ಬೆಂಗಳೂರು:ತೋಟಗಾರಿಕೆ ಮತ್ತು ಯೋಜನಾ ಸಚಿವ ಮುನಿರತ್ನ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಪ್ರಕರಣದ ಸಂಬಂಧ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸೇರಿ 19 ಮಂದಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನುರಹಿತ ವಾರಂಟ್ (ಎನ್‌ಬಿಡಬ್ಲ್ಯು) ಜಾರಿ ಮಾಡಿದೆ.
ಸಚಿವ ಮುನಿರತ್ನ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ 8ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಎಲ್ಲ ಆರೋಪಿಗಳಿಗೆ ಎನ್‌ಬಿಡಬ್ಲ್ಯು ಜಾರಿಗೊಳಿಸಿ, ವಿಚಾರಣೆಯನ್ನು 2023ರ ಜ.19ಕ್ಕೆ ಮುಂದೂಡಿದ್ದಾರೆ.
ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ, ಉಪಾಧ್ಯಕ್ಷರಾದ ವಿ.ಕೃಷ್ಣ ರೆಡ್ಡಿ, ಕಾರ್ಯದರ್ಶಿ ಜಿ.ಎಂ. ರವೀಂದ್ರ ಮತ್ತು ಖಜಾಂಚಿ ಎಚ್.ಎಸ್. ನಟರಾಜ್ ಸೇರಿ ಪ್ರಕರಣದ ಇನ್ನಿತರ ಆರೋಪಿಗಳು ದೂರುದಾರ ಮುನಿರತ್ನ ವಿರುದ್ಧ ನೀಡಿರುವ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಅದು ದೂರುದಾರರ ವರ್ಚಸ್ಸಿಗೆ ಮೇಲ್ನೋಟಕ್ಕೆ ಧಕ್ಕೆ ಉಂಟು ಮಾಡಿದೆ ಎಂದು 2022ರ ನ.16ರಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.
ಜತೆಗೆ, ಕೆಂಪಣ್ಣ ಸೇರಿ ಎಲ್ಲ 19 ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿ, ವಿಚಾರಣೆಯನ್ನು ಡಿ.22ಕ್ಕೆ ಮುಂದೂಡಿತ್ತು. ಗುರುವಾರ (ಡಿ.22ರಂದು) ಮತ್ತೆ ಪ್ರಕರಣ ವಿಚಾರಣೆಗೆ ಬಂದಾಗ ಆರೋಪಿಗಳು ವಿಚಾರಣೆಗೆ ಗೈರಾಗಿದ್ದರು. ಇದರಿಂದ, ನ್ಯಾಯಾಲಯ ಎನ್‌ಬಿಡಬ್ಲ್ಯು ಜಾರಿ ಮಾಡಿದೆ.
ಉಂಗುರದಲ್ಲೇ ಸಿಂಹ-ಸಿಂಹಿಣಿ: ಹರಿಪ್ರಿಯಾಗೆ ವಸಿಷ್ಟ ಯಾಕಿಷ್ಟ?

ಮನೆಗಳ ಸಮೀಪದ ತೆರೆದ ಜಾಗದಲ್ಲಿ ಶವಸಂಸ್ಕಾರ; ನಿವಾಸಿಗರಿಗೆ ಕೋವಿಡ್ ಭಯ

ಕರೊನಾ ರೋಗಿಗಳನ್ನು ನೋಡುತ್ತಲೇ ಸುಸ್ತಾಗಿ ಕುಸಿದುಬಿದ್ದ ಡಾಕ್ಟರ್​: ವಿಡಿಯೋ ವೈರಲ್

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:20 + twenty =
Remember me
