ಚಾಮರಾಜನಗರ:ಮೂಲಸೌಕರ್ಯಗಳನ್ನು ನೀಡಬೇಕೆಂದು ಮತದಾನ ಬಹಿಷ್ಕಾರ ಹಾಕಿದ್ದ ಮಲೆ ಮಹದೇಶ್ವರ ಬೆಟ್ಟದ ಕುಗ್ರಾಮ ಇಂಡಿಗನತ್ತದಲ್ಲಿ ಮತದಾನ ಮಾಡಲೇಬೇಕೆಂದು ಒತ್ತಾಯ ಮಾಡಿದ್ದಕ್ಕೆ ಮತಗಟ್ಟೆ ಧ್ವಂಸಗೊಳಿಸಿ, ಅಧಿಕಾರಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಹನೂರು ತಾಲೂಕಿನ ಮಲೆಮಹದೇಶ್ವರ ತಪ್ಪಲಿನ ಇಂಡಿಗನತ್ತ ಗ್ರಾಮದಲ್ಲಿ ಗ್ರಾಮಸ್ಥರಿಂದ ತಹಸೀಲ್ದಾರ್, ಇನ್ಸ್‍ಪೆಕ್ಟರ್ ಹಾಗೂ ಚುನಾವಣಾ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿದ್ದು, ಮತ ಯಂತ್ರಕ್ಕೆ ಬೆಂಕಿ ಇಡಲಾಗಿದೆ.
ಇದನ್ನೂ ಓದಿ:ಒಂದೇ ದಿನದಲ್ಲಿ 20% ಏರಿಕೆ; ಅಪ್ಪರ್​ ಸರ್ಕ್ಯೂಟ್​ ಹಿಟ್​: ಷೇರು ಬೆಲೆ ಏರಿಕೆ ಕಾರಣಗಳೇನು?
ಚುನಾವಣೆ ಬಹಿಷ್ಕಾರದ ಹಿನ್ನಲೆ ಗ್ರಾಮಸ್ಥರನ್ನು ಮನಲಿಸಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪೊಲೀಸರಿಂದಲೂ ಲಾಠಿ ಪ್ರಹಾರ ನಡೆದಿದೆ. ಆದರೆ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆ ಅದು ಕೂಡ ವಿಫಲವಾಗಿದೆ. ಗ್ರಾಮಕ್ಕೆ ರಸ್ತೆ ನಿರ್ಮಾಣ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಇನ್ನಿತರೆ ಅಗತ್ಯ ಮೂಲ ಸೌಕರ್ಯವನ್ನು ಒದಗಿಸದಿದ್ದಲ್ಲಿ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಆಯಾ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಿದ್ದರು.
ಈ ಹಿನ್ನೆಲೆ ಇತ್ತೀಚೆಗೆ ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ಅವರು ಇಂಡಿಗನತ್ತ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಂದ ಸಮಸ್ಯೆ ಆಲಿಸಿ ಅಗತ್ಯ ಭರವಸೆ ನೀಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಶುಕ್ರವಾರ ಚುನಾವಣೆಯನ್ನು ಬಹಿಷ್ಕರಿಸಿದ್ದರು.
ಇದನ್ನೂ ಓದಿ:ಹಿಂದುಪರ ಕಾರ್ಯಕರ್ತೆ ಕಾಜಲ್ ಹಿಂದುಸ್ತಾನಿ ವಿರುದ್ಧದ ಪ್ರಕರಣಕ್ಕೆ ತಡೆ
ಇಂಡಿಗನತ್ತ ಗ್ರಾಮಕ್ಕೆ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್, ಇನ್ಸ್‍ಪೆಕ್ಟರ್ ಜಗಧೀಶ್ ಹಾಗೂ ಸೆಕ್ಟರ್ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಮೆಂದಾರೆ ಗ್ರಾಮದ ಜನರನ್ನು ಮತದಾನ ಮಾಡಲು ಮನವೊಲಿಸಲಾಗುತ್ತಿತ್ತು. ಆಗ ಗ್ರಾಮಸ್ಥರು ಮತ್ತು ಅಧಿಕಾರಿಗಳ ನಡುವೆ ತೀವ್ರ ಮಾತಿನ ಚಕಮಕಿ ಭುಗಿಲೆದ್ದಿದೆ. ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದು, ತಹಸೀಲ್ದಾರ್, ಇನ್ಸ್‍ಪೆಕ್ಟರ್ ಹಾಗೂ ಚುನಾವಣಾ ಅಧಿಕಾರಿಗಳು ಗಾಯಗೊಂಡಿದ್ದಾರೆ.
ಇದಲ್ಲದೇ, ಮತಯಂತ್ರವನ್ನು ಧ್ವಂಸ ಮಾಡಿ ಬೆಂಕಿಹಚ್ಚಿದ್ದು, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಯಗೊಂಡ ಅಧಿಕಾರಿಗಳು ಸದ್ಯ ಗ್ರಾಮದಲ್ಲೇ ರಕ್ಷಣೆಯಲ್ಲಿದ್ದು, ಪರಿಸ್ಥಿತಿ ಬಿಗಡಾಯಿಸಿದೆ.
ಲೋಕ ಸಮರ 2024: ಮತದಾನ ಕುರಿತು ತೇಜಸ್ವಿ ಸೂರ್ಯ ಅಸಮಾಧಾನ! ಬೆಂಬಲಿಗರಿಗೆ ಕೊಟ್ಟ ಸಂದೇಶವಿದು…

4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eight =
Remember me
