ಬೆಂಗಳೂರು:ವಾಸ್ತವ ಗಡಿರೇಖೆ ಬಳಿ ಚೀನಿಯರು ನಮ್ಮ ದೇಶದ ಮೇಲೆ ದಾಳಿ ಮಾಡಿದ್ದಾರೆ. ಇದಕ್ಕೆ ಸುಮ್ಮನಿರಲು ಸಾಧ್ಯವಿಲ್ಲ. ಈ ವಿಷಯವಾಗಿ ನೀವು ತೆಗೆದುಕೊಳ್ಳುವ ನಿರ್ಧಾರಗಳಿಗೆ ನಮ್ಮ ಸಂಪೂರ್ಣ ಬೆಂಬಲ ಇರುತ್ತದೆ ಎಂದು ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಕಾಂಗ್ರೆಸ್​ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರವಸೆ ನೀಡಿದ್ದಾರೆ.
ನಾವು ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ ಎಂದ ಮಾತ್ರಕ್ಕೆ ಸತ್ಯವನ್ನು ಮರೆಮಾಚಬೇಡಿ. ಜನರ ಮುಂದೆ ಸತ್ಯವನ್ನು ತೆರೆದಿಡಿ ಎಂದು ಮನವಿ ಮಾಡಿಕೊಂಡರು.
ಇದನ್ನೂ ಓದಿ:ಧೀರ ಯೋಧರನ್ನು ಗೌರವಿಸುವುದು ಹೇಗೆಂದು ಭಾರತವನ್ನು ನೋಡಿ ಕಲಿಯಿರಿ
ಚೀನಾದೊಂದಿಗಿನ ಘರ್ಷಣೆಯ ವಿಷಯವಾಗಿ ಪ್ರಧಾನಿ ಮೋದಿ ಹೇಳಿದ್ದೇ ಸತ್ಯ ಎಂದು ನಂಬುವವರು ಎಲ್ಲ ಮಾಧ್ಯಮಗಳಲ್ಲೂ ಇದ್ದಾರೆ. ಆದರೂ ಕೆಲ ಮಾಧ್ಯಮಗಳಲ್ಲಿ ಈ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗಿದೆ. ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ಕೂಡ ಈ ಬಗ್ಗೆ ಪ್ರಶ್ನೆ ಎತ್ತಿದ್ದರು. ಆದ್ದರಿಂದ, ಪ್ರಧಾನಿ ಮೋದಿ ಈ ಬಗ್ಗೆ ಈಗಲಾದರೂ ಬಾಯಿ ತೆರೆಯಬೇಕು ಎಂದು ಆಗ್ರಹಿಸಿದರು.
ನಾವೆಲ್ಲರೂ ಸೇರಿ ದೇಶವನ್ನು ಉಳಿಸಬೇಕಿದೆ. ಆದರೆ ಪ್ರಧಾನಿ ಮೋದಿ ತಾವು ಹೇಳಿದ್ದೇ ಸರಿ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ ಎಂದರು.
ನಿಲ್ಲುತ್ತಿಲ್ಲ ನೇಪಾಳದ ಕಿರಿಕ್​; ಇದೀಗ ಅಣೆಕಟ್ಟೆಯ ದುರಸ್ತಿಗೆ ಅಡ್ಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
