ಬೆಂಗಳೂರು:ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ಬರೀ ಉತ್ತಮವಲ್ಲ, ಅತ್ಯುತ್ತಮ- ಪಾರದರ್ಶಕ- ಜನಪರ ಸರ್ಕಾರ ನಮ್ಮದು ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬಾಕಿ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು ಹಾಗೂ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ತಿರುಗೇಟು ನೀಡಿದ ಸಿಎಂ, ನ್ಯಾಯಯುತ ಕಾಮಗಾರಿ ಮಾಡಿದ ಗುತ್ತಿಗೆದಾರರಿಗೆ ಅನ್ಯಾಯವಾಗಲು ಬಿಡಲ್ಲ ಎಂದು ಧೈರ್ಯ ತುಂಬಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ ಎಂದು ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು 135 ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು, ಬಿಜೆಪಿ ಸರ್ಕಾರದ ಶೇ.40 ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದರು.
ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಪಡೆಯಲಾಗಿದೆ. ನ್ಯಾಯಾಂಗ ಸಮಿತಿಯು ಈ ಎಲ್ಲ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಬಿಡುಗಡೆ ಮಾಡುವುದು ಸಮಂಜಸವಲ್ಲ ಎಂದರು. ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ ಎಂದು ಪ್ರಶ್ನಿಸಿದರು.
ಮೋದಿ ಕಾರ್ಯಕ್ಷಮತೆ ಬಗ್ಗೆ ಅನುಮಾನವೇ?:ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿ ಮಧ್ಯ ಪ್ರವೇಶಿಸಿ ಬಿಲ್ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿ ಅವರಿಗೆ, ನರೇಂದ್ರ ಮೋದಿ ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿ ಅವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿ ಅವರಿಗೆ ಮೋದಿ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ ಎಂದರು.
ಈಗಾಗಲೆ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ರ್ಚಚಿಸಿದ್ದು, ಕಾಮಗಾರಿಗಳ ಬಿಲ್ ಬಿಡುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ. ಬಿಲ್ ಬಿಡುಗಡೆಗೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು. ಕೆಲವೇ ಕೆಲವು ಗುತ್ತಿಗೆದಾರರು ಸ್ವಾರ್ಥ ಹಾಗೂ ದುರುದ್ದೇಶದಿಂದ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಎಂದರು.
ಇಳಿಕೆ ಸಂತಸದ ಸುದ್ದಿ:ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್.ಅಶೋಕ್ ಮಾಡಿರುವ ಶೇ.15 ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು ಶೇ.40ರಿಂದ ಶೇ.15ಕ್ಕೆ ಇಳಿಸಿರುವುದು ಸಂತೋಷದ ವಿಷಯ. ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅಶೋಕ್ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.
ಬೆಳಗಾವಿ:ಗುತ್ತಿಗೆದಾರ ಸಂತೋಷ್ ಪಾಟೀಲ ಸಾವು ಪ್ರಕರಣ ಕುರಿತು ಮರು ತನಿಖೆ ನಡೆಸಿ ನ್ಯಾಯ ಕಲ್ಪಿಸಿಕೊಡುವಂತೆ ಮೃತ ಗುತ್ತಿಗೆದಾರನ ಕುಟುಂಬಸ್ಥರು ಮನವಿ ಸಲ್ಲಿಸಿದ್ದಾರೆ. ಈ ಕುರಿತು ಕಾನೂನು ಇಲಾಖೆಯೊಂದಿಗೆ ರ್ಚಚಿಸಿದ ಬಳಿಕ ಮರು ತನಿಖೆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಮೃತ ಸಂತೋಷ್ ಪಾಟೀಲ ಕುಟುಂಬಕ್ಕೆ ನ್ಯಾಯ ಕೊಡಿಸಲು ಸರ್ಕಾರ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು:ಮೂರ್ನಾಲ್ಕು ವರ್ಷಗಳಿಂದ ಬಿಲ್ ಪಾವತಿ ಆಗದಿದ್ದಾಗ ಸುಮ್ಮನಿದ್ದ ಗುತ್ತಿಗೆದಾರರು, ಈಗ ತನಿಖೆ ಮುಗಿಯುವವರೆಗೂ ಕಾಯಲು ಯಾಕೆ ಸಿದ್ಧರಿಲ್ಲ? ಯಾಕೆ ಈ ಪರಿ ಆತುರ? ಏನಿದರ ಹಿಂದಿನ ಮರ್ಮ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.
ತನಿಖೆ ಒಂದೆರಡು ಕಡೆ ಮಾತ್ರ ಮಾಡುವುದಿಲ್ಲ. ಎಲ್ಲ ಕಡೆ ಮಾಡಲಾಗುತ್ತದೆ. ಕೆಲಸ ಮಾಡಿದ್ದರೆ ಬಿಲ್ ಪಾವತಿ ಆಗಲಿದೆ. ಈಗ ಒಂದೆರಡು ತಿಂಗಳು ಕಾಯಲು ಆಗುವುದಿಲ್ಲವೇ? ಎಂದರು.
ಗುತ್ತಿಗೆದಾರರು ನೇಣು ಹಾಕಿಕೊಳ್ಳುವುದು ಬೇಡ, ದಯಾ ಮರಣ ಕೇಳುವುದೂ ಬೇಡ. ಅವರ ಹಿಂದೆ ಯಾರಿದ್ದಾರೆ ಎಂದು ಗೊತ್ತಿದೆ. ಪ್ರಜಾಪ್ರಭುತ್ವದಲ್ಲಿ ಇಂತಹ ಆರೋಪ ಪ್ರತ್ಯಾರೋಪ ಸಹಜ. ಗುತ್ತಿಗೆದಾರರು ರಾಜ್ಯಪಾಲರು, ಅಶೋಕ್, ಕುಮಾರಸ್ವಾಮಿ ಎಲ್ಲರನ್ನೂ ಕೇಳುತ್ತಿದ್ದಾರೆ. ನಾನು ಅಧಿಕಾರಿಗಳ ಬಳಿ ಮಾಹಿತಿ ಕೇಳಿದ್ದೇನೆ. ಬಿಲ್ ವಿಚಾರವಾಗಿ ಬೊಮ್ಮಾಯಿ, ಅಶೋಕ್ ಸೇರಿ ವಿರೋಧ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ಅವರ ಸರ್ಕಾರ ಇದ್ದಾಗ ಬಿಲ್ ಪಾವತಿ ಯಾಕೆ ಮಾಡಲಿಲ್ಲ? ಈ ಪ್ರಶ್ನೆಗೆ ಮೊದಲು ಉತ್ತರ ನೀಡಲಿ. ಉಳಿದಂತೆ ಗುತ್ತಿಗೆದಾರರಿಗೆ ನಾನು ಉತ್ತರ ನೀಡುತ್ತೇನೆ ಎಂದರು. ನಮ್ಮ ಸರ್ಕಾರ ಬಂದ ನಂತರ ಮುಖ್ಯಮಂತ್ರಿ ಅವರು ಕೆಂಪಣ್ಣ ದೂರಿನ ಆಧಾರದ ಮೇಲೆ ಕೆಲಸ ಆಗಿದೆಯೇ ಇಲ್ಲವೇ ಎಂದು ನೈಜತೆ ಪರಿಶೀಲನೆ ಮಾಡಿ ಎಂದು ತಿಳಿಸಿದ್ದಾರೆ. ಇನ್ನು ಬಿಜೆಪಿ ನಾಯಕರು ಕೂಡ ಸದನದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ತನಿಖೆ ಮಾಡಿ ಎಂದು ನಮ್ರತೆಯಿಂದ ಮನವಿ ಮಾಡಿದ್ದರು. ಹೀಗಾಗಿ ನಾವು ತನಿಖಾ ಸಮಿತಿ ರಚನೆ ಮಾಡಿದ್ದೇವೆ. ಕಾಮಗಾರಿಗಳ ಕೆಲಸ ಆಗಿದೆಯೇ ಇಲ್ಲವೇ ಎಂದು ಪರಿಶೀಲನೆ ಮಾಡಲು ಸಮಿತಿಗೆ ಸೂಚಿಸಿದ್ದೇವೆ ಎಂದು ಹೇಳಿದರು. ಶೇ.10-15 ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಈ ಕಮಿಷನ್ ಯಾರು ಕೇಳಿದ್ದಾರೆ? ಎಂದು ಹೇಳಲಿ. ಕಮಿಷನ್ ವಿಚಾರದಲ್ಲಿ ಶಾಂಗ್ರಿಲಾ ಹೋಟೆಲ್ ನಲ್ಲಿ ಮೀಟಿಂಗ್ ಮಾಡಿದ್ದು, ನಿಮ್ಮ ಪರವಾಗಿ ಅಧಿಕಾರಿಯೊಬ್ಬರು ಬಂದು ಕಮಿಷನ್ ಕೇಳುತ್ತಿದ್ದಾರೆ ಎಂದು ಕೆಂಪಣ್ಣ ಹೇಳಿದ್ದಾರಲ್ಲ ಎಂದು ಪತ್ರಕರ್ತರು ಗಮನ ಸೆಳೆದಾಗ, ಕೆಂಪಣ್ಣ ಗೌರವಯುತ ವ್ಯಕ್ತಿ. ನೀವು ಹೇಳಿದಕ್ಕೆ ನಾನು ಅವರ ಬಗ್ಗೆ ಮಾತನಾಡುವುದಿಲ್ಲ. ಅವರ ಹೇಳಿಕೆ ಬಗ್ಗೆ ಗೊತ್ತಿಲ್ಲ. ಅವರಿಗೆ ಯಾವ ಅಧಿಕಾರಿ ಕೇಳಿದ್ದಾರೋ ಆ ಬಗ್ಗೆ ಒಂದು ಅಫಿಡವಿಟ್ ಹಾಗೂ ದೂರು ಸಲ್ಲಿಸಲು ಹೇಳಿ ಎಂದು ತಿಳಿಸಿದರು.
ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ನೀವು ಅಜ್ಜಯ್ಯನ ಮೇಲೆ ಆಣೆ ಪ್ರಮಾಣ ಮಾಡುವಂತೆ ಕೇಳಿರುವ ಬಗ್ಗೆ ಪ್ರಶ್ನಿಸಿದಾಗ, ರಸ್ತೆಯಲ್ಲಿ ಹೋಗುವ ಯಾರದೋ ಮಾತಿಗೆಲ್ಲ ನಾನು ಉತ್ತರ ನೀಡುವುದಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಮಾತನಾಡಲಿ, ಉತ್ತರ ನೀಡುತ್ತೇನೆ ಎಂದರು.
ಬೆಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಸರ್ಕಾರ ಹೆದರಿಸಿ, ಕಿರುಕುಳ ನೀಡುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಆರೋಪಿಸಿದ್ದಾರೆ. ಮಂಡ್ಯ ಮತ್ತು ಹಾಸನದಲ್ಲಿ ಪಕ್ಷದ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಆದರೆ ಅರೆಸ್ಟ್ ಮಾಡಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ವಿಷಯದ ಕುರಿತು ಪೊಲೀಸ್ ಕಮಿಷನ್ ಬಳಿ ರ್ಚಚಿಸಲು ಬಂದಿದ್ದೆವು. ಕ್ರೖೆಮ್ ಡಿಸಿಪಿ ಬದ್ರಿನಾಥ್ ಅವರನ್ನು ಭೇಟಿಯಾಗಿದ್ದು, ಮಾಹಿತಿ ಪಡೆದು ಬಿಟ್ಟು ಕಳಿಸಿದ್ದೇವೆ ಎಂದು ತಿಳಿಸಿದ್ದಾರೆ. ಏನೇ ಇದ್ದರೂ ನಮ್ಮನ್ನು ಸಂರ್ಪಸಿ ಕಾರ್ಯಕರ್ತರನ್ನು ಹೆದರಿಸಬೇಡಿ ಎಂದು ಕೋರಿದ್ದೇವೆ ಎಂದು ತಿಳಿಸಿದರು.
ವಂಚಕರಿಗಿನ್ನು 420 ಬದಲು ಬೇರೆ ನಂಬರ್!; ಏನಿದು ಸಂಖ್ಯೆ ಬದಲಾವಣೆ?; ಇಲ್ಲಿದೆ ವಿವರ

ಲೆಫ್ಟಿಗಳಿಗೆಂದೇ ವಿಶೇಷ ಹೆಲ್ಮೆಟ್​: ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಪ್ರಚಾರಕ್ಕೆ ಸಿಕ್ತು ‘ವೇಗ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − thirteen =
Remember me
