ಬೆಂಗಳೂರು:ರಾಜ್ಯದ 2ನೇ ಹಂತದ ಲೋಕಸಭೆ ಚುನಾವಣೆ ಮಂಗಳವಾರ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಘಟಾನುಘಟಿಗಳು ಸ್ಪರ್ಧಿಸಿರುವ ಈ ಚುನಾವಣೆಯಲ್ಲಿ 2.59 ಕೋಟಿ ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.
ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೆತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿದಂತೆ ಮತ್ತು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.ಈ ಕ್ಷೇತ್ರಗಳಲ್ಲಿ 2,59,52,958 ಮತದಾರರಿದ್ದು, 1,29,48,978 ಪುರುಷ, 1,29,64,570 ಮಹಿಳಾ ಹಾಗೂ 1,945 ತೃತೀಯ ಲಿಂಗಿ ಮತದಾರರು ಇದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ 16,41,156 ಮತದಾರರಿದ್ದರೆ, ಅತೀ ಹೆಚ್ಚು ಕಲಬುರಗಿ ಲೋಕಸಭಾ ಕ್ಷೆತ್ರದಲ್ಲಿ 20,98,202 ಮತದಾರರಿದ್ದಾರೆ. ಸೂಕ್ಷ್ಮ ಮತಗಟ್ಟೆಗಳಿಗೆ ಒಬ್ಬರು ಮುಖ್ಯಪೇದೆ ಹಾಗೂ ಒಬ್ಬರು ಪೇದೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಸಾಮಾನ್ಯ ಮತಗಟ್ಟೆಗೆ ಒಬ್ಬರು ಪೇದೆ ನಿಯೋಜಿಸಲಾಗಿದ್ದು, ಮತಗಟ್ಟೆಗಳ ಸಮೂಹ ಇರುವ ಕಡೆ ಕೇಂದ್ರದ ಪಡೆಗಳನ್ನು ನಿಯುಕ್ತಿಗೊಳಿಸಲಾಗಿದೆ.28,269 ಮತಗಟ್ಟೆ ಸ್ಥಾಪಿಸಿದ್ದು, ಮುಕ್ತ, ಶಾಂತಿಯುತ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ 40 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.
560 ಮತಗಟ್ಟೆಗಳನ್ನು ಮಹಿಳೆಯರೇ ನಿರ್ವಹಿಸಲಿದ್ದು, 112 ಮತಗಟ್ಟೆಗಳನ್ನು ದಿವ್ಯಾಂಗರು ನಿರ್ವಹಿಸುತ್ತಾರೆ. ಇತರೆ ವಿವಿಧ ವಿಷಯಗಳ 224 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸ್ಥಳೀಯ ಸಂಸ್ಕೃತಿ ಸಂಪ್ರದಾಯವನ್ನು ಬಿಂಬಿಸುವಂತೆ ಅಲಂಕರಿಸಲಾಗಿದೆ.
ಯಾವುದೇ ಮತದಾರ ಮತದಾನದಿಂದ ದೂರ ಉಳಿಯಬಾರದೆಂದು ಮತಗಟ್ಟೆಗಳಲ್ಲಿ ಮತದಾರ ಸ್ನೇಹಿ ಸೌಲಭ್ಯ ಕಲ್ಪಿಸಲಾಗಿದೆ. ಬೇಸಿಗೆ ಬಿಸಿಲಿನ ಕಾರಣ ಕುಡಿಯುವ ನೀರು, ನೆರಳು, ಜ್ಯೂಸ್, ಕುಳಿತುಕೊಳ್ಳು ಕುರ್ಚಿ, ್ಯಾನ್, ವಿಶೇಷಚೇತನರಿಗೆ ವಿಶೇಷ ಸವಲತ್ತು ಕಲ್ಪಿಸಲಾಗಿದೆ. ಸಖಿ ಮತಗಟ್ಟೆ ಸೇರಿದಂತೆ ವಿಶೇಷ ಜನಾಕರ್ಷಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.ಶುಷ್ರೂಕರು, ಆಶಾ ಕಾರ್ಯಕರ್ತೆಯರೊಂದಿಗೆ ಓಆರ್‌ಎಸ್ ಸೇರಿದಂತೆ ಇತರೆ ವೈದ್ಯಕೀಯ ಕಿಟ್ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್ ಒದಗಿಸಲು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾಯ್ದಿರಿಸಲಾಗಿದೆ.
ಬೆಳಗ್ಗೆ 7 ರಿಂದ ಸಂಜೆ 6
ಬಾಕ್ಸ್:ಯಾವ ಕ್ಷೇತ್ರಗಳಲ್ಲಿ ಚುನಾವಣೆ:ಚಿಕ್ಕೊಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಚುನಾವಣಾ ಆಯೋಗದಿಂದ ಈಗಾಗಲೇ ನೀಡಲಾಗಿರುವ ವೋಟರ್‌ರಸ ಸ್ಲಿಪ್‌ನ ಜತೆಗೆ ಮತದಾರರ ಗುರುತಿನ ಚೀಟಿ, ಆಧಾರ್‌ಕಾರ್ಡ್, ನರೇಗ ಜಾಬ್‌ಕಾರ್ಡ್, ಬ್ಯಾಂಕ್, ಪೋಸ್ಟ್ ಆಫೀಸ್ ಪಾಸ್‌ಬುಕ್, ಕಾರ್ಮಿಕ ಸಚಿವರು ನೀಡುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೆಸೆನ್ಸ್, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್, ಪಿಂಚಣಿಯ ದಾಖಲೆ, ರಾಜ್ಯಸರ್ಕಾರ, ಸಾರ್ವಜನಿಕ ಸಂಸ್ಥೆಗಳು, ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೊಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿ, ಎಂಎಲ್‌ಎ, ಎಂಎಲ್‌ಸಿಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ, ಸಾಮಾಜಿಕ ನ್ಯಾಯ ಸಬಲೀಕರಣ ನೀಡಿರುವ ವಿಶಿಷ್ಟ ಅಂಗವಿಕಲ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಬಹುದಾಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven − seven =
Remember me
