ಬೆಂಗಳೂರು:ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಪ್ರಕರಣ ಸಂಬಂಧ ಇಬ್ಬರು ಐಎಎಸ್​ ಅಧಿಕಾರಿಗಳನ್ನು ಕೇಂದ್ರ ಚುನಾವಣಾ ಆಯೋಗ ಅಮಾನತು ಮಾಡುವಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಕಟ್ಟಪ್ಪಣೆ ವಿಧಿಸಿದೆ.
ಬಿಬಿಎಂಪಿ ವಿಶೇಷ ಆಯುಕ್ತ ಎಸ್​.ರಂಗಪ್ಪ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್​ ಅವರನ್ನು ತನಿಖೆ ಹಿನ್ನೆಲೆ ತತ್​ಕ್ಷಣದಿಂದ ಅಮಾನತು ಮಾಡುವಂತೆ ಸೂಚಿಸಿದೆ. ಹಾಗೂ ಶಿವಾಜಿನಗರ, ಚಿಕ್ಕಪೇಟೆ, ಮಹದೇವಪುರ ವಿಧಾನಸಭಾ ಕ್ಷೇತ್ರಗಳ ಮತದಾರರಪಟ್ಟಿ ಸಮಗ್ರ ಪರಿಶೀಲನೆಗೆ ನಿರ್ದೇಶನ ನೀಡಿದೆ.
ರಂಗಪ್ಪ ಅವರು ಶಿವಾಜಿನಗರ ಮತ್ತು ಚಿಕ್ಕಪೇಟೆ ಕ್ಷೇತ್ರಗಳ ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿದ್ದರೆ, ಶ್ರೀನಿವಾಸ್​ ಅವರು ಮಹದೇವಪುರ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿಯಾಗಿದ್ದರು.
ಮೂರು ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪರಿಶೀಲನೆಗಾಗಿ ವಿಶೇಷ ಅಧಿಕಾರಿಗಳನ್ನು ನೇಮಿಸುವಂತೆ ಮೂವರು ಐಎಎಸ್​ ಅಧಿಕಾರಿಗಳನ್ನು ನೇಮಿಸಲಾಗಿದೆ.
ಶಿವಾಜಿನಗರ ಕ್ಷೇತ್ರಕ್ಕೆ ಐಎಎಸ್​ ಅಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸ್, ಚಿಕ್ಕಪೇಟೆ ಕ್ಷೇತ್ರಕ್ಕೆ ಡಾ.ವಿಶಾಲ್, ಮಹದೇವಪುರ ಕ್ಷೇತ್ರಕ್ಕೆ ಅಜಯ್ ನಾಗಭೂಷಣ್ ಅವರನ್ನು ನೇಮಿಸಲಾಗಿದೆ. ಈ ಮೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.
ಈ ಕುರತು ಪ್ರತಿಕ್ರಿಯಸಿರುವ ಸಿಎಂ, ಪ್ರಕರಣ ಸಂಬಂಧ ಮುಕ್ತ ತನಿಖೆ ಮಾಡಿಸಲು ಸರ್ಕಾರ ಮುಕ್ತವಾಗಿದೆ. ಹೀಗಾಗಿಯೇ ನಾವು ತನಿಖೆಗೆ ಕೊಟ್ಟಿರೋದು. ಹಲವರ ಬಂಧನ ಕೂಡ ಆಗಿದೆ. ಚುನಾವಣಾ ಆಯೋಗದ ತನಿಖೆಯನ್ನು ಸ್ವಾಗತಿಸುತ್ತೇವೆ ಎಂದರು.
ತಿಪಟೂರಿನಲ್ಲಿ ನಾಳೆ ಬೆಳಗ್ಗೆಯಿಂದ 2 ದಿನ ಮದ್ಯ ಮಾರಾಟಕ್ಕೆ ಬ್ರೇಕ್​!

ನಾನು ಮದ್ವೆ ಆಗ್ಬೇಕು, ಪ್ಲೀಸ್​ ಹೆಣ್ಣು ಹುಡುಕಿ ಕೊಡಿ ಸಾರ್… ಶಿವಮೊಗ್ಗ ಎಸ್ಪಿಗೆ ಜಾತಕ ಕೊಟ್ಟು ಅರ್ಜಿ ಸಲ್ಲಿಸಿದ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + nineteen =
Remember me
