ಬೆಂಗಳೂರುಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಳಂಬವಾಗುತ್ತಿರುವ ಪರಿಣಾಮ, ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಶಿಕ್ಷಕರ ಕೊರತೆ ಎದುರಾಗಿದೆ. ಶಾಲಾ ಮಕ್ಕಳು ಸಮರ್ಪಕ ಬೋಧನೆ ಸಿಗದೆ ಪರದಾಡುವಂತಾಗಿದೆ.
ಶಿಕ್ಷಣ ಇಲಾಖೆಯು ವರ್ಗಾವಣೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಹೊಸದಾಗಿ ನೇಮಕ ಮಾಡಿರುವ 15 ಸಾವಿರ ಶಿಕ್ಷಕರನ್ನು ಗ್ರಾಮಾಂತರ ಪ್ರದೇಶಕ್ಕೆ ನಿಯೋಜಿಸುವ ಆಲೋಚನೆ ಹೊಂದಿತ್ತು. ಆದರೆ, ಶಿಕ್ಷಕರ ನೇಮಕಾತಿ ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗದೇ ಇರುತ್ತಿರುವುದರಿಂದ ಗ್ರಾಮಾಂತರ ಪ್ರದೇಶದ ಮಕ್ಕಳು ಪಾಠದಿಂದ ವಂಚನೆಯಾಗುವಂತೆ ಮಾಡಿದೆ.
ಹೊಸದಾಗಿ ನೇಮಕವಾಗುತ್ತಿದ್ದ 13,352 ಶಿಕ್ಷಕರನ್ನು ಗ್ರಾಮಾಂತರ ಪ್ರದೇಶಕ್ಕೆ (ಸಿ ವಲಯ) ನಿಯೋಜನೆ ಮಾಡುತ್ತಿತ್ತು. ಆದರೆ, ಹೊಸ ಶಿಕ್ಷಕರು ಇನ್ನೂ ಲಭ್ಯವಾಗದ ಕಾರಣ, ಶಿಕ್ಷಣ ಇಲಾಖೆ ಲೆಕ್ಕಾಚಾರ ಉಲ್ಟಾ ಆಗಿದೆ. ಈ ಕಾರಣದಿಂದಲೇ ಹೊಸದಾಗಿ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆದೇಶಿಸಿದೆ.
ಹಳ್ಳಿಗಳಿಗಿಲ್ಲ ಅತಿಥಿಗಳು
ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಸೇರಿ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ 43 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಂಡಿದೆ. ಆದರೆ, ಅತಿಥಿ ಶಿಕ್ಷಕರು ಹೋಬಳಿ, ತಾಲ್ಲೂಕು, ಜಿಲ್ಲಾ ಕೇಂದ್ರಗಳು ಮತ್ತು ನಗರ ಪ್ರದೇಶಗಳಲ್ಲಿ ಸುಲಭವಾಗಿ ದೊರೆಯುತ್ತಾರೆ. ಆದರೆ, ಹಳ್ಳಿಗಾಡಿನ ಪ್ರದೇಶಗಳಿಗೆ ಹೋಗಲು ಅತಿಥಿಗಳು ಹಿಂದೇಟು ಹಾಕುತ್ತಿದ್ದಾರೆ.
ಸರ್ಕಾರವು ಅತಿಥಿ ಶಿಕ್ಷಕರಿಗೆ ಕೇವಲ 10 ಸಾವಿರ ರೂ.ಮಾತ್ರ ಗೌರವಧನ ನೀಡುವುದರಿಂದ ಗ್ರಾಮೀಣ ಪ್ರದೇಶಗಳಿಗೆ ಓಡಾಡಲು ಸಾರಿಗೆ ವೆಚ್ಚವೇ ಜಾಸ್ತಿಯಾಗುತ್ತದೆ. ಅಲ್ಲದೆ, ದೂರದ ಹಳ್ಳಿಗಳಿಗೆ ಹೋಗಲು ಅತಿಥಿಗಳು ಕೂಡ ಹಿಂದೇಟು ಹಾಕುತ್ತಿರುವ ಪರಿಣಾಮ ಹಳ್ಳಿಗಳಲ್ಲಿ ಶಿಕ್ಷಕರೇ ಇಲ್ಲದಂತಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 15 =
Remember me
