ಬೆಂಗಳೂರು:ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ದೌರ್ಜನ್ಯ ಮೇರೆ ಮೀರಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಗೃಹ ಇಲಾಖೆ, ಪೊಲೀಸ್ ವ್ಯವಸ್ಥೆ ಆಡಳಿತ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಅಧಿಕಾರಿಗಳು ಆಡಳಿತ ಪಕ್ಷ ನಾಯಕರ ಕೈಗೊಂಬೆಗಳು ಆಗಿರುವ ಪರಿಣಾಮವೇ ಇಂಥ ಘಟನೆಗಳಿಗೆ ದಾರಿ ಆಗುತ್ತಿದೆ. ರಾಜ್ಯದಲ್ಲಿ ಕಳೆದ ಮೂರು ನಾಲ್ಕು ತಿಂಗಳಿನಿಂದ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಪೂರ್ಣವಾಗಿ ಕುಸಿದು ಬಿದ್ದಿದೆ. ಮೊದಲು ಇಂಥ ಪ್ರಕರಣಗಳು ನಡೆಯುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಚಿಂತಾಮಣಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಮುಖಂಡ, ನಗರಸಭೆ ಸದಸ್ಯ ಅಗ್ರಹಾರ ಮುರಳಿ ಅವರ ಮೇಲೆ ದುಷ್ಕರ್ಮಿಗಳು ಮಚ್ಚು ಲಾಂಗ್‌ಗಳಿಂದ ಪೈಶಾಚಿಕ ದಾಳಿ ನಡೆಸಿರುವ ಘಟನೆ ಖಂಡನೀಯ. ಈ ಕೃತ್ಯ ಎಸಗಿದ ದುರುಳರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಆಗ್ರಹಿಸಿದ್ದಾರೆ.
ಕೆಲ ದಿನಗಳ ಹಿಂದೆ ಹಾಸನದಲ್ಲಿ ಜೆಡಿಎಸ್ ಮುಖಂಡ ಕೃಷ್ಣೇಗೌಡರನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಹೊಳೆನರಸೀಪುರದಲ್ಲಿ ನಮ್ಮ ಪಕ್ಷದ ಮುಖಂಡ ಅಶ್ವತ್ಥ್ ಅವರ ಮೇಲೆ ದಾಳಿ ನಡೆಡಿತ್ತು. ಈಗ ಚಿಂತಾಮಣಿಯಲ್ಲಿ ಅಂಥದ್ದೇ ಘಟನೆ ನಡೆದಿರುವುದು ಪ್ರತಿಪಕ್ಷಗಳನ್ನು ಹೆದರಿಸಿ ಬೆದರಿಸುವ ದುಷ್ಟ ಹುನ್ನಾರವಲ್ಲದೆ ಮತ್ತೇನು ಎಂದು ಪ್ರಶ್ನಿಸಿದ್ದಾರೆ.
ಜೆಡಿಎಸ್ ಕಾರ್ಯಕರ್ತರು, ಮುಖಂಡರನ್ನು ವ್ಯವಸ್ಥಿತವಾಗಿ ಗುರಿ ಮಾಡಲಾಗುತ್ತಿದೆ. ಇದು ಸರಿ ಅಲ್ಲ, ಸಹಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಸದಾ ಶಾಂತಿ ನೆಲೆಸಿರಬೇಕು ಎನ್ನುವುದು ನಮ್ಮ ಪಕ್ಷದ ಆಶಯ. ಸರ್ಕಾರ ಮತ್ತು ಗೃಹ ಸಚಿವರು ಕೂಡಲೇ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿದರೆ ಪಕ್ಷದಿಂದ ಉಗ್ರವಾದ ಹೋರಾಟಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
