ಬೆಂಗಳೂರು:ಮನುಷ್ಯ ಬಿಟ್ಟು ಎದ್ದು ಹೋಗಬೇಕಾಗುತ್ತದೆ. ಆದರೆ ಅದಕ್ಕೆ ವಯಸ್ಸು ಅನ್ನೋದಿದೆ. 70-80 ವರ್ಷ ಅಂತ ಇದೆ.‌ ಆದರೆ ಈಗ ಸಮಯ ವಯಸ್ಸು ಯಾವುದು ಇಲ್ಲ ಎಂದು ನಟ ವಿನೋದ್ ರಾಜ್  ಭಾವುಕರಾದರು.
ವಿಜಯ್ -ಸ್ಪಂದನಾ ಹೇಳಿ ಮಾಡಿಸಿದ ಜೋಡಿ ಅದು. ಅವರ ಪ್ರೀತಿಯನ್ನು ಬಿಟ್ಟು ಹೋಗಿದ್ದಾರೆ. ನಾನು ಇರಲಿ ಇರದಿರಲಿ ಆದರೆ ಪ್ರೀತಿ ಇರುತ್ತೆ ಅಂತ ಹೇಳಿದ್ದಾರೆ ಈ ದುಃಖವನ್ನು ಭರಿಸುವ ಶಕ್ತಿ ಕುಟುಂಬಕ್ಕೆ ದೇವರು ನೀಡಲಿ ಎಂದು ವಿನೋದ್ ರಾಜ್ ಪ್ರಾರ್ಥಿಸಿದರು.
ಸ್ಪಂದನಾ ಅವರ ಅಂತಿಮ ಯಾತ್ರೆ 2 ಗಂಟೆಗೆ ಪ್ರಾರಂಭವಾಗಲಿದೆ. ಅಂತ್ಯಕ್ರಿಯೆ ಹರಿಶ್ಚಂದ್ರ ಘಾಟ್ ನಲ್ಲಿ ಮಾಡುತ್ತೇವೆ. ಪಾರ್ಥಿವ ಶರೀರ 2 ಗಂಟೆ ತನಕ ಇಲ್ಲೇ ಇರುತ್ತದೆ. ಮಧ್ಯಾಹ್ನ ನಂತರ ಅಂತಿಮ ಸಂಸ್ಕಾರ ಮಾಡುತ್ತೇವೆ ಎಂದು ಭಾವುಕರಾದ ಬಿಕೆ ಹರಿಪ್ರಸಾದ್ ತಿಳಿಸಿದರು.
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ನಿಧನ ಹಿನ್ನೆಲೆಯಲ್ಲಿ ಹರಿಶ್ಚಂದ್ರ ಘಾಟ್‌ನಲ್ಲಿ ಸ್ಪಂದನಾ ಅವರ ಅಂತ್ಯಕ್ರಿಯೆಗೆ ಸಕಲ ಸಿದ್ದತೆ ನಡೆಯುತ್ತಿದೆ. ಮಧ್ಯಾಹ್ನ 2 ಗಂಟೆಯವರೆಗೂ ಮಲ್ಲೇಶ್ವರದಲ್ಲಿರುವ ಬಿ.ಕೆ. ಶಿವರಾಂ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರಲಿದೆ. ಸುಮಾರು 4 ಗಂಟೆಗೆ ಸ್ಪಂದನ ಅವರ ಅಂತ್ಯಕ್ರಿಯೆ ನಡೆಯಲಿದೆ. ಬರ್ನಿಂಗ್ ಮೂಲಕ ಸ್ಪಂದ‌ನ ಅಂತ್ಯಕ್ರಿಯೆಗೆ ಕುಟುಂಬಸ್ಥರು ತೀರ್ಮಾನ ಮಾಡಿದ್ದಾರೆ.
ಸ್ಪಂದನಾ ಅಂತ್ಯಸಂಸ್ಕಾರದ ಹಿನ್ನೆಲೆಯಲ್ಲಿ ಹರಿಶ್ಚಂದ್ರ ಘಾಟ್ ನಲ್ಲಿ ಬಿಬಿಎಂಪಿ ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಹದಿನೈದು ಪೌರ ಕಾರ್ಮಿಕರಿಂದ ಕ್ಲಿನಿಂಗ್ ಕಾರ್ಯ ನಡೆಯುತ್ತಿದೆ.
ಹರಿಶ್ಚಂದ್ರ ಘಾಟ್​ನಲ್ಲಿ ಸ್ಪಂದನಾ ಅಂತ್ಯಕ್ರಿಯೆ; ಸಕಲ ಸಿದ್ಧತೆ ನಡೆಸುತ್ತಿರುವ ಬಿಬಿಎಂಪಿ ಅಧಿಕಾರಿಗಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
