ಬೆಂಗಳೂರು:ರಾಜ್ಯದಲ್ಲಿ ಚಳಿಗಾಲದಲ್ಲೂ ಬಿಸಿಲಿನ ಝುಳ ಶುರುವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಸರಾಸರಿ 2-5 ಡಿಗ್ರಿ ಸೆಲ್ಸಿಯಸ್​ಗೂ ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರಲಿದೆ.
ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕೆಂಡದಂಥ ವಾತಾವರಣ ಉಂಟಾಗುವ ಸಾಧ್ಯತೆ ಇದ್ದು, ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲೂ ಬಿರುಬಿಸಿಲು ಕಾಣಿಸಿಕೊಳ್ಳಲಿದೆ. ಮಳೆ ಮನ್ಸೂಚನೆ ಇಲ್ಲದಿರುವುದು, ವಾತಾವರಣದಲ್ಲಿ ತೇವಾಂಶ ಕಡಿಮೆ ಸೇರಿ ಇತರ ಕಾರಣಗಳಿಂದ ಸೆಕೆ ಅನುಭವವಾಗುತ್ತಿದೆ. ಭಾನುವಾರ ಗೋಕರ್ಣ ಮತ್ತು ಕಾರವಾರದಲ್ಲಿ ಗರಿಷ್ಠ ತಾಪಮಾನ 36.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಲಬುರಗಿ 34.4, ಹೊನ್ನಾವರ 33.7, ಮಂಗಳೂರು ಮತ್ತು ಗದಗದಲ್ಲಿ 33.2, ರಾಯಚೂರು 32.6, ಬಾದಮಿ 32.3, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆಯಲ್ಲಿ 32.2, ಚಿತ್ರದುರ್ಗ, ಮಂಡ್ಯ ಮತ್ತು ಮೈಸೂರಿನಲ್ಲಿ 32, ಬೆಂಗಳೂರಲ್ಲಿ 30 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಹಿಂಗಾರು ಮಳೆ ಕುಂಠಿತ:ರಾಜ್ಯದಲ್ಲಿ ಈ ಬಾರಿ ನೈಋತ್ಯ ಮುಂಗಾರು ಮಳೆ ಕೈಕೊಟ್ಟಿದೆ. ಅ.1ರಿಂದ ಆರಂಭವಾಗಿರುವ ಈಶಾನ್ಯ ಮಾನ್ಸೂನ್ (ಹಿಂಗಾರು ಮಳೆ) ಸಹ ದುರ್ಬಲಗೊಂಡಿದೆ. ಅ.1ರಿಂದ ಡಿ.31ರವರೆಗೆ ಹೆಚ್ಚು ಸೈಕ್ಲೋನ್ ರೂಪುಗೊಳ್ಳಬೇಕಿತ್ತು. ಆದರೆ, ಈ ಬಾರಿ ಅಂಥ ವಾತಾವರಣವೂ ಉಂಟಾಗುವ ಲಕ್ಷಣ ಗೋಚರಿಸುತ್ತಿಲ್ಲ. ಅ.1ರಿಂದ ಅ.29ರವರೆಗೆ ವಾಡಿಕೆಯಂತೆ 126 ಮಿ.ಮೀ. ಮಳೆ ಬದಲಾಗಿ 41 ಮಿ.ಮೀ. ಮಾತ್ರ ಬಿದ್ದಿದ್ದು, ಶೇ.67 ಮಳೆ ಕೊರತೆ ಉಂಟಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆ ಕುಂಠಿತಗೊಂಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ 3 ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಉ.ಕ. ಜನ ಎಚ್ಚರಿಕೆ ವಹಿಸಿ:ದಕ್ಷಿಣ ಕರ್ನಾಟಕ ಜಿಲ್ಲೆಗಳಿಗಿಂತ ಪ್ರತಿ ವರ್ಷದಂತೆ ಈ ಬಾರಿಯೂ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಧಾರವಾಡ, ಕೊಪ್ಪಳ, ಗದಗ, ಬಳ್ಳಾರಿ, ಹಾವೇರಿ, ದಾವಣಗೆರೆ ಹಾಗೂ ಚಿತ್ರದುರ್ಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ಮುಂಗಾರು ಮಳೆ ಕೊರತೆ ಅನುಭವಿಸಿದ್ದ ಉತ್ತರ ಕರ್ನಾಟಕದಲ್ಲಿ, ಹಾಲಿ ಹಿಂಗಾರಿನಲ್ಲಿ ಶೇ.91 ಮಳೆ ಕುಂಠಿತಗೊಂಡಿದ್ದು, ಬಿಸಿಗಾಳಿ ಬೀಸಲಿದೆ. ಹಾಗಾಗಿ ಜನರು ಎಚ್ಚರಿಕೆಯಿಂದಿರಬೇಕು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ವಿವಿಧೆಡೆ ಮಳೆ:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ನಾನಾ ಕಡೆ ಶನಿವಾರ ರಾತ್ರಿ, ಭಾನುವಾರ ಸಾಧಾರಣ ಮಳೆಯಾಗಿದೆ. ಬೆಳಗ್ಗೆ ಬೆಳ್ತಂಗಡಿ, ಚಾರ್ವಡಿ, ಧರ್ಮಸ್ಥಳ, ಪುತ್ತೂರು ಭಾಗದಲ್ಲಿ ಮಳೆಯಾಗಿದೆ. ಮುಂದಿನ ಎರಡು ದಿನ ಕರಾವಳಿಯಲ್ಲಿ
ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶನಿವಾರ ರಾತ್ರಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದ್ದು ಹೆಚ್ಚಿನ ಹಾನಿ ಸಂಭವಿಸಿಲ್ಲ. ಬೆಂಗಳೂರಿನ ಕೆಲವೆಡೆ ಭಾನುವಾರ ಸಂಜೆ ಕೆಲಕಾಲ ಮಳೆ ಬಿದ್ದಿದೆ.
ವಾರಕ್ಕೆ 55 ಗಂಟೆ ಅಥವಾ ಅದಕ್ಕೂ ಹೆಚ್ಚು ಕೆಲಸ ಮಾಡುವುದು ಆರೋಗ್ಯಕ್ಕೆ ಅಪಾಯಕಾರಿ: ಅಧ್ಯಯನದ ವಿವರ ಇಲ್ಲಿದೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + four =
Remember me
