|ಮಂಜುನಾಥ ಕೋಳಿಗುಡ್ಡಬೆಳಗಾವಿ
ಗ್ರಾಮೀಣ ಪ್ರದೇಶದಲ್ಲಿ ಮನೆಗಳಿಗೆ ‘ನಲ್ಲಿ’ ಮೂಲಕ ಕುಡಿಯುವ ನೀರು ಪೂರೈಸುವ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಗೆ ಆರಂಭದಲ್ಲಿಯೇ ಸಂಕಷ್ಟ ಎದುರಾಗಿದೆ. ಸರ್ಕಾರದ ಅನುದಾನ ಹಾಗೂ ಸಮುದಾಯದ ಸಹಭಾಗಿತ್ವದಲ್ಲಿ (ವೆಚ್ಚದ ಶೇ.10) ರಾಜ್ಯದ 6,357 ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಮೂರು ಹಂತಗಳಲ್ಲಿ ಯೋಜನೆ ಆರಂಭಗೊಂಡಿದೆ. ಆದರೆ ನೀರಿನ ಅಭಾವ, ಅನುದಾನದ ಕೊರತೆ, ಇಂಜಿನಿಯರ್, ಗುತ್ತಿಗೆದಾರರ ನಿರ್ಲಕ್ಷ್ಯಂದಾಗಿ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಪೂರ್ಣಗೊಂಡಿರುವ ಕಾಮಗಾರಿಗಳಲ್ಲಿ ನಲ್ಲಿಗಳಿಗೆ ಪ್ರಾಯೋಗಿಕವಾಗಿ ಕುಡಿಯುವ ನೀರು ಪೂರೈಕೆ ಮಾಡಲು ನೀರೇ ಇಲ್ಲದಂತಾಗಿದೆ… ಎರಡನೇ ಹಂತದ ಕಾಮಗಾರಿಗಳು ಅಲ್ಲಲ್ಲಿ ಸ್ಥಗಿತಗೊಂಡಿದ್ದರೆ, ಕೆಲವೆಡೆ ಮೂರನೇ ಹಂತದ ಕಾಮಗಾರಿಗಳು ಟೆಂಡರ್ ಹಂತದಲ್ಲೇ ಇವೆ. ಈಗಾಗಲೇ ಸರ್ಕಾರವು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಗ್ರಾಮಗಳಲ್ಲಿ ನಿರ್ವಿು ಸಿರುವ ಓವರ್​ಹೆಡ್ ಟ್ಯಾಂಕ್​ಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಇದೀಗ ಆ ಟ್ಯಾಂಕ್​ಗಳಿಂದ ಜೆಜೆಎಂ ಪೈಪ್​ಲೈನ್ ಮೂಲಕ ಮನೆ ಮನೆಗೂ ನಲ್ಲಿ ಸಂಪರ್ಕ ಒದಗಿಸಿ ನೀರು ಸರಬರಾಜು ಮಾಡುವುದು ಯೋಜನೆಯ ಉದ್ದೇಶ.
ಆದರೆ, ನೀರಿನ ಅಭಾವ, ಪೈಪ್​ಲೈನ್, ಪಂಪ್​ಸೆಟ್​ಗಳ ದುರಸ್ತಿಯಿಂದಾಗಿ ಕೆಲವೆಡೆ ವಾರಕ್ಕೊಮ್ಮೆ ಮನೆಗಳಿಗೆ ನೀರು ಪೂರೈಕೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜೆಜೆಎಂ ಪೈಪ್​ಲೈನ್ ಮೂಲಕ ಈ ನಲ್ಲಿಗಳಲ್ಲಿ ದಿನದ 24 ಗಂಟೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಒಂದೊಂದು ಮನೆಗೆ 2 ಅಥವಾ 3 ನಲ್ಲಿಗಳ ಸಂಪರ್ಕ ನೀಡಿರುವುದು, ನಲ್ಲಿ ಮೀಟರ್ ಬಂದ್ ಮಾಡಿರುವುದು ಕೂಡ ಸಮಸ್ಯೆಗೆ ಕಾರಣವಾಗಿದೆ.
ನೀರೇ ಇಲ್ಲ…!:ರಾಜ್ಯದಲ್ಲಿ ಜೆಜೆಎಂ ಯೋಜನೆ ಅನುಷ್ಠಾನದಲ್ಲಿ ಪ್ರಥಮ ಸ್ಥಾನದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ 1,230 ಕಾಮಗಾರಿಗಳ ಪೈಕಿ 910 ಕಾಮಗಾರಿಗಳು ಪೂರ್ಣಗೊಂಡಿವೆ. 350ಕ್ಕೂ ಅಧಿಕ ಕಾಮಗಾರಿಗಳು ಪ್ರಗತಿ ಹಂತದಲ್ಲಿದ್ದು, ವರ್ಷದ ಅಂತ್ಯಕ್ಕೆ ಜಿಲ್ಲೆಯ 650ಕ್ಕೂ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಸಿಗಲಿದೆ. ಕಾಮಗಾರಿ ಪೂರ್ಣಗೊಂಡಿರುವ ಗ್ರಾಮಗಳಲ್ಲಿ ಜೆಜೆಎಂ ಪ್ರಾಯೋಗಿಕವಾಗಿ ಕಾರ್ಯಾರಂಭಕ್ಕೆ ನೀರಿನ ಅಭಾವ ಎದುರಾಗಿದೆ. ನೀರಿಗಾಗಿ ಘಟಪ್ರಭಾ, ಮಲಪ್ರಭಾ ಹಾಗೂ ಕೃಷ್ಣಾ ನದಿಗಳನ್ನು ಅವಲಂಬಿಸಲಾಗಿದೆ.
ಮೀಟರ್​ಗಳು ಹಾಳು!:ಗ್ರಾಮೀಣ ಪ್ರದೇಶಗಳಲ್ಲಿ ಅನುಷ್ಠಾನಗೊಂಡಿರುವ ಜೆಜೆಎಂ ಯೋಜನಾ ವೆಚ್ಚದ ಆಧಾರದಲ್ಲಿ ಪ್ರತಿ ಮನೆಯಿಂದ ಅಂದಾಜು 1,200 ರಿಂದ 3,000 ರೂ. ವರೆಗೆ ಸಮುದಾಯ ವಂತಿಕೆ ಸಂಗ್ರಹಿಸಲಾಗುತ್ತಿದೆ. ಆದರೆ ಬಡವರು, ಕೂಲಿ ಕಾರ್ವಿುಕರು, ರೈತರು ಅಧಿಕ ಸಂಖ್ಯೆಯಲ್ಲಿರುವುದರಿಂದ ವಂತಿಕೆ ಮೊತ್ತ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೆ, ಅಕ್ರಮ ನಲ್ಲಿ ಸಂಪರ್ಕಗಳಿಗೆ ಕಡಿವಾಣ ಹಾಕಲು ಮತ್ತು ನೀರು ಪೋಲಾಗುವುದನ್ನು ತಡೆಯುವ ನಿಟ್ಟಿನಲ್ಲಿ ನಲ್ಲಿಗಳಿಗೆ ಅಳವಡಿಸಿರುವ ಮೀಟರ್​ಗಳನ್ನೇ ಜನ ಕಿತ್ತೊಗೆಯುತ್ತಿದ್ದಾರೆ.
97.91 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಗುರಿ:ಸರ್ಕಾರವು 2023-24ರೊಳಗೆ ರಾಜ್ಯ ಗ್ರಾಮೀಣ ಪ್ರದೇಶದ ಎಲ್ಲ 97.91 ಲಕ್ಷ ಮನೆಗಳಿಗೆ ನಲ್ಲಿ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡುವ ಗುರಿ ಹಾಕಿಕೊಂಡಿದೆ. 2021-22ನೇ ಸಾಲಿನಲ್ಲಿ 25.17 ಲಕ್ಷ ಮನೆಗಳಿಗೆ ಸಂಪರ್ಕ ಕಲ್ಪಿಸುವ ಗುರಿ ಇದೆ. ಈವರೆಗೆ 17.60 ಲಕ್ಷ ಮನೆಗಳಿಗೆ ಸಂಪರ್ಕ ಕಲ್ಪಿಸಿದೆ. ಒಂದು ವರ್ಷದ ಅವಧಿಯಲ್ಲಿ ಅಂದಾಜು 50 ಲಕ್ಷ ಮನೆಗಳಿಗೆ ಸಂಪರ್ಕ ಕಲ್ಪಿಸಬೇಕಾಗಿದೆ ಎಂದು ಜೆಜೆಎಂ ಗುತ್ತಿಗೆದಾರರು, ಇಂಜಿನಿಯರ್​ಗಳು ಮಾಹಿತಿ ನೀಡುತ್ತಾರೆ.
ಸರ್ವರೋಗಕ್ಕೂ ಇದೇ ಮದ್ದು!; ಚಿನ್ನಕ್ಕಿಂತಲೂ ದುಬಾರಿ ಈ ವಸ್ತು: ಇದಕ್ಕೆಂದೇ ಚೀನಾದವರು ಭಾರತದೊಳಕ್ಕೆ ನುಗ್ಗಿದ್ದಾರೆ ಹಲವು ಸಲ!

ಅರೆಬೆತ್ತಲೆಯಾಗಿ ಎರಡನೇ ಮಹಡಿಗೆ ಹತ್ತಿ ಒಂಟಿ ಮಹಿಳೆ ಇದ್ದ ಮನೆ ಬಾಗಿಲು ಬಡಿದ; ಇಡೀ ಕಟ್ಟಡದಲ್ಲಿ ಯಾರೂ ಇಲ್ಲದಾಗ ಅವಾಂತರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 2 =
Remember me
