ಬೆಂಗಳೂರು:ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ವಿಷ ಅನಿಲ ದುರಂತದ ಬೆನ್ನಲ್ಲೇ ರಾಜ್ಯದಲ್ಲೂ ಎಲ್ಲ ಕಾರ್ಖಾನೆಗಳಲ್ಲೂ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:VIDEO| ವಿಷಾನಿಲ ಹರಡುತ್ತಿದ್ದಂತೆ ಜನರು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಸ್ಥಳೀಯ ನಿವಾಸಿ
ವಿಶಾಖಪಟ್ಟಣದ ವಿಷಾನಿಲ ಸೋರಿಕೆ ದುರಂತ ಘಟನೆ ದುರದೃಷ್ಟಕರ. ಇಂಥ ಘಟನೆ ಎಲ್ಲಿಯೂ ನಡೆಯಬಾರದು. ನಮ್ಮ ರಾಜ್ಯದಲ್ಲೂ ಎರಡು ತಿಂಗಳುಗಳ ನಂತರ ಕೈಗಾರಿಕೆಗಳು ಪ್ರಾರಂಭ ಆಗುತ್ತಿದೆ. ಸಂಬಂಧಪಟ್ಟ ಫ್ಯಾಕ್ಟರಿ, ಕಂಪನಿಗಳ ವ್ಯವಸ್ಥಾಪಕರು ಎಚ್ಚರಿಕೆಯಿಂದ ಇರಬೇಕು. ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡ ಬಳಿಕವೇ ಕೈಗಾರಿಕೆಗಳನ್ನು ಶುರು ಮಾಡಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಲಾಕ್​ಡೌನ್​ ನಡುವೆ ಘೋರ ದುರಂತ: ಏರುತ್ತಲೇ ಇದೆ ವಿಷಾನಿಲ ಸೋರಿಕೆಯಿಂದ ಮೃತರಾದವರ ಸಂಖ್ಯೆ
ಎಲ್ಲ ಕೆಮಿಕಲ್​ ಫ್ಯಾಕ್ಟರಿಗಳ ಮೇಲೆ ನಿಗಾಇನ್ನು ಈ ಬಗ್ಗೆ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಆಂಧ್ರದಲ್ಲಿ ಗ್ಯಾಸ್​ ಲೀಕ್​ ಅವಘಡ ನಡೆದ ಬೆನ್ನಲ್ಲೇ, ನಮ್ಮ ರಾಜ್ಯದಲ್ಲೂ ಎಲ್ಲ ರಾಸಾಯನಿಕ ಕಾರ್ಖಾನೆಗಳ ಮೇಲೆ ನಿಗಾ ಇಡಲಾಗಿದೆ. ಪೊಲೀಸ್​ ಮತ್ತು ಅಗ್ನಿಶಾಮಕ ದಳವನ್ನು ಅಲರ್ಟ್ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ ಅಂಥ ದುರ್ಘಟಣೆ ನಡೆಯಲು ಬಿಡುವುದಿಲ್ಲ ಎಂದಿದ್ದಾರೆ. (ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಆಂಧ್ರ ಅನಿಲ ದುರಂತ: ಸೋರಿಕೆಯಾಗಿರುವುದು ಸ್ಟೈರೀನ್ ಗ್ಯಾಸ್, ಇದರಿಂದಾಗುವ ದುಷ್ಪರಿಣಾಮಗಳೇನು?​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
