ಮೈಸೂರು:ಗುಜರಾತ್​ ಸರ್ಕಾರ ಅಲ್ಲಿನ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸಲು ಮುಂದಾದ ಬೆನ್ನಿಗೇ ಕರ್ನಾಟಕದ ಪಠ್ಯದಲ್ಲೂ ಭಗವದ್ಗೀತೆಯನ್ನು ಸೇರಿಸುವ ಕುರಿತು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಹೀಗೊಂದು ಚಿಂತನೆ ನಡೆಯುತ್ತಿದೆ ಎಂಬುದು ಬಹಿರಂಗವಾಗುತ್ತಿದ್ದಂತೆ ಪರ-ವಿರೋಧ ಅಭಿಪ್ರಾಯಗಳೂ ವ್ಯಕ್ತವಾಗಿವೆ.
ರಾಜ್ಯದಲ್ಲಿ ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರಿಸುವ ಕುರಿತು ಬಿಜೆಪಿಯ ಹಲವು ನಾಯಕರು ಸಹಮತ ವ್ಯಕ್ತಪಡಿಸಿ ಬಹಿರಂಗ ಹೇಳಿಕೆ ನೀಡಿದ್ದರೆ, ಕೆಲವು ನಾಯಕರು ನೇರವಾಗಿ ವಿರೋಧ ವ್ಯಕ್ತಪಡಿಸದಿದ್ದರೂ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದರು. ಈ ಹಿಂದೆ ಹಾಗೆ ನಕಾರಾತ್ಮಕವಾಗಿ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪರೋಕ್ಷವಾಗಿ ಭಗವದ್ಗೀತೆ ಪರ ಅನಿಸುವಂಥ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಪಠ್ಯದಲ್ಲಿ ಭಗವದ್ಗೀತೆ ಚರ್ಚೆ ಅನಗತ್ಯ, ನಮ್ಗೆ ಬೇಕಿರೋದು ಜನ್ರಿಗೆ ಬದುಕು ಕಟ್ಟಿಕೊಡುವ ಕಾರ್ಯಕ್ರಮ: ಎಚ್​ಡಿಕೆ
ಈ ಹಿಂದೆ ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೂರದರ್ಶನದ ಮೂಲಕ ಇಡೀ ದೇಶಕ್ಕೆ ರಾಮಾಯಾಣ-ಮಹಾಭಾರತ ಪ್ರಸಾರ ಮಾಡಿದ್ದಾರೆ. ಭಗವದ್ಗೀತೆಯನ್ನು ಬರೀ ಶಿಕ್ಷಣದಲ್ಲಿ ಮಾತ್ರವಲ್ಲ, ಇಡೀ ದೇಶದ ಜನರಿಗೆ ತಲುಪಿಸಿದ್ದು ಕಾಂಗ್ರೆಸ್​ ಎಂದು ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್​, ನಾವು ಸಹ ಹಿಂದೂಗಳೇ ಎನ್ನುತ್ತ ಭಗವದ್ಗೀತೆಯ ಯದಾ ಯದಾ ಹಿ ಧರ್ಮಸ್ಯ ಎಂಬ ಶ್ಲೋಕವನ್ನೂ ಉಲ್ಲೇಖಿಸಿದ್ದಾರೆ.
ಭಗವದ್ಗೀತೆ ಹೆಸರಿನಲ್ಲಿ ಬಿಜೆಪಿ ರಾಜಕಾರಣ ; ಸರ್ಕಾರದ ವಿರುದ್ಧ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + six =
Remember me
