ಬೆಂಗಳೂರು:ಕನ್ನಡ ಪತ್ರಿಕಾರಂಗದಲ್ಲಿ ಹೊಸ ಸಾಹಸಗಳನ್ನು ಮೆರೆದ ಪ್ರಸಿದ್ಧ ಉದ್ಯಮಿ, ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಹೆಸರಿನಲ್ಲಿ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಯಲ್ಲಿ ಮೀಡಿಯಾ ಸ್ಕೂಲ್ ಸ್ಥಾಪನೆಯಾಗಿದ್ದು, ಶೀಘ್ರದಲ್ಲೇ ಕಾರ್ಯಾರಂಭಿಸಲಿದೆ.
ಭವಿಷ್ಯದ ಪತ್ರಕರ್ತರನ್ನು ವೃತ್ತಿಪರವಾಗಿ ರೂಪಿಸುವ ರೀತಿಯಲ್ಲಿ ಕೋರ್ಸ್ ವಿನ್ಯಾಸಗೊಳಿಸಲಾಗಿದ್ದು, ಕರ್ನಾಟಕ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಒಂದು ವರ್ಷದ ಪಿಜಿ ಡಿಪ್ಲೊಮಾ ಕೋರ್ಸ್ ಇದಾಗಿದ್ದು, ಇಂದಿನ ಅಗತ್ಯಕ್ಕೆ ತಕ್ಕಂತೆ ಮುದ್ರಣ, ಡಿಜಿಟಲ್ ಹಾಗೂ ಟಿವಿ- ಈ ಮೂರೂ ಮಾಧ್ಯಮಗಳಲ್ಲಿ ವೃತ್ತಿಪರವಾಗಿ ಕಾರ್ಯನಿರ್ವಹಿಸುವ ರೀತಿ ಬೋಧನೆ ಮತ್ತು ತರಬೇತಿ ಇರಲಿದೆ. ಪ್ರಾಯೋಗಿಕ ಕಲಿಕೆಗೆ ಒತ್ತು ನೀಡಲಾಗುತ್ತದೆ ಎಂದು ವಿಶ್ವದರ್ಶನ ಎಜುಕೇಶನ್ ಸೊಸೈಟಿ ಅಧ್ಯಕ್ಷ, ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದ್ಯ ಪದವಿ ಪೂರೈಸಿರುವವರು ಅಥವಾ ಈಗ ಅಂತಿಮ ಪದವಿ ಪರೀಕ್ಷೆ ಬರೆಯುತ್ತಿರುವವರು ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 15ರಿಂದ 30ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಅಕ್ಟೋಬರ್ 1 ಮತ್ತು 2ರಂದು ಪ್ರವೇಶ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೃತ್ತಿಪರ ಬೋಧಕ ವರ್ಗದ ಜತೆಗೆ, ಮುದ್ರಣ, ಡಿಜಿಟಲ್ ಹಾಗೂ ಟಿವಿ ಮಾಧ್ಯಮಗಳಲ್ಲಿನ ಹೆಸರಾಂತ ಹಾಗೂ ನುರಿತ ಪತ್ರಕರ್ತರಿಂದಲೂ ವಿದ್ಯಾರ್ಥಿ ಗಳಿಗೆ ಮಾರ್ಗದರ್ಶನ ಮತ್ತು ತರಬೇತಿ ದೊರೆಯಲಿದೆ. ವಿವರಗಳಿಗೆ ಮೀಡಿಯಾ ಸ್ಕೂಲ್ ಪ್ರಾಂಶುಪಾಲ ನಾಗರಾಜ ಇಳೆಗುಂಡಿ (ಮೊಬೈಲ್: 8884432196) ಅಥವಾ ವಿಶ್ವದರ್ಶನ ಎಜುಕೇಶನ್ ಸೊಸೈಟಿ ಸಿಇಒ ಅಜಯ್ ಭಾರತೀಯ (ಮೊಬೈಲ್: 8904134073) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 5 =
Remember me
