ಬೆಂಗಳೂರು:ಇಂಜಿನಿಯರಿಂಗ್ ಕೋರ್ಸ್‍ನ ಪ್ರಥಮ ವರ್ಷದ ಪರೀಕ್ಷೆಗಳು ಈಗಾಗಲೆ ಆರಂಭವಾಗಿ ನಡೆಯುತ್ತಿದ್ದು, ಕರೊನಾ ಕಾರಣದಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಮುಂದಿನ ಪರೀಕ್ಷೆ ತೆಗೆದುಕೊಳ್ಳುವಾಗ ಪ್ರಥಮ ಅವಕಾಶವೆಂದು ಪರಿಗಣಿಸಲಾಗುವುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ತಿಳಿಸಿದೆ.
ಪರೀಕ್ಷೆಗಳು ಮತ್ತು ತರಗತಿಗಳು ಏ.19ರಿಂದ ಆರಂಭವಾಗಿವೆ. ಪ್ರತಿ ನಿತ್ಯ ಶೇ.98 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಆದರೆ, ಕರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ವೇಳೆ ಕರೊನಾ ದೃಢಪಟ್ಟ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಆದರೆ, ಕೆಲವು ವಿದ್ಯಾರ್ಥಿಗಳು ಹಾಜರಾಗಲು ಸಾಧ್ಯವಾಗದೇ ಇದ್ದರೆ, ಅಂತಹ ವಿದ್ಯಾರ್ಥಿಗಳಿಗೆ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ವೇಳೆಗೆ ದ್ವಿತೀಯ ಅವಕಾಶದ ಬದಲಾಗಿ ಪ್ರಥಮ ಅವಕಾಶವೆಂದು ಪರಿಗಣಿಸಲು ನಿರ್ಧರಿಸಲಾಗಿದೆ ಎಂದು ವಿಟಿಯು ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸವುದು ಕಷ್ಟ. ಈಗಾಗಲೇ ನಾಲ್ಕು ತಿಂಗಳು ತಡವಾಗಿ ಪರೀಕ್ಷೆಗಳನ್ನು ಆಯೋಜಿಸಲಾಗುತ್ತಿದೆ. ಇದು ಮುಂದೆ ಶೈಕ್ಷಣಿಕ ಅವಧಿ ವ್ಯತ್ಯಾಸಕ್ಕೂ ಎಡೆಮಾಡಿಕೊಡಲಿದೆ ಎಂಬುದನ್ನು ಮನಗಂಡು ಪರೀಕ್ಷೆ ನಡೆಸುತ್ತಿದ್ದೇವೆ. ವಿದ್ಯಾರ್ಥಿಗಳಿಗೆ ಸದ್ಯ ನೀಡುವ ಅವಕಾಶವನ್ನು ದುರುಪಯೋಗ ಮಾಡಿಕೊಳ್ಳಬಾರದು. ಮಾಡಿಕೊಂಡಲ್ಲಿ ವಿದ್ಯಾರ್ಥಿಗಳಿಗೆ ನಷ್ಟವಾಗಲಿದೆ. ಏಕೆಂದರೆ, ಒಂದೇ ಸಮಯದಲ್ಲಿ ಹೆಚ್ಚಿನ ವಿಷಯಗಳ ಪರೀಕ್ಷೆ ಬರೆಯವುದು ಕಷ್ಟವಾಗಬಹುದು. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುವುದು ಸೂಕ್ತ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭೀಕರವಾಗುತ್ತಿದೆ ಕರೊನಾ ಎರಡನೆಯ ಅಲೆ: ಚಿತ್ರರಂಗದ ಇನ್ನೋರ್ವ ತಾರೆ ವೈರಸ್‌ಗೆ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − seven =
Remember me
