ನಿರ್ದೇಶನಗಳು
– ಕೆರೆಗಳಿಗೆ ಹರಿದುಬರುವ ನೀರಿನ ಕಾಲುವೆಗಳನ್ನು ಸಮರ್ಪಕವಾಗಿ ಕಾಪಾಡಿ, ಕಲುಷಿತ ನೀರು ಸೇರದಂತೆ ಕ್ರಮವಹಿಸುವುದು– ಕೆರೆಗಳಲ್ಲಿ ತುಂಬಿರುವ ಹೂಳೆತ್ತಿ, ಪುನಶ್ಚೇತನಗೊಳಿಸುವುದು– ಕೆರೆಗಳ ಬಫರ್ ಜೋನ್ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಸಸಿ ನೆಡುಸುವುದು– ಕರ್ನಾಟಕ ರಾಜ್ಯ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ರಚನೆ. ಕೆರೆಗಳಿಗೆ ಸಂಬಂಧಿಸಿದಂತೆ ದೂರು ಸ್ವೀಕರಿಸುವುದು, ಪ್ರತಿ 4 ತಿಂಗಳಿಗೊಮ್ಮೆ ಈ ಸಮಿತಿ ಸಭೆ ನಡೆಸುವುದು.– ಬಿಬಿಎಂಪಿ ವ್ಯಾಪ್ತಿಯ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಜವಾಬ್ದಾರಿಯನ್ನು ಬಿಬಿಎಂಪಿ ಆಯುಕ್ತರಿಗೆ ಒಪ್ಪಿಸುವುದು– ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾರ್ಯಕ್ಕಾಗಿ ಬಿಡಿಎ ಆಯುಕ್ತರು, ಕೆರೆ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ– ನಗರ ಪ್ರದೇಶದಲ್ಲಿ ಜಿಲ್ಲಾಧಿಕಾರಿ, ನಗರಪಾಲಿಕೆ/ ನಗರಸಭೆ ಆಯುಕ್ತರು, ನಗರಾಭಿವೃದ್ಧಿ ಆಯುಕ್ತರನ್ನು ಒಳಗೊಂಡ ಸಮಿತಿ ರಚಿಸಿ, ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾರ್ಯಗಳ ಜವಾಬ್ದಾರಿ ನೀಡುವುದು.
ಬೆಂಗಳೂರು:ಕೆರೆಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ ವಿಚಾರದಲ್ಲಿ ರಾಜ್ಯದ ಉಚ್ಛ ನ್ಯಾಯಾಲಯ ಚಾಟಿ ಬೀಸಿದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತು, ಅನುಷ್ಠಾನದ ವಸ್ತುಸ್ಥಿತಿ ತಿಳಿದುಕೊಳ್ಳಲು ಮುಂದಾಗಿದೆ. ಕೆರೆಗಳಿಂದ 30 ಮೀಟರ್ ವ್ಯಾಪ್ತಿಯ ಅನಧಿಕೃತ ಕಟ್ಟಡಗಳ ತೆರವು, ಚೌಕಟ್ಟು ನಿಗದಿಪಡಿಸಿ ತಂತಿ ಬೇಲಿ ಹಾಕುವುದು, ಸಮೀಕ್ಷೆ ಇತ್ಯಾದಿ ಸಂರಕ್ಷಣೆ ಮತ್ತು ಅಭಿವೃದ್ಧಿ ಅನುಷ್ಠಾನದ ವರದಿ ಸಲ್ಲಿಸಲು ಸರ್ಕಾರ ಸೂಚಿಸಿದೆ.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್ವರರಾವ್ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ನಿಗದಿತ ನಮೂನೆಯಲ್ಲಿ ಪ್ರಗತಿ ವರದಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ. ಉಚ್ಚ ನ್ಯಾಯಾಲಯದಲ್ಲಿ ನ.23ಕ್ಕೆ ಈ ಪ್ರಕರಣ ಮತ್ತೆ ವಿಚಾರಣೆಗೆ ಬರಲಿದ್ದು, ಅಷ್ಟರೊಳಗೆ ಪ್ರಮಾಣಪತ್ರದ ಮುಖೇನ ನ್ಯಾಯಾಲಯದ ಅವಗಾಹನೆಗೆ ತರಬೇಕಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ರಾಜ್ಯ ಉಸ್ತುವಾರಿ ಪದಾಧಿಕಾರಿಗಳ ಜತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಮೊದಲ ಸಭೆ ಗುರುವಾರ
ನ್ಯಾಯಾಲಯ ಎಚ್ಚರಿಕೆ:ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ 2008ರಲ್ಲಿ ನೀಡಿದ ಆದೇಶ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ ಎಂದು ಉಚ್ಛ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿ, 2012ರ ಏ.11ರಂದು ಸ್ಪಷ್ಟ ನಿರ್ದೇಶನ ನೀಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ಜ.13ರಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಆದೇಶಗಳನ್ನು ಗಂಭೀರವಾಗಿ ಪರಿಗಣಿಸಿ ಪಾಲಿಸದಿದ್ದರೆ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ದಾವೆ ಹೂಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 19 =
Remember me
