ಬೆಂಗಳೂರು:ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಂಸದ ತೇಜಸ್ವಿ ಸೂರ್ಯ ಇದೀಗ ಮರುಚುನಾವಣೆ ಬಯಸಿದ್ದು, ಕರ್ನಾಟಕದ ಒಟ್ಟು 28 ಸ್ಥಾನಗಳ ಪೈಕಿ 14 ಕ್ಷೇತ್ರಗಳಿಗೆ ಇಂದು ಮೊದಲ ಹಂತದಲ್ಲಿ ಮತದಾನ ಭರದಿಂದ ಸಾಗುತ್ತಿದೆ. ಈ ನಡುವೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿ ಸೌಮ್ಯ ರೆಡ್ಡಿ ಮತ್ತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಧ್ಯೆ ಬಿರುಸಿನ ಪೈಪೋಟಿ ಭುಗಿಲೆದ್ದಿದ್ದು, ಸದ್ಯ ಕ್ಷೇತ್ರದ ಮತದಾರರು ಬೆಳಗ್ಗಿನಿಂದಲೇ ಮತ ಚಲಾಯಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ:ಲೋಕಸಭಾ ಚುನಾವಣೆ 2024; ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದ ಗಣ್ಯರು
ಇದೆಲ್ಲದರ ಮಧ್ಯೆ ಬಿಜೆಪಿ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದ ತೇಜಸ್ವಿ, “80% ಬಿಜೆಪಿ ಬೆಂಬಲಿಗರು ಮತ್ತು ಮತದಾರರು ಇದ್ದರೂ ಸಹ ಕೇವಲ 20% ಜನರು ಮಾತ್ರ ಮತ ಚಲಾಯಿಸಲು ಬರುತ್ತಿದ್ದಾರೆ. ಇದು ಕಾಂಗ್ರೆಸ್‌ಗೆ ಅನುಕೂಲವಾಗಿದೆ” ಎಂದು ಹೇಳಿದ್ದಾರೆ. “ನಾವು 80% ಇದ್ದೇವೆ. ಆದರೆ ಮತದಾನದ ದಿನದಂದು ಹೊರಗೆ ಬರುತ್ತಿರುವುದು ಕೇವಲ 20% ಮಾತ್ರ. ಕಾಂಗ್ರೆಸ್ ಬೆಂಬಲಿಗರು 20% ಇದ್ದಾರೆ. ಆದ್ರೆ, ಅವರು ಹೊರಗೆ ಬಂದು 80% ನಷ್ಟು ಮತ ಚಲಾಯಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.
”ಪ್ರತಿಯೊಬ್ಬ ಬಿಜೆಪಿ ಮತದಾರ ಹೊರಗೆ ಬಂದು ಮತ ಹಾಕಬೇಕು. ಏಕೆಂದರೆ ನಮ್ಮ ಮತ ಮುಖ್ಯ, ನೀವು ಮತ ಹಾಕದಿದ್ದರೆ ಕಾಂಗ್ರೆಸ್ ನ ಶೇ.20 ರಷ್ಟು ಜನ ಹೊರ ಬಂದು ಮತ ಹಾಕುತ್ತಿದ್ದಾರೆ. ಬಿಸಿಲು, ಮಳೆ ಏನೇ ಇರಲಿ, ಅಂತಿಮವಾಗಿ ನಿಮ್ಮ ಮತವೇ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುವುದು. ಮುಂದಿನ ಐದು ವರ್ಷಗಳವರೆಗೆ. ಅದು ನಿಮಗೆ ನೆನಪಿರಲಿ” ಎಂದು ಸೂರ್ಯ ಹೇಳಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಇದನ್ನೂ ಓದಿ:ಲೋಕಸಭಾ ಚುನಾವಣೆ 2024: ಮತದಾರನ ಕುಗ್ಗದ ಉತ್ಸಾಹ- ಬೆಳಗ್ಗೆ 9 ಗಂಟೆಯವರೆಗೆ ಶೇ. 9.21 ದಾಖಲೆ ಮತದಾನ!
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಜಯನಗರದ ಮಾಜಿ ಶಾಸಕ ಹಾಗೂ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ, ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ವಿರುದ್ಧ ತೇಜಸ್ವಿ ಸೂರ್ಯ ಕಣಕ್ಕಿಳಿದಿದ್ದಾರೆ. 1996ರಿಂದ ಬಿಜೆಪಿಯ ಭದ್ರಕೋಟೆಯಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರವು 2019ರ ಚುನಾವಣೆಯಲ್ಲಿ ಸೂರ್ಯ ಮೂರು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈಗ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ಪಣತೊಟ್ಟಿದ್ದಾರೆ,(ಏಜೆನ್ಸೀಸ್).
ನಿಮಗೆ ಏನೂ ಗೊತ್ತಿಲ್ಲ… RCB ಪ್ಲೇಆಫ್ ಕನಸು ಇನ್ನೂ ಜೀವಂತ: ವಿಲ್​ ಜ್ಯಾಕ್ಸ್​ ಬಿಚ್ಚಿಟ್ರು ಶಾಕಿಂಗ್ ಸಂಗತಿ
4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
