ಬೆಂಗಳೂರು:ರಾಜ್ಯದ ಪೌರಸಂಸ್ಥೆಗಳಲ್ಲಿ ದಿನದ 24 ಗಂಟೆಗಳ ಕಾಲ ಕುಡಿಯುವ ನೀರು ಸರಬರಾಜು ಮಾಡಲು ಜಾರಿಗೆ ತರುತ್ತಿರುವ ಅಮೃತ ಯೋಜನೆಯಡಿ ನಲ್ಲಿ ಸಂಪರ್ಕ ಪಡೆಯುವ ನಿಯಮಗಳನ್ನು ಸರಳೀಕರಣ ಮಾಡಲು ಸರ್ಕಾರ ಮುಂದಾಗಿದೆ.
ಪೌರಸಂಸ್ಥೆಗಳಲ್ಲಿ ನಲ್ಲಿ ಸಂಪರ್ಕಕ್ಕೆ ಈಗ ಹೆಚ್ಚಿನ ಪ್ರಮಾಣದ ದಾಖಲೆಗಳನ್ನು ಸಲ್ಲಿಸಬೇಕಾಗಿದೆ. ಅದರ ಬದಲು ಆಧಾರ್ ಮತ್ತು ಪ್ರಮಾಣಪತ್ರ ಸಲ್ಲಿಸಿದರೆ ಸಾಕು ಎಂಬ ನಿಯಮ ಜಾರಿ ಮಾಡಲಾಗುವುದು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜು ತಿಳಿಸಿದ್ದಾರೆ. ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದರೆ ಅಂತಹವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ. ಸೂಕ್ತ ದಾಖಲೆ ಹೊಂದಿರದ ಮನೆ ಮಾಲೀಕರು, ಬಾಡಿಗೆದಾರರು, ಸರ್ಕಾರಿ ಜಮೀನಿನಲ್ಲಿ ಮನೆಗಳನ್ನು ನಿರ್ವಿುಸಿಕೊಂಡಿರುವವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಿಯಮಗಳ ಸರಳೀಕರಣ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯದ ಜಂಟಿ ವಂತಿಕೆಯಿಂದ ಸ್ವಚ್ಛ ಭಾರತ-2 ರ ಯೋಜನೆಯನ್ನು 310 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 2046.65 ಕೋಟಿ ರೂ. ಗಳ ವೆಚ್ಚದಲ್ಲಿ ಜಾರಿಗೆ ತರಲಾಗುತ್ತಿದೆ. ಕುಡಿಯುವ ನೀರು ಸರಬರಾಜು ಮಾಡುವ ಅಮೃತ-2 ಯೋಜನೆಯಲ್ಲಿ 9000 ಕೋಟಿ ರೂ. ಗಳಿಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಈ ಯೋಜನೆಯಲ್ಲಿ ಪೈಪ್​ಲೈನ್​ಗಳ ಅಳವಡಿಕೆ, ನೆಲಮಟ್ಟದ ಜಲಾಗಾರ, ಓವರ್​ಹೆಡ್ ಟ್ಯಾಂಕ್​ಗಳ ನಿರ್ವಣ, ಜಲಮೂಲಗಳ ಸಂರಕ್ಷಣೆ ಸೇರಿರುತ್ತದೆ ಎಂದು ಸಚಿವ ಎಂಟಿಬಿ ನಾಗರಾಜು ವಿವರಿಸಿದ್ದಾರೆ.
ಪದೋನ್ನತಿ:ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2 ದಶಕಗಳ ನಂತರ ಅಂತಿಮಗೊಳಿಸಲಾಗಿದೆ. ಇದರಿಂದ 27 ಕಂದಾಯ ಅಧಿಕಾರಿಗಳಿಗೆ ಗ್ರೇಡ್-1 ಮುಖ್ಯಾಧಿಕಾರಿ ಹುದ್ದೆಗೆ, 16 ಗ್ರೇಡ್-2 ಮುಖ್ಯಾಧಿಕಾರಿಗಳಿಗೆ ಗ್ರೇಡ್-1ಗೆ ಪದೋನ್ನತಿ ಸಿಗಲಿದೆ. ಮುಖ್ಯಮಂತ್ರಿ ಅಮೃತ ನಗರೋತ್ಥಾನ -4 ರ ಯೋಜನೆಯಡಿಯಲ್ಲಿ ರಾಜ್ಯದ 302 ಪೌರಸಂಸ್ಥೆಗಳಿಗೆ ಒಟ್ಟು 3885 ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಶೀಘ್ರದಲ್ಲಿ ಟೆಂಡರ್ ಕರೆಯಲಾಗುತ್ತದೆ. ಅಮೃತ ನಗರೋತ್ಥಾನ ಯೋಜನೆಯ ಅವಧಿಯನ್ನು 3 ವರ್ಷದಿಂದ ಎರಡು ವರ್ಷಕ್ಕೆ ತಗ್ಗಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎಲ್ಲ ರೀತಿಯ ತೆರಿಗೆಗಳನ್ನು ಇ-ಪೇಮೆಂಟ್ ಮೂಲಕ ಪಾವತಿ ಮಾಡಲು ಅನುಕೂಲ ಮಾಡಿಕೊಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ನೇರ ನಗದು:ಪೌರಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಟ್ರಕ್ ಲೋಡರ್​ಗಳು, ಚಾಲಕರು, ವಾಟರ್​ವೆುನ್, ವಾಲ್​ವೆುನ್, ಎಲೆಕ್ಟ್ರಿಷಿಯನ್​ಗಳು ಹಾಗೂ ಇತರೆ ಸಿಬ್ಬಂದಿಯನ್ನು ಹಂತ-ಹಂತವಾಗಿ ನೇರ ನಗದು ಪಾವತಿ ವ್ಯಾಪ್ತಿಗೆ ತರಲಾಗುತ್ತದೆ. ಆರ್ಥಿಕ ಇಲಾಖೆಯ ಅನುಮತಿಯನ್ನು ಶೀಘ್ರದಲ್ಲಿಯೇ ಪಡೆದುಕೊಳ್ಳಲಾಗುವುದು ಎಂದು ಸಚಿವ ಎಂಟಿಬಿ ನಾಗರಾಜು ಹೇಳಿದ್ದಾರೆ.
ಟೆಲಿಕಾಂ ನೀತಿ:ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಓಎಫ್​ಸಿ ಕೇಬಲ್ ಹಾಗೂ ಮೊಬೈಲ್ ಟವರ್​ಗಳನ್ನು ಅಳವಡಿಸಲು ಅನುಕೂಲವಾಗುವಂತೆ ಪ್ರಥಮವಾಗಿ ಟೆಲಿಕಾಂ ನೀತಿ ತರಲಾಗುತ್ತಿದೆ. ಇದರಿಂದಾಗಿ ಸಂಪರ್ಕ ವ್ಯವಸ್ಥೆ ಉತ್ತಮಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ಇ-ವಾಹನ ಉತ್ತೇಜನ:ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿದ್ಯುತ್ ವಾಹನಗಳ ಬಳಕೆ ಹೆಚ್ಚಿಸಲು ಹೊಸ ನೀತಿಯನ್ನು ಶೀಘ್ರದಲ್ಲಿ ಸಚಿವ ಸಂಪುಟದ ಮುಂದೆ ಮಂಡಿಸಿ, ಜಾರಿಗೆ ತರಲಾಗುವುದು ಎಂದು ಸಚಿವ ನಾಗರಾಜು ಹೇಳಿದ್ದಾರೆ. ಇದರಿಂದ ವಿದ್ಯುತ್ ವಾಹನಗಳ ಬಳಕೆ ಹೆಚ್ಚಾಗಲಿದ್ದು, ವಾಯುಮಾಲಿನ್ಯ ತಗ್ಗಿಸಲು ಅನುಕೂಲವಾಗಲಿದೆ. ಹೊಸ ನೀತಿಯಲ್ಲಿ 1200 ಚಾರ್ಜಿಂಗ್ ಸ್ಟೇಷನ್​ಗಳನ್ನು ಸ್ಥಾಪಿಸಲು ಅನುಕೂಲ ಮಾಡಲಾಗಿದೆ. ಅದರಲ್ಲಿ ಬಿಬಿಎಂಪಿ ಮತ್ತು ಇತರೆ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 600, ಉಳಿದ ಸ್ಥಳೀಯ ಸಂಸ್ಥೆಗಳು ಹಾಗೂ ಹೆದ್ದಾರಿಗಳಲ್ಲಿ 600 ಸ್ಟೇಷನ್​ಗಳನ್ನು ಸ್ಥಾಪಿಸ ಲಾಗುವುದು. ಸಂಬಂಧಿಸಿದ ಎಸ್ಕಾಂಗಳನ್ನು ನೋಡಲ್ ಏಜೆನ್ಸಿಗಳಾಗಿ ನೇಮಕ ಮಾಡಲಾಗುತ್ತದೆ. ಭೂಮಿ ಬಳಕೆ, ಭೂಮಿ ಪರಿವರ್ತನೆಯ ನಿಯಮಗಳನ್ನು ಸರಳೀಕರಣ ಮಾಡಲಾಗುತ್ತದೆ. ಲಾಭದ ಹಂಚಿಕೆಯ ಬಗ್ಗೆಯೂ ನೀತಿಯಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ವಿವರಿಸಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 108 ಇನ್​ಸ್ಪೆಕ್ಟರ್​ಗಳ ವರ್ಗಾವಣೆ; ನಿಮ್ಮೂರಿಗೆ ಯಾರು ಇನ್​ಸ್ಪೆಕ್ಟರ್? ಇಲ್ಲಿದೆ ಪೂರ್ತಿ ಪಟ್ಟಿ..

ನೀರಿಗೆ ಬಿತ್ತು ಪ್ರಪೋಸ್ ಮಾಡಲೆಂದು ತಂದ ಉಂಗುರ; ಸಮುದ್ರಕ್ಕೇ ಧುಮುಕಿದ ಪ್ರಿಯಕರ: ಆಮೇಲೇನಾಯ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − two =
Remember me
