ಬಳ್ಳಾರಿ:ಕರ್ನಾಟಕ ವಿಧಾನಸಭೆ ಚುನಾವಣೆ ಅಂಗವಾಗಿ ಇಂದು ಮತದಾನ ನಡೆಯುತ್ತಿದೆ. ರೋಗಿ, ನವದಂಪತಿ, ವೃದ್ಧರು, ಯುವಕ, ಯುವತಿಯರು ಎಲ್ಲರೂ ಅತ್ಯಂತ ಉತ್ಸಾಹದಿಂದಲೇ ಮತ ಹಾಕುತ್ತಿದ್ದಾರೆ. ವಿಕಲಾಂಗ ಯುವಕ, ಯುವತಿ ತಮ್ಮ ಹಕ್ಕು ಚಲಾಯಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ವಿಕಲಾಂಗ ಎಮ್ ಡಿ ಮುಸ್ತಫಾ ಅವರು ಮತದಾನ ಮಾಡುವ ಮೂಲಕವಾಗಿ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಎರಡು ಕೈ ಇಲ್ಲದ ಇವರು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕೊಳಗಲ್ಲು ಗ್ರಾಮದ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.
ಇದನ್ನೂ ಓದಿ:ನಾಲ್ಕು ತಿಂಗಳಿನಿಂದ ಹಾಸಿಗೆಯಲ್ಲೇ ಮಲಗಿದ್ದ ರೋಗಿ; ಆಂಬ್ಯುಲೆನ್ಸ್​​ನಲ್ಲಿ ಬಂದು ಮತ ಚಲಾವಣೆ
ಕೊಳಗಲ್ಲು ಗ್ರಾಮದ ಮುಸ್ತಫಾ ಮತದಾನ ಮಾಡುವ ಮೂಲಕವಾಗಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಇವರಿಗೆ ಎರಡೂ ಕೈ ಇಲ್ಲದ ಕಾರಣ ಚುನಾವಣಾ ಅಧಿಕಾರಿಗಳು ಕಾಲು ಬೆರಳಿಗೆ ಮತದಾನದ ಶಾಹಿ ಹಾಕಿದ್ದಾರೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದಲ್ಲಿ, ಗುಂಡುಮುಣುಗು ನಿವಾಸಿ ಲಕ್ಷ್ಮೀದೇವಿ ವಿಕಲಾಂಗಳಾಗಿದ್ದಾಳೆ. ಯುವತಿಗೆ ಕೂಡಾ 2 ಕೈಗಳು ಇಲ್ಲ. ಆದರೆ ಈಕೆ ಮತದಾನ ತನ್ನ ಹಕ್ಕು ಎಂದು ಮತಗಟ್ಟೆಗೆ ಬಂದು ಮತಚಲಾಯಿಸಿದ್ದಾಳೆ. ಎರಡೂ ಕೈಗಳಿಲ್ಲ ಕಾರಣ ಕಾಲು ಬೆಳರಿಗೆ ಇಂಕನ್ನು ಹಾಕಲಾಗಿದೆ.
ಕಲ್ಯಾಣ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದ ನವದಂಪತಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:7 + seven =
Remember me
