ಬೆಂಗಳೂರು:ವಕ್ಪ್ ಆಸ್ತಿ ದುರ್ಬಳಕೆ ಕುರಿತಂತೆ ಲೋಕಾಯುಕ್ತ ತನಿಖೆಯ ಮಧ್ಯಂತರ ವರದಿಯನ್ನು ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ಮಂಡಿಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಾಜ್ಯ ವಕ್ಪ್ ಮಂಡಳಿ ಮತ್ತು ಜವಳಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಸಚಿವರಿಗೆ ಈ ಸೂಚನೆ ನೀಡಿದ್ದಾರೆ.
ವಕ್ಪ್ ಆಸ್ತಿಗಳ ದುರ್ಬಳಕೆ, ಒತ್ತುವರಿ ಬಗ್ಗೆ ಅನ್ವರ್ ಮಾಣಿಪ್ಪಾಡಿ ವರದಿಯನ್ವಯ ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು. ಲೋಕಾಯುಕ್ತರು ಮಧ್ಯಂತರ ವರದಿ ಸಲ್ಲಿಸಿದ್ದು, ಅದನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಂಪುಟ ಅನುಮೋದಿಸಿದೆ. ಹೀಗಾಗಿ ಮುಂದಿನ ಅಧಿವೇಶನದಲ್ಲಿ ವರದಿ ಮಂಡಿಸುವಂತೆ ಸಿಎಂ ತಿಳಿಸಿದರು.
ಹಜ್ ಯಾತ್ರೆ ಡೌಟ್?
ಕರೊನಾ ಹಿನ್ನೆಲೆಯಲ್ಲಿ ಹಜ್ ಯಾತ್ರೆ ಕುರಿತು ಸೌದಿ ಅರೇಬಿಯಾದಿಂದ ಯಾವುದೇ ಮಾಹಿತಿ ಸ್ವೀಕೃತಿಯಾಗಿಲ್ಲ. ಹೀಗಾಗಿ 2020ರ ಯಾತ್ರೆಗೆ ಆಯ್ಕೆಯಾದವರು ತಮ್ಮ ಮುಂಗಡ ಹಣ ಹಿಂಪಡೆಯಲು ಸರ್ಕಾರ ಅವಕಾಶ ಕಲ್ಪಿಸಿದೆ.
ನೇಕಾರ ಸಮ್ಮಾನ್ ಯೋಜನೆಯಡಿ ಪ್ರತಿ ವರ್ಷದ 2000 ರೂ. ಆರ್ಥಿಕ ನೆರವಿಗಾಗಿ ಆನ್​ಲೈನ್​ನಲ್ಲಿ 18991 ಅರ್ಜಿಗಳು ಸ್ವೀಕೃತವಾಗಿದ್ದು, ಶೀಘ್ರವೇ ನೇಕಾರರಿಗೆ ನೆರವು ತಲುಪಿಸುವಂತೆ ಹಾಗೂ ಮೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮೂವರು ನೇಕಾರರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲು ಅಧಿಕಾರಿಗಳು ಸೂಚಿಸಿದರು.
ಇದನ್ನೂ ಓದಿ:ಕೋವಿಡ್ ಕಂಟಕ: ಐದನೆಯ ಆರ್ಥಿಕ ಹಿಂಜರಿತ ಎದುರಿಸುತ್ತಿದೆ ಭಾರತ
ಉಚಿತ ಸೀರೆ:ಲಾಕ್​ಡೌನ್​ನಿಂದಾಗಿ ಮಾರಾಟವಾಗದೆ ಉಳಿದಿರುವ ವಿದ್ಯುತ್ ಮಗ್ಗದ ಸೀರೆಗಳ ದಾಸ್ತಾನು ಖರೀದಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ವಿತರಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೂಚಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಬೇಡಿ:ಆರ್ಥಿಕ ಸಮಸ್ಯೆ ಇದ್ದಾಗ್ಯೂ ವಿದ್ಯಾರ್ಥಿವೇತನ ಸ್ಥಗಿತಗೊಳಿಸದಂತೆ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಿಎಸ್​ವೈಗೆ, ಇಲಾಖಾ ಕಾರ್ಯಕ್ರಮ ಅನುಷ್ಠಾನದಲ್ಲಿ 2019-20ನೇ ಸಾಲಿನಲ್ಲಿ ಶೇ.97 ಆರ್ಥಿಕ ಪ್ರಗತಿ ಸಾಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇಲಾಖೆಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾಪೂರ್ವ ತರಬೇತಿ ಪಡೆದ ಅಭ್ಯರ್ಥಿಗಳಲ್ಲಿ ಒಟ್ಟು 268 ಮಂದಿ ಪರೀಕ್ಷೆಗಳಲ್ಲಿ ಆಯ್ಕೆಯಾಗಿ ವಿವಿಧ ಸೇವೆಗಳಿಗೆ ಸೇರಿದ ಬಗ್ಗೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.
ಚೀನಾ-ಭಾರತ ಸಂಘರ್ಷ: ಭಾರತದ 20 ಯೋಧರು ಹುತಾತ್ಮ, 40ಕ್ಕೂ ಹೆಚ್ಚು ಚೀನಾ ಯೋಧರೂ ಹತರಾಗಿರುವ ಶಂಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
