ಬಾಗಲಕೋಟೆ:ಜಿಲ್ಲೆಯ ಬೂದಿನಗಡ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಹೆಚ್ಚಾಗಿದ್ದು, ಜೀವಜಲಕ್ಕಾಗಿ ಮೂರು ಕಿ.ಮೀ. ದೂರ ಹೊಲಗಳಿಗೆ ಹೋಗಿ. ಜಮೀನುದಾರರ ಬಳಿ ಮನವಿ ಮಾಡಿ ನೀರು ತರುವಂತಾಗಿದೆ. ಇಲ್ಲಿ ಕುಡಿಯಲು ಮತ್ತು ಬಳಕೆಗೂ ನೀರಿಲ್ಲ. ದಿನನಿತ್ಯ ನೀರು ತರೋದೆ ಕೆಲಸವಾಗಿ ಹೋಗಿದೆ ಎಂದು ಗ್ರಾಮಸ್ಥರು ಕುಡಿಯುವ ನೀರಿಗಾಗಿ ಅಳಲು ತೋಡಿಕೊಂಡಿದ್ದಾರೆ.
ಇದನ್ನೂ ಓದಿ:ಪ್ಲೇಆಫ್​ಗೇರಲು RCB-CSK ನಡುವೆ ಹೈವೋಲ್ಟೇಜ್​ ಪಂದ್ಯ! ಭಜ್ಜಿ ಪ್ರಕಾರ ಗೆಲ್ಲೋದು ಇವರೇ…
ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಬೂದಿನಗಡ ಗ್ರಾಮದಲ್ಲಿ ಎತ್ತಿನ ಬಂಡಿ ಸಹಾಯದಿಂದ ತಮ್ಮ ಮನೆಗಳಿಗೆ ನೀರು ತರ್ತಿರೋ ಜನರು, ಜಮೀನು ಮಾಲೀಕರಿಗೆ ದಮ್ಮಯ್ಯ ಎಂದು ಬೇಡಿ ನೀರು ತರುವಂತ ಕಠಿಣ ಪರಿಸ್ಥಿತಿ ಎದುರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಇದೇ ಸಮಸ್ಯೆ ಇದ್ದು, ಇದನ್ನು ಬಗೆಹರಿಸಲು ಯಾವ ಅಧಿಕಾರಿಗಳು ಸಹ ಮುಂದಾಗ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿ ಜಾತ್ರೆ ಇರುವುದರಿಂದ ಮನೆಗಳಿಗೆ ಬೀಗರು, ಸಂಬಂಧಿಕರು ಬಂದಿದ್ದಾರೆ. ಗ್ರಾಮದಲ್ಲಿ ನೀರಿಗೆ ಹಾಹಾಕಾರ ಉಂಟಾಗಿದೆ. ನೀರಿನ‌ ಸಮಸ್ಯೆ ಹಲವು ವರ್ಷಗಳಿಂದಲೂ ಇದೆ. ಆದರೆ, ಈ ಸಮಸ್ಯೆ ಮಾತ್ರ ಬಗೆ ಹರಿಯುತ್ತಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ನನ್ನ ಕ್ಯಾಪ್ಟನ್ಸಿಯಲ್ಲಿ ಈತನ ಪ್ರತಿಭೆ ಅಂದೇ ಗುರುತಿಸಬೇಕಿತ್ತು! ತಪ್ಪು ಮಾಡಿದೆ; ಗೌತಮ್ ಗಂಭೀರ್​ ಪಶ್ಚಾತಾಪ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
