ಬೆಂಗಳೂರು:ಹಸಿ ಮೀನು ಮಾರುವವರಿಗೆ ನೀಡಿರುವ ಎಚ್ಚರಿಕೆ ಫಲಕದ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅದು ವೈರಲ್ ಕೂಡ ಆಗಲಾರಂಭಿಸಿದೆ. ಅಷ್ಟಕ್ಕೂ ಇಂಥದ್ದೊಂದು ಎಚ್ಚರಿಕೆಯನ್ನು ಹಸಿ ಮೀನು ವ್ಯಾಪಾರಸ್ಥರ ಸಂಘವೊಂದು ನೀಡಿದೆ.
ಈದ್ ಮಿಲಾದ್ ದಿನವಾದ ಸೆ. 28ರಂದು ಮೀನು ಮಾರಾಟ ಮಾಡಬಾರದು, ಅಂದು ವ್ಯಾಪಾರಸ್ಥರು ಕಡ್ಡಾಯವಾಗಿ ರಜೆ ಮಾಡಬೇಕು ಎಂದು ಮಂಗಳೂರಿನ ಸೌತ್​ವಾರ್ಫ್​ ಬಂದರು ಪ್ರದೇಶದ ಹಸಿ ಮೀನು ವ್ಯಾಪಾರಸ್ಥರ ಸಂಘ ಸಂದೇಶ ರವಾನಿಸಿದೆ. ಮಾತ್ರವಲ್ಲ, ಈ ಕುರಿತು ದೊಡ್ಡದೊಂದು ಬ್ಯಾನರ್ ಕೂಡ ಹಾಕಿದೆ. ಇದೀಗ ಈ ಬ್ಯಾನರ್ ಫೋಟೋ ಎಲ್ಲೆಡೆ ಹರಿದಾಡಲಾರಂಭಿಸಿದ್ದು, ಚರ್ಚೆಗೆ ಒಳಗಾಗುತ್ತಿದೆ.
ಸೆ. 28ರ ಬೆಳಗ್ಗೆ 3.45ರ ನಂತರ ಹಸಿ ಮೀನು ವ್ಯಾಪಾರಿಗಳು ವ್ಯಾಪಾರ ಮಾಡದೆ ಕಡ್ಡಾಯವಾಗಿ ರಜೆ ಮಾಡಬೇಕು. ಒಂದು ವೇಳೆ ರಜೆ ಮಾಡದಿದ್ದರೆ ಅಂಥವರು ಒಂದು ತಿಂಗಳ ಕಾಲ ಬಂದರು ಧಕ್ಕೆಯಲ್ಲಿ ವ್ಯಾಪಾರ ಮಾಡದಂತೆ ಕಾನೂನುಕ್ರಮ ಕೈಗೊಳ್ಳುವ ಜೊತೆಗೆ ದಂಡನೆಯನ್ನು ವಿಧಿಸಬೇಕಾಗುತ್ತದೆ. ಅಲ್ಲದೆ ಸಂಘದ ಯಾವುದೇ ಸಹಕಾರದಿಂದ ವಂಚಿತರಾಬೇಕಾಗುತ್ತದೆ ಎಂದು ಹಸಿ ಮೀನು ವ್ಯಾಪಾರಸ್ಥರ ಸಂಘ ಎಚ್ಚರಿಕೆ ನೀಡಿದೆ.

ವಾರವಿಡೀ ಹುಡುಕಾಡಿದರೂ ನಾಪತ್ತೆಯಾದವ ಸಿಗಲಿಲ್ಲ; ಒಂದು ಕಲ್ಲಿಗೆ ಪೂಜೆ ಮಾಡುತ್ತಿದ್ದಂತೆ ಆತ ಮನೆಗೆ ಮರಳಿದ!

ಪ್ರವೇಶ ಇರದಿದ್ದರೂ ಬುಲೆಟ್​ನಲ್ಲಿ ಬಂದ ಯುವತಿಯ ರೋಷಾವೇಶ; ಪೊಲೀಸರಿಗೂ ಡೋಂಟ್ ಕೇರ್, ಕೊನೆಗೂ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − four =
Remember me
