ಮಂಡ್ಯ:ಸಂಸದೆ ಸುಮಲತಾ ಅಂಬರೀಷ್ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ಅಥವಾ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸದ್ದಿಲ್ಲದೆ ಸಜ್ಜಾಗುತ್ತಿದ್ದಾರೆ. ಈ ಬಗ್ಗೆ ಸ್ವತಃ ಸುಮಲತಾ ಅವರೇ MLA ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇತ್ತೀಚೆಗಷ್ಟೆ ಸುಳಿವು ನೀಡಿದ್ದರು.
ಇದೀಗ ಸುಮಲತಾ ಬೆಂಬಲಿಗರು ಹಾಗೂ ಮತ್ತೊಂದು ಬಣದ ನಡುವೆ ಉಂಟಾದ ವಾಗ್ವಾದ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದಂತಹ ಘಟನೆ ನಡೆದಿದೆ. ಬಿ.ಗೌಡಗೆರೆ ಗ್ರಾಮದ ಮಹದೇಶ್ವರ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ವೇದಿಕೆ ಏರುವ ವಿಚಾರವಾಗಿ ಗ್ರಾಮಸ್ಥರು ಹೊಡೆದಾಡಿಕೊಂಡಿದ್ದಾರೆ.
ದೇವಾಲಯ ಲೋಕಾರ್ಪಣೆ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಿಸಲಾಗಿತ್ತು. ವೇದಿಕೆಗೆ ಯಾವುದೇ ರಾಜಕೀಯ ಮುಖಂಡರನ್ನು ಹತ್ತಿಸಲು ಇಲ್ಲ ಎಂದು ಮೊದಲೇ ತೀರ್ಮಾನಿಸಲಾಗಿತ್ತು. ಇದರ ನಡುವೆ ಕೆಲ ಗ್ರಾಮಸ್ಥರು ಸುಮಲತಾ ಅವರನ್ನು ವೇದಿಕೆಗೆ ಕರೆತಂದಿದ್ದಾರೆ. ಇದು ಕೆಲ ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.
ಅಸಮಾಧಾನಗೊಂಡ ಗ್ರಾಮಸ್ಥರು ಯಾಕೆ ಸುಮಲತಾರನ್ನು ವೇದಿಕೆಗೆ ಹತ್ತಿಸುತ್ತೀರಾ ಎಂದು ಜಗಳ ಆರಂಭಿಸಿದ್ದಾರೆ. ಈ ಸಂದರ್ಭ ಪ್ರಶ್ನೆ ಮಾಡಿದವರ ವಿರುದ್ಧ ಸುಮಲತಾ ಬೆಂಬಲಿಗರಿಂದ ಅಸಮಾಧಾನಗೊಂಡಿದ್ದಾರೆ. ಕೊನೆಗೆ ಎರಡೂ ಗುಂಪುಗಳು ಕೈಕೈ ಮಿಲಾಯಿಸಿಕೊಂಡಿವೆ.
ವೇದಿಕೆ ಏರುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ವಿಚಾರವಾಗಿ ಮಂಡ್ಯ ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ಸಂಸದೆ ಸುಮಲತಾ ಪ್ರತಿಕ್ರಿಯಿಸಿದ್ದು, ಸುಮಲತಾ ಬಂದರೆ ನೋಡುವ ಆಸೆಯಿಂದ ಜನ ಸೇರುತ್ತಾರೆ. ಕೆಲವರು ಪ್ರಚಾರ ತೆಗೆದುಕೊಳ್ಳುವ ದುರಾಸೆಯಿಂದ ಈ ರೀತಿ ಮಾಡುತ್ತಾರೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − eight =
Remember me
