ಬೆಂಗಳೂರು:ಇದೀಗ ಮಾಜಿ ಸಚಿವ ವಿನಯ್ ಕುಲಕರ್ಣಿ, ಸ್ಪರ್ಧೆ ಎಲ್ಲಿಂದ ಎನ್ನುವ ಪ್ರಶ್ನೆ ಎದ್ದಿದ್ದು ಈ ಬಗ್ಗೆ ಸುದ್ದಿಗಾರರು ಕೇಳಿರುವ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.
ಇದನ್ನೂ ಓದಿ:ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಮುಂದಿನ ರಾಜಕೀಯ ಬಗ್ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದ್ದು ಹೀಗೆ…​
ಈ ಸಂದರ್ಭ ವಿನಯ್​ ಕುಲಕರ್ಣಿ, “ಶಿಗ್ಗಾಂವಿ ಕ್ಷೇತ್ರದಿಂದ ಸ್ಫರ್ಧೆ ಮಾಡಲು ಸೂಚಿಸಿದ್ರೆ ನಿಲ್ಲುತ್ತೇನೆ. ನಮ್ಮ ನಾಯಕರು ಏನು ಹೇಳ್ತಾರೆ ಅದನ್ನು ಪಾಲನೆ ಮಾಡುತ್ತೇನೆ. ಈ ನಡೆ ಪಂಚಮಸಾಲಿ ಅಸ್ತ್ರ ಅಂತ ಅಲ್ಲ. ಬದಲಾಗಿ ಅಲ್ಲಿ ಸಾಕಷ್ಟು ಅಭಿವೃದ್ಧಿ ಆಗಬೇಕಿತ್ತು, ಆದರೆ ಆಗಿಲ್ಲ ಎಂದು. ಅಲ್ಲಿನ ಜನರು ಕೂಡ ಅಸಮಧಾನದಿಂದ ಇದ್ದಾರೆ. ನಾಯಕರು ಸೂಚನೆ ಕೊಟ್ಟರೆ ನಾನು ಶಿಗ್ಗಾಂವಿಯಿಂದ ಸ್ಪರ್ಧಿಸಲು ತಯಾರಿದ್ದೇನೆ” ಎಂದಿದ್ದಾರೆ.
ಇದನ್ನೂ ಓದಿ:ದಾಂಡೇಲಿ ರೆಸಾರ್ಟ್‌ನಲ್ಲಿ ರೂಪುಗೊಂಡಿತ್ತು ಯೋಗೇಶ್‌ಗೌಡ ಕೊಲೆ ಸಂಚು: ವಿನಯ್ ಕುಲಕರ್ಣಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಸಿಬಿಐ
ಇದೇ ವೇಳೆ, ಧಾರವಾಡ ಜಿಲ್ಲೆ ಪ್ರವೇಶಿಸುವ ಬಗ್ಗೆ ಪ್ರಶ್ನಿಸಿದಾಗ “ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ಕೋರ್ಟ್​ಗೆ ಅರ್ಜಿ ಹಾಕಿದ್ದೇನೆ. ಪ್ರವೇಶ ಸಿಗಬಹುದು ಎಂಬ ನಿರೀಕ್ಷೆ ಇದೆ. ಆದರೆ ಪ್ರವೇಶ ಸಿಗದೆ ಹೊದ್ರೆ ಬಾರ್ಡರ್ ನಲ್ಲಿ ಕೂತು ಚುನಾವಣೆ ಎದುರಿಸುತ್ತೇನೆ. 15ನೇ ತಾರೀಕಿನಂದು ನಾಮಪತ್ರ ಧಾರವಾಡದಲ್ಲಿ ಸಲ್ಲಿಸುತ್ತೇನೆ” ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − five =
Remember me
