ಬೆಳಗಾವಿ:ಆರ್ಥಿಕ ಚಟುವಟಿಕೆ ಉತ್ತೇಜಿಸುವ ಜತೆಗೆ ಅಂತರ್ಜಲ ವೃದ್ಧಿ ಆಶಯಯೊಂದಿಗೆ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ಜಲಶಕ್ತಿ ಯೋಜನೆ ಅನುಷ್ಠಾನಗೊಳಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಘೊಷಿಸಿದರು.
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಸೋಮವಾರ ಏರ್ಪಡಿಸಿದ್ದ 3,972 ಕೋಟಿ ರೂ. ವೆಚ್ಚದ, 238 ಕಿ.ಮೀ. ಉದ್ದದ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಮೊದಲ ಹಂತದಲ್ಲಿ ಕಿತ್ತೂರಿನಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ಯೋಜನೆ ಅನುಷ್ಠಾನಗೊಳಿಸಲಾಗುವುದು. ಬಳಿಕ ರಾಜ್ಯಾದ್ಯಂತ ಅನುಷ್ಠಾನಗೊಳಿಸಿ ಅಭಿವೃದ್ಧಿ ಕಾರ್ಯಕ್ರಮಕ್ಕೂ ಹೊಸ ಆಯಾಮ ನೀಡುವ ಮಾಹಿತಿ ಹಂಚಿಕೊಂಡರು.
ಧಾರ್ವಿುಕ ಸ್ಥಳ ಜೋಡಣೆ:ಮಹಾರಾಷ್ಟ್ರದ ಪಂಢರಾಪುರ, ಶಿರಡಿ ಮತ್ತಿತರ ಧಾರ್ವಿುಕ ಸ್ಥಳಗಳನ್ನು ರಾಜ್ಯದ ಧಾರ್ವಿುಕ ಸ್ಥಳಗಳ ಜತೆ ಜೋಡಿಸಲು ಕೇಂದ್ರ ವಿನೂತನ ಯೋಜನೆ ರೂಪಿಸಿದೆ. ಇದು ರಸ್ತೆ ಅಭಿವೃದ್ಧಿಗೆ ಮಾತ್ರವಲ್ಲ, ದೇಶದ ಭಾವೈಕ್ಯತೆಯ ಬೆಸುಗೆಯಾಗಿವೆ. ನಮ್ಮ ಎಲ್ಲ ಸಂಸದರು ತಮ್ಮ ವ್ಯಾಪ್ತಿಯ ಹೆದ್ದಾರಿಗಳು ಮತ್ತಿತರ ರಸ್ತೆ ಅಭಿವೃದ್ಧಿಗೆ ದುಂಬಾಲು ಬೀಳುವ ಮೂಲಕ ರಾಜ್ಯಕ್ಕೆ ಅತ್ಯುತ್ತಮ ಯೋಜನೆ ತಂದಿದ್ದಾರೆ ಎಂದು ಸಿಎಂ ಸಂತಸ ವ್ಯಕ್ತಪಡಿಸಿದರು.
ಜಿಎಸ್​ಟಿ ವಿನಾಯಿತಿ:ರಾಜ್ಯದಲ್ಲಿರುವ ಹೆದ್ದಾರಿ ಮತ್ತು ರಿಂಗ್ (ವರ್ತಲ) ರಸ್ತೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಜಿಎಸ್​ಟಿ ವಿನಾಯಿತಿ, ಭೂ ಸ್ವಾಧೀನ ಮತ್ತಿತರ ಸಹಕಾರ ನೀಡಲಿದೆ. ಬೆಳಗಾವಿ ಹಾಗೂ ರಾಜ್ಯದ ಇತರೆಡೆಯ ರಿಂಗ್ ರಸ್ತೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಸಿಎಂ ಮನವಿ ಮಾಡಿದರು..
ಅಮೆರಿಕ ಮಾದರಿ ಹೈವೇ ಅಭಿವೃದ್ಧಿ:ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾತನಾಡಿ, ರಾಜ್ಯ ಸರ್ಕಾರ ನಿಗದಿತ ಸಮಯದಲ್ಲಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ, ನಿರ್ವಣಕ್ಕೆ ಭೂ ಸ್ವಾಧೀನ ಮಾಡಿಕೊಟ್ಟರೆ 2024ರ ವೇಳೆಗೆ ಕರ್ನಾಟಕದ ರಸ್ತೆಗಳನ್ನು ಅಮೆರಿಕಕ್ಕೆ ಸರಿಸಮನಾಗಿ ಅಭಿವೃದ್ಧಿಪಡಿಸುತ್ತೇವೆ. ಪ್ರತಿ ಅಭಿವೃದ್ಧಿಯೂ ಉತ್ತಮವಾದ ರಸ್ತೆ ಅವಲಂಬಿಸಿದೆ. ಹೀಗಾಗಿ ರಸ್ತೆ ಸಂಪರ್ಕ ಜಾಲ ಸದೃಢಗೊಳಿಸಲು ಕೇಂದ್ರ ಬದ್ಧ ಎಂದರು.

70ಕ್ಕೂ ಹೆಚ್ಚು ದಂಪತಿಗಳಿಗೆ ಮೋಸ; ಖತರ್​ನಾಕ್​ ಗಂಡ-ಹೆಂಡ್ತಿಯ ಬಂಧನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 8 =
Remember me
