ಹಾವೇರಿ:ಮಳೆಯಿಂದ ಹಾನಿಯಾಗಿ ಅನಾಹುತ ಸಂಭವಿಸಿದ್ದರೂ ಜನರ ಸಮಸ್ಯೆಗೆ ಸ್ಪಂದಿಸದ್ದರಿಂದ ಸಿಟ್ಟಾದ ಗ್ರಾಮಸ್ಥರು ಗ್ರಾಮ ಪಂಚಾಯತ್ ಅಧ್ಯಕ್ಷನಿಗೇ ಬಾರಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ.
ನಿಂಗಪ್ಪ ಬೆಂತೂರಗೆ ಗ್ರಾಮಸ್ಥರಿಂದ ಏಟು ತಿಂದ ಗ್ರಾಮಪಂಚಾಯತ್ ಅಧ್ಯಕ್ಷ. ನಿನ್ನೆ ರಾತ್ರಿ ಗ್ರಾಮದಲ್ಲಿ ಮನೆ ಕುಸಿದು ಬಸನಗೌಡ ಪಾಟೀಲ ಎಂಬ ಯುವಕ ಮೃತಪಟ್ಟಿದ್ದಾನೆ. ಯುವಕನ ಸಾವಿನ ಜತೆಗೆ ಗ್ರಾಮದಲ್ಲಿ ಮನೆಗಳು ಬಿದ್ದಿರುವ ಪ್ರಕರಣಗಳು ನಡೆದಿದ್ದರೂ ಜನರ ಸಮಸ್ಯೆ ಆಲಿಸದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಈ ಕೃತ್ಯವೆಸಗಿದ್ದಾರೆ.
ಗ್ರಾಮಕ್ಕೆ ತಹಶೀಲ್ದಾರ ಶಿವಾನಂದ ರಾಣೆ ಆಗಮಿಸಿದ್ದ ವೇಳೆ ತಹಶೀಲ್ದಾರರ ಮುಂದೆಯೇ ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ಎಳೆದಾಡಿದ ಗ್ರಾಮಸ್ಥರು, ಆತನಿಗೆ ಏಟು ಕೊಟ್ಟಿದ್ದಾರೆ. ಆತನನ್ನು ಬಚಾವ್ ಮಾಡಲು ಬಂದ ಸದಸ್ಯ ನಿಂಗಯ್ಯ ಪೂಜಾರ ಎಂಬಾತನ ಮೇಲೂ ಹಲ್ಲೆಗೆ ಮುಂದಾಗಿದ್ದರು. ಮಳೆಗೆ ಮನೆಗಳು ಬಿದ್ದಾಗ ಸಮಸ್ಯೆ ಬಗ್ಗೆ ಸ್ಪಂದಿಸದೆ ಬೇಜವಾಬ್ದಾರಿ ಪ್ರದರ್ಶನ ಮಾಡಿದ್ದಕ್ಕೆ ಅಧ್ಯಕ್ಷನಿಗೆ ಏಟು ಕೊಟ್ಟಿದ್ದಾರೆ. ಬಳಿಕ ಗ್ರಾಮದ ಇತರರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪತಿಯ ಕಾಲು ಕತ್ತರಿಸಿ ಪತ್ನಿಯ ಕೈಗಿಟ್ಟ ಆಸ್ಪತ್ರೆ ಸಿಬ್ಬಂದಿ; ಅದನ್ನು ವಾಪಸ್ ಪಡೆದಿದ್ದಾಗಿ ಮಿಮ್ಸ್​ ಮುಖ್ಯಸ್ಥರ ಸ್ಪಷ್ಟನೆ

18ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ!; ನಷ್ಟದಲ್ಲಿದೆ 50 ವರ್ಷಗಳ ಇತಿಹಾಸವಿರುವ ಕಂಪನಿ..

ಇಷ್ಟವಿಲ್ಲದ ಮದುವೆ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
