ಹುಬ್ಬಳ್ಳಿ:ಸಾರಿಗೆ, ಪತ್ರಿಕೋದ್ಯಮ ಸೇರಿ ಅನೇಕ ಯಶಸ್ವಿ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ದೇಶದ ಉದ್ಯಮಶೀಲ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ವಿಆರ್​ಎಲ್​ ಸಂಸ್ಥೆ ಸಿನಿಮಾ ಕ್ಷೇತ್ರಕ್ಕೂ ಎಂಟ್ರಿ ಕೊಡಲು ಸಜ್ಜಾಗಿದೆ.
ವಿಆರ್​ಎಲ್ (ಲಿ.) ದೇಶದ ಅತ್ಯಂತ ದೊಡ್ದ ಟ್ರಾನ್ಸ್​ಪೋರ್ಟೆಷನ್ ಸಂಸ್ಥೆಯಾಗಿದೆ. ವಿಆರ್​ಎಲ್​ ಮೀಡಿಯಾ ಗ್ರೂಪ್​ನ ‘ವಿಜಯವಾಣಿ’ ಕರ್ನಾಟಕದ ನಂ.1 ಪತ್ರಿಕೆ. ‘ದಿಗ್ವಿಜಯ ನ್ಯೂಸ್’​ ರಾಜ್ಯದ ಪ್ರಮುಖ ಸುದ್ದಿವಾಹಿನಿ. ಹಲವು ರಂಗಗಳಲ್ಲಿ ಅದ್ವಿತೀಯ ಸಾಧನೆ ಮಾಡಿರುವ ವಿಆರ್​ಎಲ್​ ಸಮೂಹ ಸಂಸ್ಥೆ ಇದೀಗ ಸಿನಿಮಾ ರಂಗದಲ್ಲೂ ತನ್ನ ಛಾಪು ಮೂಡಿಸಲು ಅಣಿಯಾಗುತ್ತಿದೆ. ಈ ಬಗ್ಗೆ ವಿಆರ್​ಎಲ್ ಸಮೂಹ ಸಂಸ್ಥೆಗಳ‌ ಎಂಡಿ ಆನಂದ ಸಂಕೇಶ್ವರ ಅವರೇ ಮಾಹಿತಿ ನೀಡಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸೋಮವಾರ ಹುಬ್ಬಳ್ಳಿಯಲ್ಲಿ ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್​ ಹಮ್ಮಿಕೊಂಡಿದ್ದ ವಾಕಥಾನ್​ ಹಾಗೂ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭದಲ್ಲಿ ಮಾತನಾಡಿದ ವಿಆರ್​ಎಲ್ ಸಮೂಹ ಸಂಸ್ಥೆಗಳ‌ ಎಂಡಿ ಆನಂದ ಸಂಕೇಶ್ವರ ಅವರು, ನಮ್ಮ‌ ತಂದೆ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಅವರ ಬಯೋಪಿಕ್ ಸಿನಿಮಾ ನಿರ್ಮಾಣವಾಗುತ್ತಿದೆ. ಏಳೆಂಟು ತಿಂಗಳಲ್ಲಿ ಸಿನಿಮಾ ತಯಾರಾಗಲಿದೆ. ವಿಆರ್​ಎಲ್ ಸಂಸ್ಥೆಯೇ ಸಿನಿಮಾ ನಿರ್ಮಾಣ ಮಾಡುವ ಚಿಂತನೆ‌ ಇದೆ‌ ಎಂದು ಘೋಷಿಸಿದರು.
ಹುಬ್ಬಳ್ಳಿಯಲ್ಲಿ ಕಳೆಗಟ್ಟಿದ ಮಹಿಳೆಯರ ಸಮಾನತೆಗಾಗಿ ನಡಿಗೆ: ವಿಆರ್​ಎಲ್​ ಮೀಡಿಯಾ ಆಯೋಜನೆ

VIDEO| ಯುವಕರೊಂದಿಗೆ ಕಬಡ್ಡಿ ಅಖಾಡಕ್ಕಿಳಿದ ನಟಿ-ರಾಜಕಾರಣಿ ರೋಜಾ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 7 =
Remember me
