ವಿಜಯಪುರ:ಜಿಲ್ಲೆಯಲ್ಲಿ ವಾಂತಿ-ಭೇದಿ ಸಮಸ್ಯೆ ಉಲ್ಬಣಿಸಿದ್ದು, ಇದುವರೆಗೆ 70ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲಾದಂತಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾತನೂರು ಗ್ರಾಮದಲ್ಲಿ ಜನರು ವಾಂತಿ-ಭೇದಿ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ನಿನ್ನೆ ಬೆಳಗ್ಗೆಯಿಂದ ಗ್ರಾಮದ ಜನರಲ್ಲಿ ಕಾಣಿಸಿಕೊಂಡ ವಾಂತಿ-ಭೇದಿ ಸಮಸ್ಯೆ ಇಂದು ಉಲ್ಬಣಿಸಿದ್ದರಿಂದ ಭೀತಿಗೊಂಡ ಜನರು ಆಸ್ಪತ್ರೆಗೆ ದಾಖಲಾಗಲಾರಂಭಿಸಿದ್ದಾರೆ. ಇಂಡಿ ತಾಲೂಕಾಸ್ಪತ್ರೆಯಲ್ಲಿ 42 ಹಾಗೂ ಇತರ ಖಾಸಗಿ ಆಸ್ಪತ್ರೆಗಳಲ್ಲಿಯೂ 30ರಿಂದ 40 ಜನರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಮಸ್ಯೆಗೆ ಕಾರಣ ಏನು ಎಂಬುದು ಇನ್ನೂ ಖಚಿತವಾಗಿ ತಿಳಿದುಬರದಿದ್ದರೂ ಕುಡಿಯುವ ನೀರಿನಿಂದ ಸಮಸ್ಯೆ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಿಂದ ಪೂರೈಕೆಯಾಗುವ ಕುಡಿಯುವ ನೀರನ್ನು ವಿಜಯಪುರ ನಗರದ ಪರೀಕ್ಷಾಲಯಕ್ಕೆ ಕಳುಹಿಸಲಾಗಿದೆ.
ಇದನ್ನೂ ಓದಿ:‘ನಮಸ್ಕಾರ ದೇವರು’ ಅಂತ ಹೇಳೋದ್ಯಾಕೆ ಡಾಕ್ಟರ್​ ಬ್ರೋ?; ಹಣ ಬೇಕಾದಾಗ ಯಾವ ಹೋಟೆಲ್​ಗೆ ಹೋಗ್ತಾರೆ!
ಇಂಡಿ ತಾಲೂಕಾಸ್ಪತ್ರೆಗೆ ಸ್ಥಳೀಯ ಶಾಸಕ ಯಶವಂತರಾಯಗೌಡ ಪಾಟೀಲ್ ಭೇಟಿ ನೀಡಿದ್ದು, ವಾಂತಿ-ಬೇಧಿಯಿಂದ ಬಳಲುತ್ತಿರುವ ಗ್ರಾಮಸ್ಥರಿಗೆ ಧೈರ್ಯ ಹೇಳಿದ್ದಾರೆ. ಸೂಕ್ತ ಚಿಕಿತ್ಸೆ ನೀಡಬೇಕು. ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ವೈದ್ಯರಿಗೆ ಸೂಚನೆ ನೀಡಿದ್ದಲ್ಲದೆ, ಸಮಸ್ಯೆಗೆ ನಿಖರ ಕಾರಣ ಕಂಡುಕೊಳ್ಳಲು ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಅಸ್ತಿತ್ವಕ್ಕಾಗಿ ಹೋರಾಡುವ ಪಕ್ಷಗಳನ್ನು ನೋಡಿ ನಗಬೇಡಿ: ಮೋದಿ ಹೀಗಂದಿದ್ದೇಕೆ?
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × 4 =
Remember me
