ಬೆಳಗಾವಿ:ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವದಲ್ಲಿ ಮೂವರು ಸಾಧಕರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಹಾಗೂ 700ಕ್ಕೂ ಅಧಿಕ ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು.
‘ಬೆಳಗಾಂ ಫೆರೋಕಾಸ್ಟ್ ಇಂಡಿಯಾ’ದ ವ್ಯವಸ್ಥಾಪಕ ನಿರ್ದೇಶಕ ಸಚಿನ ಸಬ್ನೀಸ್ ಹಾಗೂ ‘ವ್ಯಾಬ್ಕೋ ಇಂಡಿಯಾ ಲಿಮಿಟೆಡ್’ನ ಚೇರ್ಮನ್ ಲಕ್ಷ್ಮೀ ನಾರಾಯಣ ಅವರಿಗೆ ರಾಜ್ಯಪಾಲ ಥಾವರ್​ಚಂದ್ ಗೆಹಲೋತ್ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ‘ಟೊಯೋಟಾ ಕಿಲೋಸ್ಕರ್ ಮೋಟಾರ್’ನ ಉಪಾಧ್ಯಕ್ಷರಾಗಿದ್ದ ದಿ.ವಿಕ್ರಮ ಕಿಲೋಸ್ಕರ್ ಅವರಿಗೂ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರಕಟಿಸಲಾಯಿತು.
ಚಿನ್ನದ ಹುಡುಗ: ಬೆಂಗಳೂರಿನ ಎಸ್.ಮುರಳಿ 18 ಚಿನ್ನದ ಪದಕ ಪಡೆಯುವ ಮೂಲಕ ವಿಟಿಯು ಇತಿಹಾಸದಲ್ಲೇ ಮೊದಲಿಗರಾದರು. ಕುರಂಜಿ ವೆಂಕಟರಮನಗೌಡ ಕಾಲೇಜ್ ಆಫ್ ಇಂಜಿನಿಯರಿಂಗ್​ನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಎಸ್.ಕೃತಿ 8 ಚಿನ್ನದ ಪದಕ, ಬೆಂಗಳೂರು ಎ.ಸಿ.ಎಸ್. ಕಾಲೇಜ್ ಆಫ್ ಇಂಜಿನಿಯರಿಂಗ್ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಎಸ್.ಸ್ವಾತಿ 7 ಚಿನ್ನದ ಪದಕ ಮುಡಿಗೇರಿಸಿಕೊಂಡರು.
ಇದನ್ನೂ ಓದಿ:ಆಸ್ತಿ ಆಸೆಗೆ ಒಂದೇ ಮನೆಯ ನಾಲ್ವರ ಕೊಲೆ; ಮಕ್ಕಳಿಬ್ಬರ ಪ್ರಾಣ ಉಳಿಸಿತೇ ನಿದ್ರೆ-ಆಟ!?
ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಎಸ್.ವಿ.ಸುಶ್ಮಿತಾ 6 ಚಿನ್ನದ ಪದಕ, ಬಿ.ಎನ್.ಎಂ. ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್ ವಿಭಾಗದ ಪೂಜಾ ಬಾಸ್ಕೇರ 6, ಬೆಂಗಳೂರಿನ ಆರ್​ಎನ್​ಎಸ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಲೆಕ್ಟ್ರಾನಿಕ್ಸ್ ಆಂಡ್ ಇನ್​ಸ್ಟ್ರುಮೆಂಟೇಷನ್ ವಿಭಾಗದ ಎಂ.ಅಭಿಲಾಷ್ 4, ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇನ್ಪಮೇಷನ್ ಸೈನ್ಸ್ ಆಂಡ್ ಇಂಜಿನಿಯರಿಂಗ್ ವಿಭಾಗದ ಯುವಿಕಾ ರಮೇಶ್​ಬಾಬು 4, ಆರ್​ಎನ್ ಎಸ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಬಿಎ ವಿಭಾಗದ ಜೆ.ಹರ್ಷವರ್ಧಿನಿ 4, ಬಿಎಂಎಸ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯು.ಕೆ.ಅರ್ಜುನ್ 3 ಹಾಗೂ ದಾವಣಗೆರೆ ಯುಬಿಟಿಡಿ ಕಾಲೇಜ್ ಆಫ್ ಇಂಜಿನಿಯರಿಂಗ್​ನ ಎಂ.ಟೆಕ್ ವಿಭಾಗದ ಜಿ.ಆರ್.ಸಂಗೀತಾ 2 ಸೇರಿ ವಿವಿಧ ವಿಭಾಗಗಳಲ್ಲಿ ಉತ್ಕೃಷ್ಟ ಅಂಕಸಾಧನೆ ಮಾಡಿದ 10 ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದರು.
ಇದನ್ನೂ ಓದಿ:ಪತಿ ಹೃದಯಾಘಾತಕ್ಕೆ ಬಲಿ; ಒಂದೇ ಉರುಳಿಗೆ ಮಗನೊಂದಿಗೆ ಕೊರಳೊಡ್ಡಿ ಪ್ರಾಣ ಬಿಟ್ಟ ಪತ್ನಿ
ಘಟಿಕೋತ್ಸವದಲ್ಲಿ ಒಟ್ಟು 53,415 ವಿದ್ಯಾರ್ಥಿಗಳಿಗೆ ಬಿಇ ಹಾಗೂ ಬಿ.ಟೆಕ್ ಪದವಿ, 1045 ಬಿಇ ಆರ್ಕಿಟೆಕ್ಟರ್ ಪದವಿ, 9 ಬಿ.ಪ್ಲಾ್ಯನ್ ಪದವಿ, 4279 ಎಂಬಿಎ ಪದವಿ, 2032 ಎಂಸಿಎ, 1366 ಎಂ.ಟೆಕ್ ಪದವಿ, 82 ಎಂ.ಆರ್ಕಿಟೆಕ್ಚರ್ ಪದವಿ, 1 ಪಿಜಿ ಡಿಪ್ಲೊಮಾ ಪದವಿ, 2 ಎಂಎಸ್ಸಿ ಇಂಜಿನಿಯರಿಂಗ್ ಪದವಿ, ನಾಲ್ವರು ವಿದ್ಯಾರ್ಥಿಗಳಿಗೆ ಡಬಲ್ ಡಿಗ್ರಿ ಪದವಿ ಹಾಗೂ 700ಕ್ಕೂ ಅಧಿಕ ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಆಲ್​ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್ ಚೇರ್ಮನ್ ಪ್ರೊ.ಟಿ.ಜಿ.ಸೀತಾರಾಮ ಹಾಗೂ ವಿಟಿಯು ಕುಲಪತಿ ಎಸ್.ವಿದ್ಯಾಶಂಕರ ಸೇರಿ ವಿಶ್ವವಿದ್ಯಾಲಯದ ಕುಲಸಚಿವರು ಇದ್ದರು.
ಎಸ್​​ಎಸ್​ಎಲ್​ಸಿ ಪರೀಕ್ಷಾರ್ಥಿಗಳಿಗಾಗಿ ರೇಡಿಯೋ ‘ಬಾನ್‌ದನಿ’ ಪ್ರಸಾರ; ಎಂದಿನಿಂದ ಎಲ್ಲಿಯವರೆಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
