ಯಲ್ಲಾಪುರ:ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವಿಶ್ವದರ್ಶನ ಸಂಭ್ರಮ ಕಾರ್ಯಕ್ರಮ ಡಿ.16 ರಂದು ಸಂಜೆ 5 ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ, ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ ತಿಳಿಸಿದರು.
ಅವರು ಸಂಸ್ಥೆಯ ಆವಾರದಲ್ಲಿ ಸೋಮವಾರ ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಬಂಟ್ವಾಳದ ಶ್ರೀರಾಮ ವಿದ್ಯಾ ಕೇಂದ್ರದ ಮುಖ್ಯಸ್ಥ ಡಾ.ಕಲ್ಲಡ್ಕ ಪ್ರಭಾಕರ ಭಟ್ಟ ಉದ್ಘಾಟಿಸಲಿದ್ದು, ಪ್ರಧಾನ ಭಾಷಣ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಕೈಪಿಡಿ ಬಿಡುಗಡೆಗೊಳಿಸಲಿದ್ದಾರೆ. ಸಂಸ್ಕೃತ ಅಧ್ಯಾಪಕಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಡಾ.ಎಸ್.ಆರ್ ಲೀಲಾ ಹಾಗೂ ಬೆಳ್ಳಂಬರದ ನಾಟಿ ವೈದ್ಯ ಹನುಮಂತ ಗೌಡ ಅವರಿಗೆ ಈ ಬಾರಿಯ ವಿಶ್ವದರ್ಶನ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ವಿವರಿಸಿದರು.

ಯುವ ಪತ್ರಕರ್ತರಿಗೆ ಪತ್ರಿಕೋದ್ಯಮದ ವಿಶೇಷ ತರಬೇತಿ ನೀಡುವ ಕಾರ್ಯವನ್ನು ‘ವಿಜಯವಾಣಿ’ ಯಲ್ಲಿ ಈ ಹಿಂದೆ ಆರಂಭಿಸಲಾಗಿತ್ತು. ಕೇವಲ ವಿಜಯವಾಣಿ ಪತ್ರಕರ್ತರಷ್ಟೇ ಅಲ್ಲದೇ ಇತರ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರೂ ಈ ತರಬೇತಿಯ ಪ್ರಯೋಜನ ಪಡೆದಿದ್ದರು. ಅದರ ಮುಂದುವರಿದ ಭಾಗವಾಗಿ ಡಾ.ವಿಜಯ ಸಂಕೇಶ್ವರ ಅವರ ಹೆಸರಿನಲ್ಲಿ, ಸಂಕೇಶ್ವರ ಅವರ ಪ್ರೋತ್ಸಾಹ ಹಾಗೂ ಸಹಕಾರದೊಂದಿಗೆ ಮೀಡಿಯಾ ಸ್ಕೂಲ್ ನ್ನು ವಿಶ್ವದರ್ಶನ ಸಂಸ್ಥೆಯಲ್ಲಿ ಆರಂಭಿಸಲಾಗಿದೆ. ಎಲ್ಲ ರೀತಿಯ ಆಧುನಿಕ ಸೌಕರ್ಯಗಳನ್ನು ಹೊಂದಿದ್ದು, ಸ್ವಂತ ಕಟ್ಟಡ, ಇನ್ನಷ್ಟು ಹೊಸತನಗಳನ್ನು ಅಳವಡಿಸಿಕೊಳ್ಳುವ ಯೋಜನೆಯಿದೆ ಎಂದರು.
ಡಾ.ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್ ಪ್ರಾಂಶುಪಾಲ ಹಾಗೂ ‘ವಿಜಯವಾಣಿ’ ಡೆಪ್ಯುಟಿ ಎಡಿಟರ್ ನಾಗರಾಜ ಇಳೆಗುಂಡಿ ಮಾತನಾಡಿ, ವಿಶ್ವವಿದ್ಯಾಲಯದ ಪಠ್ಯಕ್ರಮದ ಜತೆಗೆ ನಮ್ಮದೇ ಆದ ವಿಶೇಷ ಪಠ್ಯಕ್ರಮವನ್ನೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬೋಧಿಸಲಾಗುತ್ತದೆ. ಪತ್ರಿಕೆ, ಟಿವಿ ವರದಿಗಾರಿಕೆ, ವಿಡಿಯೊ ಚಿತ್ರೀಕರಣ, ಎಡಿಟಿಂಗ್, ಪುಟ ವಿನ್ಯಾಸ, ಆ್ಯಂಕರಿಂಗ್ ಸೇರಿದಂತೆ ಎಲ್ಲ ಬಗೆಯ ತರಬೇತಿ ನೀಡಲಾಗುವುದು. ಅಲ್ಲದೇ ಪ್ರಾಯೋಗಿಕ ತರಬೇತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದೆಂದರು. ಸಂಸ್ಥೆಯ ಮುಖ್ಯ ಶೈಕ್ಷಣಿಕ ಅಧಿಕಾರಿ ಅಜಯ ಭಾರತೀಯ ಇದ್ದರು.
ಇದನ್ನೂ ಓದಿ:ಜಿಲ್ಲೆಯಲ್ಲಿ 51 ಕೂಸಿನ ಮನೆ ಶೀಘ್ರ ಪ್ರಾರಂಭ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 11 =
Remember me
