ಬೆಂಗಳೂರು:ವೃಷಭಾವತಿ ನದಿ ಪುನಶ್ಚೇತನಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅಧ್ಯಯನ ನಡೆಸಲು ರಾಷ್ಟ್ರೀಯ ಪರಿಸರ ಅಧ್ಯಯನ ಸಂಶೋಧನಾ ಸಂಸ್ಥೆಯನ್ನು (ನೀರಿ) ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು.
ಅದನ್ನು ಪರಿಗಣಿಸಿದ ಪೀಠ, ವೃಷಭಾವತಿ ನದಿ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ನೀರಿಯೊಂದಿಗೆ ಬಿಬಿಎಂಪಿ ಹಾಗೂ ಜಲಮಂಡಳಿ ಒಪ್ಪಂದ ಮಾಡಿಕೊಂಡು, ಸರ್ವೇ ನಡೆಸಬೇಕು. ಅದಕ್ಕೆ ತಗುಲುವ ವೆಚ್ಚವನ್ನು ಪಾಲಿಕೆ ಹಾಗೂ ಜಲಮಂಡಳಿಯೇ ಪಾವತಿಸಬೇಕು ಎಂದು ಸೂಚಿಸಿತು.
ಇದನ್ನೂ ಓದಿ:ಎರಡು ತಿಂಗಳಿಗೊಮ್ಮೆ ಪ್ರತಿ ಜಿಲ್ಲೆಯಲ್ಲಿ ಸಚಿವರ ಸಭೆ: ಪಂಚಾಯಿತಿ ಚುನಾವಣೆಗೆ ಪಂಚರತ್ನ ಪ್ರಯೋಗ
ಜತೆಗೆ, ಪಿಐಎಲ್‌ನಲ್ಲಿ ನೀರಿಯನ್ನೂ ಪ್ರತಿವಾದಿಯನ್ನಾಗಿಸುವಂತೆ ಅರ್ಜಿದಾರರಿಗೆ ಸೂಚಿಸಿದ ಪೀಠ, ಮುಂದಿನ ವಿಚಾರಣೆ ವೇಳೆ ನೀರಿ ಅಧಿಕಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ, ನದಿ ಪುನಶ್ಚೇತನಕ್ಕೆ ಅನುಸರಿಸಬಹುದಾದ ಕ್ರಮಗಳ ಕುರಿತು ತಿಳಿಸಬೇಕು. ಪ್ರಕರಣವನ್ನು ನ್ಯಾಯಾಲಯ ಮೇಲ್ವಿಚಾರಣೆ ನಡೆಸಲಿದೆ ಎಂದು ತಿಳಿಸಿ, ವಿಚಾರಣೆಯನ್ನು ನ.20ಕ್ಕೆ ಮುಂದೂಡಿತು.
ಇದನ್ನೂ ಓದಿ:ಲವ್ ಜಿಹಾದ್​ಗೆ ಸಜೆ: ಮತಾಂತರ ನಿಷೇಧ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ಒಲವು
ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್, ಕಳೆದ ವಾರ ಸುರಿದ ಭಾರಿ ಮಳೆಗೆ ವೃಷಭಾವತಿ ನದಿಯ ತಡೆಗೋಡೆಗಳು ಒಡೆದ ಪರಿಣಾಮ ರಾಜರಾಜೇಶ್ವರಿ ನಗರದ ಬಹುತೇಕ ಪ್ರದೇಶ ಮುಳುಗಡೆಯಾಗಿತ್ತು. ರಾಜಕಾಲುವೆ ಒತ್ತುವರಿ ಮಾಡಿರುವುದೇ ಇದಕ್ಕೆ ಕಾರಣ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅದಕ್ಕೆ ನ್ಯಾಯಪೀಠ, ಈ ವಿಚಾರದ ಬಗ್ಗೆಯೂ ನೀರಿ ಗಮನ ಹರಿಸಬೇಕೆಂದು ಸೂಚಿಸಿತು.
ಹೂಡಿಕೆದಾರರ ಆಧಾರ್ ದೃಢೀಕರಣ; ಸರ್ಕಾರಗಳಿಂದ ಸ್ಪಷ್ಟನೆ ಕೇಳಿದ ಹೈಕೋರ್ಟ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
