ಹಾವೇರಿ:ಮತದಾರರಿಗೆ 1.50 ಲಕ್ಷ ರೂ. ಮೌಲ್ಯದ ಟೀ ಶರ್ಟ್‌ಗಳನ್ನು ಹಂಚಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಹಾವೇರಿ ವಿಧಾನಸಭೆ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ವಿರುದ್ಧ ಶಹರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ ಭೇಟಿ ಮಾಡಿದ ಜಾರ್ಖಾಂಡ್ ಸಿಎಂ ಹೇಮಂತ್ ಸೂರೇನ್
ಚುನಾವಣಾಧಿಕಾರಿ ವಸೀಂ ಅಕ್ರಂ ಮಹ್ಮದಪಾರೂಕ ಮಿರ್ಚಿ ದೂರು ದಾಖಲಿಸಿದ್ದಾರೆ. ರುದ್ರಪ್ಪ ಲಮಾಣಿ 2023 ಏಪ್ರೀಲ್ 17ರಂದು ವಿಧಾನಸಭೆ ಚುನಾವಣೆ ನಿಮಿತ್ತ ಹಾವೇರಿಯ ಮೈಲಾರ ಮಹದೇವಪ್ಪ ವೃತ್ತದಿಂದ ಹುಕ್ಕೇರಿ ಮಠದವರೆಗೆ ಮೆರವಣಿಗೆ ನಡೆಸಿ ತಹಸೀಲ್ದಾರ್ ಕಚೇರಿ ಬಂದು ನಾಮಪತ್ರ ಸಲ್ಲಿಸಿದ್ದರು.
ಈ ಸಮಯದಲ್ಲಿ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯದೆ 1.50 ಲಕ್ಷ ರೂ. ಮೌಲ್ಯದ 1050 ಟೀ ಶರ್ಟ್‌ಗಳನ್ನು ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಹಂಚಿಕೆ ಮಾಡುವ ಮೂಲಕ ಮತದಾರರಿಗೆ ಆಸೆ, ಆಮಿಷವೊಡ್ಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಿಹಾರದಲ್ಲಿ ನಡೆದ ಮೊಹರಂ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ ಮೂವರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
