ಬೆಂಗಳೂರು:ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಹಾಗೂ ಅವರ ಆಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಂಡಂತೆ ಹೊಸ ವಿಚಾರಗಳು ಹೊರ ಬರುತ್ತಿವೆ. ಪ್ರಕರಣದ ವಿಚಾರಣೆ ತೀವ್ರಗೊಂಡಂತೆ ಡಿ ಗ್ಯಾಂಗ್​ನ ಕರಾಳ ಮುಖ ಬೆಳಕಿಗೆ ಬರುತ್ತಿದ್ದು, ರೇಣುಕಸ್ವಾಮಿಗೆ ಹೇಗೆಲ್ಲಾ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ.
ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಹಾಗೂ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳನ್ನು 9 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೋರಿ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಾದ-ಪ್ರತಿವಾದವನ್ನು ಆಲಿಸಿದ ಬಳಿಲ ಐದು ದಿನಗಳ ಕಾಲ ಕಸ್ಟಡಿ ಅವಧಿ ವಿಸ್ತರಿಸಿ ಆದೇಶಿಸಿದ್ದಾರೆ ಇನ್ನು ಕೋರ್ಟ್​ ವಿಚಾರಣೆ ವೇಳೆ ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರಾಗಿ ನೇಮಕವಾಗಿರುವ ಪ್ರಸನ್ನಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಗಮನಕ್ಕೆ ವಿಚಾರ ಒಂದನ್ನು ತಂದಿದ್ದು, ಡಿ ಗ್ಯಾಂಗ್​ನ ಕರಾಳ ಮುಖ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಪಾಕ್ ಆಟಗಾರರು 10 ನಿಮಿಷದಲ್ಲಿ 2 ಕಿ.ಮೀ ಕ್ರಮಿಸುತ್ತಾರೆ; ಮಾಜಿ ಆಟಗಾರನ ಹೇಳಿಕೆ ವೈರಲ್
ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳು ರೇಣುಕಸ್ವಾಮಿಗೆ ಕರೆಂಟ್​ ಶಾಕ್​ ನಿಡಿದ್ದು, ಹತ್ಯೆ ನಡೆದ ಜಯಣ್ಣ ಶೆಡ್​ನಲ್ಲಿದ್ದ ಮೆಗ್ಗರ್​​ ಯಂತ್ರವನ್ನು ಪೊಲೀಸರು ವಶಪಡಿಸಕೊಳ್ಳಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ ಕೆಲವೆಡೆ ಮಹಜರು ಮಾಡಬೇಕಿದ್ದು, ಆರೋಪಿಯ ಬಟ್ಟೆ, ಚಪ್ಪಲಿ ಸೇರಿಚಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಬೇಕಿದೆ. ಹೀಗಾಗಿ ನ್ಯಾಯಾಲಯ ತಮ್ಮ ಮನವಿಯನ್ನು ಪುರಸ್ಕರಿಸುವಂತೆ ವಕೀಲ ಪ್ರಸನ್ನಕುಮಾರ್​ ಮನವಿ ಮಾಡಿದ್ದಾರೆ.
ರೇಣುಕಾ ಸ್ವಾಮಿಯ ಮರ್ಮಾಂಗಕ್ಕೆ ಹಲ್ಲೆ ಮಾಡಲಾಗಿದೆ, ಕೃಷ ದೇಹಿಯಾಗಿದ್ದ ರೇಣುಕಾ ಸ್ವಾಮಿಯನ್ನು ಎತ್ತಿ ಗೋಡೆಗೆ ಹೊಡೆಯಲಾಗಿದೆ, ಸಿಗರೇಟಿನಿಂದ ದೇಹದ ಮೇಲೆ ಸುಡಲಾಗಿದೆ. ತಲೆಯನ್ನು ಬಲವಾಗಿ ಟ್ಯಾಂಕರ್ ವಾಹನಕ್ಕೆ ಹೊಡೆಯಲಾಗಿದೆ. ಇದೆಲ್ಲದರ ಬಳಿಕ ಶೆಡ್​ನಲ್ಲಿ ಕೆಲಸ ಮಾಡುತ್ತಿದ್ದ ಮೂವರು ಅಮಾಯಕ ಕೂಲಿ ಕೆಲಸದವರನ್ನು ಪುಸಲಾಯಿಸಿ ಹತ್ಯೆ ಆರೋಪವನ್ನು ಒಪ್ಪಿಕೊಳ್ಳುವಂತೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಅಂತಿಮವಾಗಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ ಬಳಿಕ ಸತ್ಯಾಸತ್ಯತೆ ತಿಳಿದು ಬರಲಿದೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:nine + eighteen =
Remember me
