾಕಿದ್ದಕ್ಕೆ ಕೊಂದೇ ಬಿಟ್ರಾ?; ಗ್ರಾಮ ಪಂಚಾಯತ್​ ಅಧ್ಯಕ್ಷನ ವಿರುದ್ಧ ಕೊಲೆ ಶಂಕೆ

3 ದಿನಗಳ ಹಿಂದೆ ಅಪಹರಿಸಲಾಗಿದ್ದ ಬಾಲಕನ ಕೊಲೆ; ಸಂಬಂಧಿಯಿಂದಲೇ ಕೃತ್ಯ.. ಅಷ್ಟಕ್ಕೂ ಇಷ್ಟೆಲ್ಲ ಯಾಕೆ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
