ಬೆಂಗಳೂರು:ಗಣ್ಯ ವ್ಯಕ್ತಿಗಳಿಂದ ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ, ಕಾಂಗ್ರೆಸ್ ಸೇರಿ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ್ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ನ್ಯಾಯಾಲಯ ಕಳೆದ ವಿಚಾರಣೆ ವೇಳೆ ನೀಡಿದ್ದ ನಿರ್ದೇಶನದಂತೆ ಅರ್ಜಿದಾರರ ಪರ ವಕೀಲರು ರಾಜ್ಯದಲ್ಲಿ ಮಾನ್ಯತೆ ಹೊಂದಿದ ರಾಜಕೀಯ ಪಕ್ಷಗಳ ಪಟ್ಟಿಯನ್ನು ನ್ಯಾಯಪೀಠಕ್ಕೆ ಒದಗಿಸಿದರು. ಅದನ್ನು ದಾಖಲಿಸಿಕೊಂಡ ಪೀಠ, ಪಿಐಎಲ್‌ನಲ್ಲಿ ರಾಜಕೀಯ ಪಕ್ಷಗಳನ್ನೂ ಪ್ರತಿವಾದಿಗಳಾಗಿ ಸೇರಿಸಿ ತಿದ್ದುಪಡಿ ಮಾಡಲು ಅರ್ಜಿದಾರರಿಗೆ 1 ವಾರ ಕಾಲಾವಕಾಶ ನೀಡಿತು. ಜತೆಗೆ, ಕಾಂಗ್ರೆಸ್, ಬಿಜೆಪಿ, ಜೆಡಿ(ಎಸ್), ಸಿಪಿಐ(ಎಮ್) ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷಗಳಿಗೆ ನೋಟಿಸ್ ಜಾರಿಗೊಳಿಸಿತು.
ಇದನ್ನೂ ಓದಿ:VIDEO: ಮಗು ಬಯಸುವ ಮಹಿಳೆಯರಿಗೆ ಪೂಜಾರಿ, ಬೈರಾಗಿಗಳು ಏನು ಮಾಡ್ತಾರೆ ನೋಡಿ…
ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು ರಾಜಕೀಯ ಪಕ್ಷಗಳ ಜವಾಬ್ದಾರಿ. ಆದ್ದರಿಂದ, ನಿಯಮ ಪಾಲನೆ ವಿಚಾರದಲ್ಲಿ ಪಕ್ಷಗಳು ಸರ್ಕಾರಕ್ಕೆ ಸಹಕಾರ ನೀಡಬೇಕು. ಪಕ್ಷದ ಬೆಂಬಲಿಗರು ಹಾಗೂ ಕಾರ್ಯಕರ್ತರು ನಿಯಮಗಳನ್ನು ಉಲ್ಲಂಘಿಸದಂತೆ ಸೂಚಿಸಬೇಕು. ಈ ಕುರಿತು ಎಲ್ಲ ರಾಜಕೀಯ ಪಕ್ಷಗಳು ಲಿಖಿತವಾಗಿ ತಮ್ಮ ಸ್ಪಷ್ಟನೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಡಿ. 2ಕ್ಕೆ ಮುಂದೂಡಿತು.
ಮುಂದಿನ ವಿಚಾರಣೆ ವೇಳೆ, ಕೋವಿಡ್ ನಿಯಮಗಳ ಜಾರಿಗೆ ಕೈಗೊಂಡಿರುವ ಕ್ರಮಗಳು ಹಾಗೂ ಈವರೆಗೆ ವಿಧಿಸಿರುವ ದಂಡದ ವಿವರಗಳನ್ನು ಸಲ್ಲಿಸುವಂತೆಯೂ ಸರ್ಕಾರಕ್ಕೆ ಕೋರ್ಟ್ ನಿರ್ದೇಶಿಸಿತು.
ತಿರುವನಂತಪುರಂ ಏರ್​ಪೋರ್ಟ್​ ಖಾಸಗೀಕರಣ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಕೇರಳ ಸರ್ಕಾರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − 11 =
Remember me
