ಬೆಂಗಳೂರು:ವೃಷಭಾವತಿ ನದಿ ಪುನಶ್ಚೇತನ ವಿಚಾರದಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಲಯವೇ ರಾಷ್ಟ್ರೀಯ ಪರಿಸರ ಅಧ್ಯಯನ ಸಂಶೋಧನಾ ಸಂಸ್ಥೆಯಂಥ (ನೀರಿ) ಸಂಸ್ಥೆಯೊಂದನ್ನು ನೇಮಕ ಮಾಡಲಿದೆ ಎಂದು ಹೈಕೋರ್ಟ್ ತಿಳಿಸಿದೆ.
ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಸರ್ಕಾರದ ಪರ ವಕೀಲರು, ವೃಷಭಾವತಿ ನದಿ ಮಾಲಿನ್ಯ ತಡೆ ಹಾಗೂ ಪುನಶ್ಚೇತನಕ್ಕೆ ಕೈಗೊಳ್ಳಲಾಗುವ ಕ್ರಮಗಳ ಕುರಿತು ವರದಿ ಸಲ್ಲಿಸಲು ಕಾಲಾವಕಾಶ ಕೋರಿದರು.
ಇದನ್ನೂ ಓದಿ:ನ್ಯಾಯಮೂರ್ತಿ ರಮಣ ವಿರುದ್ಧ ಆಂಧ್ರ ಸಿಎಂ ದೂರು; ಸುಪ್ರೀಂಕೋರ್ಟ್ ಮುಂದಿರುವ ಆಯ್ಕೆಗಳೇನು?
ಆಗ ನ್ಯಾಯಪೀಠ, ವೃಷಭಾವತಿ ನದಿ ಪುನಶ್ಚೇತನ ಕಾರ್ಯ ಬಿಬಿಎಂಪಿ ಅಥವಾ ಜಲಮಂಡಳಿಯಿಂದ ಸಾಧ್ಯವಿಲ್ಲ. ನದಿಗಳ ನಿರ್ವಹಣೆ ಸರ್ಕಾರದ ಜವಾಬ್ದಾರಿಯಾಗಿದೆ. ಈಗಾಗಲೇ ನದಿಗೆ ಆಗಿರುವ ಹಾನಿಯನ್ನು ಗಮನಿಸಿದರೆ ನೀರಿಯಂಥ ತಜ್ಞ ಸಂಸ್ಥೆ ನೇಮಕ ಮಾಡುವುದು ಸೂಕ್ತ. ಆದ್ದರಿಂದ, ಈ ಬಗ್ಗೆ ಸರ್ಕಾರ ಕೂಡಲೇ ಗಮನ ಹರಿಸಬೇಕು. ತಜ್ಞ ಸಂಸ್ಥೆ ನೇಮಕ ಮಾಡಲು ಸರ್ಕಾರ ಸಿದ್ಧವಿಲ್ಲ ಎಂದರೂ ನ್ಯಾಯಾಲಯವೇ ಈ ನಿಟ್ಟಿನಲ್ಲಿ ಆದೇಶ ಹೊರಡಿಸಲಿದೆ ಎಂದು ತಿಳಿಸಿ ನ.3ಕ್ಕೆ ವಿಚಾರಣೆ ಮುಂದೂಡಿತು.
ಇದನ್ನೂ ಓದಿ:‘ಹಿಂದು ಹೆಸ್ರಲ್ಲಿ ಫೇಸ್​ಬುಕ್​ ಅಕೌಂಟ್ ಕ್ರಿಯೇಟ್ ಮಾಡಿ, ಮದುವೆ ಆಗುವ ವಿಶ್ವಾಸ ವಂಚಕ ಮುಸ್ಲಿಂ ಹುಡುಗರ ವಿರುದ್ಧ ಕಠಿಣ ಕ್ರಮ ತಗೊಳ್ತೇವೆ’
ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್ ವಾದ ಮಂಡಿಸಿ, ಲಾಕ್​ಡೌನ್ ಘೋಷಣೆಯ ಬಳಿಕ ವಾಣಿಜ್ಯ ಹಾಗೂ ಕೈಗಾರಿಕಾ ಚಟುವಟಿಕೆ ಸ್ಥಗಿತಗೊಂಡ ಹಿನ್ನೆಯೆಲ್ಲಿ ವೃಷಭಾವತಿ ನದಿ ಬಹುತೇಕ ಸ್ವಚ್ಛಗೊಂಡಿತ್ತು. ಆದರೆ ಲಾಕ್​ಡೌನ್ ತೆರವುಗೊಂಡ ಬಳಿಕ ನದಿ ಸುತ್ತಲಿನ ಪ್ರದೇಶದಲ್ಲಿ ವಾಣಿಜ್ಯ ಹಾಗೂ ಕೈಗಾರಿಕಾ ಚಟುವಟಿಕೆ ಆರಂಭಗೊಂಡ ಹಿನ್ನೆಲೆಯಲ್ಲಿ ನದಿ ಮತ್ತೆ ಮಲಿನಗೊಳ್ಳುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
“ಖುರಾನ್​ ಮಾತ್ರ ಸರ್ಕಾರಿ ವೆಚ್ಚದಲ್ಲಿ ಕಲಿಸಲಾಗದು, ಮದರಸಾ ಮತ್ತು ಸಂಸ್ಕೃತ ಸ್ಕೂಲ್​ಗಳನ್ನೂ ಮುಚ್ತೇವೆ”

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 18 =
Remember me
