ತುಮಕೂರು:ಒಕ್ಕಲಿಗ ಸಮುದಾಯದ ಅಪೇಕ್ಷೆಯಂತೆ ರಾಜ್ಯ ಸರ್ಕಾರಕ್ಕೆ ಅಭಿವೃದ್ಧಿ ನಿಗಮ ರಚಿಸದೆ ವಿಧಿ ಇಲ್ಲ ಎಂದು ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಜನಾಂಗ, ಒಂದು ಭಾಷಿಕರಿಗೆ ಅಭಿವೃದ್ಧಿ ನಿಗಮ ರಚನೆ ಮಾಡಿದಾಗ ಎಲ್ಲರೂ ಅಪೇಕ್ಷ ಪಡುತ್ತಾರೆ. ಈ ಹಿನ್ನೆಲೆಯಲ್ಲಿ ಒಕ್ಕಲಿಗ ಅಭಿವೃದ್ಧಿ ನಿಗಮ ರಚನೆಯಾಗುತ್ತದೆ, ನಿಗಮಗಳ ರಚನೆಯ ವಿಚಾರವಾಗಿ ಜನರ ಭಾವನೆಗಳಿಗೆ ಪೂರಕವಾಗಿ ರಾಜ್ಯ ಸರ್ಕಾರ ಕೆಲಸ ಮಾಡಲಿದೆ ಎಂದರು.
ಸಿಬಿಐ ಮೂಲಕ ಹಣಿಯುತ್ತಿಲ್ಲ:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾನೂನು ಪಾಲಿಸಲೇಬೇಕು. ನಾವು ಸಿಬಿಐ ಮೂಲಕ ಅವರನ್ನು ಅಣಿಯುವ ಕೆಲಸ ಮಾಡುತ್ತಿಲ್ಲ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುವರು. ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿದೆ. ಕಾನೂನು ಪ್ರಕಾರ ತನಿಖೆ ನಡೆಯಲಿದ್ದು ಎಲ್ಲರಿಗೂ ಒಂದೇ ಕಾನೂನು. ವ್ಯಕ್ತಿ ಆಧಾರಿತ ಕಾನೂನು ಇಲ್ಲ ಎಂದರು.
ಸಿಎಂ ಯಡಿಯೂರಪ್ಪ ಅವರ ಇತ್ತೀಚಿನ ದೆಹಲಿ ಪ್ರವಾಸದ ವೇಳೆ ಗೃಹ ಸಚಿವ ಅಮಿತ್ ಶಾ ಭೇಟಿಯಾಗುವ ಕಾರ್ಯಕ್ರಮವೇ ನಿಗದಿಯಾಗಿರಲಿಲ್ಲ. ಅಮಿತ್ ಶಾ ಭೇಟಿಗೆ ಅವಕಾಶ ನೀಡದೆ ಇರುವುದು ಸಿಎಂ ಬದಲಾವಣೆ ಮುನ್ಸೂಚನೆ ಅಂತ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪಗಳ ನಿರಾಧಾರ. ಇಂತಹ ಇಲ್ಲಸಲ್ಲದ ಆರೋಪಗಳನ್ನು ಮಾಡಬಾರದು. ಪ್ರತಿಪಕ್ಷಗಳಿಗೆ ಸರ್ಕಾರದ ಬಗ್ಗೆ ಟೀಕೆಯನ್ನು ಮಾಡಲು ಯಾವುದೇ ವಿಚಾರಗಳು ಇಲ್ಲ. ಆದ ಕಾರಣ ಇಂತಹ ಸಲ್ಲದ ಆರೋಪಗಳನ್ನು ಮಾಡುತ್ತಿವೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಉದ್ಭವಿಸುವುದ್ಲಿ. ಉಳಿದ ಅವಧಿಗೂ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ ಎಂದು ಸ್ಪಷ್ಟಪಡಿಸಿದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:one × 4 =
Remember me
