ಶಿವಮೊಗ್ಗ:‘ನಾವು ಭದ್ರಾವತಿಯ ಕಬ್ಬಿಣದಂತೆ ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ..’– ಹೀಗೆಂದು ಆಡಳಿತ ಪಕ್ಷ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಇತ್ತೀಚೆಗೆಷ್ಟೇ ಸದನದಲ್ಲಿ ಅಂಗಿ ಬಿಚ್ಚಿ ವಿವಾದಕ್ಕೆ ಒಳಗಾಗಿರುವ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್​. ಶಿವಮೊಗ್ಗದಲ್ಲಿ ನಡೆಯುತ್ತಿರುವ ಜನಾಕ್ರೋಶ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.ನನ್ನ ಮೇಲೆ, ನನ್ನ ಕುಟುಂಬ ಹಾಗೂ ನಮ್ಮ ಕಾರ್ಯಕರ್ತರ‌ ಮೇಲೆ ಸುಳ್ಳುಕೇಸು ಹಾಕಲಾಗಿದೆ. ಆ ಮೂಲಕ ನಮ್ಮನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಯತ್ನಿಸಿದ್ದಾರೆ. ಆದರೆ ನಾವು ಭದ್ರಾವತಿಯ ಕಬ್ಬಿಣದಂತೆ, ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ಸಂಗಮೇಶ್ವರ್ ಹೇಳಿದ್ದಾರೆ.
2011ರಲ್ಲಿ ನನ್ನನ್ನು ಬಿಜೆಪಿಗೆ ಕರೆದಿದ್ದರು, ಆದರೆ ನಾನು ಹೋಗಿರಲಿಲ್ಲ‌. ಆಗ ನಮ್ಮ ಮನೆಗೆ ಪೊಲೀಸರನ್ನು ಕಳುಹಿಸಿ ನಮ್ಮ ಮೇಲೆ ಹಲ್ಲೆ‌ ನಡೆಸಿ ಜೈಲಿಗೆ ಕಳುಹಿಸಿದ್ದರು‌. ಭದ್ರಾವತಿಯಲ್ಲಿ ಬಿಜೆಪಿಗೆ ನೆಲೆ ಇಲ್ಲ. ಹಾಗಾಗಿ ಕುತಂತ್ರದ ರಾಜಕಾರಣ ಮಾಡಿ ಭದ್ರಾವತಿಯಲ್ಲಿ ಗೆಲ್ಲಲು ಹೊರಟಿದ್ದಾರೆ, ಆದರೆ ಅದು ಅವರಿಂದ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿಯವರು ಹೇಳಿದ್ದನ್ನು ಕೇಳಲೇಬೇಕಿದೆ. ಕತ್ತೆಗೆ ಎಂಟು ಕಾಲಿದೆ ಎಂದರೂ ಒಪ್ಪಬೇಕು, ಇಲ್ಲ ನಾಲ್ಕು ಕಾಲು ಎಂದರೆ ಕೇಸು ಹಾಕಿಸುತ್ತಾರೆ ಎಂದು ಲೇವಡಿ ಮಾಡಿದ ಸಂಗಮೇಶ್ವರ್, ಯಾವುದೇ ರಾಜಕಾರಣಿ ಧರ್ಮವನ್ನು ಒಡೆಯುವ ಕೆಲಸ ಮಾಡಬಾರದು. ನಾವೂ ಹಿಂದುಗಳೇ.. ನಾವೇನೂ ಪಾಕಿಸ್ತಾನದಿಂದ ಬಂದವರಲ್ಲ. ನನ್ನ ಹೆಸರು ಸಂಗಮೇಶ್ವರ್. ಶಿವನ ಹೆಸರನ್ನು ಇಟ್ಟುಕೊಂಡಿದ್ದೇನೆ. ನನಗೆ ಅನ್ಯಾಯ ಮಾಡಿದರೆ ಅವರೇ ಹಾಳಾಗುತ್ತಾರೆ ಎಂದರು.
ಗಾರ್ಮೆಂಟ್ ಫ್ಯಾಕ್ಟರಿಯ ಯಂತ್ರಕ್ಕೆ ಸಿಲುಕಿ ಯುವತಿ ಸಾವು; ಜೀವ ಕಳೆದುಕೊಳ್ಳುವಂತೆ ಮಾಡಿತು ಸಣ್ಣದೊಂದು ಆಕಸ್ಮಿಕ

‘ಸೋಫಿಯಾ’ ಥರನೇ ಇದ್ದಾಳೆ, 47 ಭಾಷೆ ಮಾತಾಡ್ತಾಳೆ; ಇವಳ ಸೃಷ್ಟಿಕರ್ತ ಇವರೇ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
