ಬೆಂಗಳೂರು‘ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವ ನಾಶವನ್ನು ತಡೆಯುವುದು ತುರ್ತು ಅನಿವಾರ್ಯವಾಗಿದ್ದು, ಸಂವಿಧಾನವನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಪತ್ರಕರ್ತ ಪಿ ಸಾಯಿನಾಥ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಇತ್ತೀಚೆಗೆ ತಮ್ಮದೇ (ಪಿ ಸಾಯಿನಾಥ್) ರಚಿತ ‘ದಿ ಲಾಸ್ಟ್ ಹೀರೋಸ್’ ಕೃತಿಯನ್ನು ಪತ್ರಕರ್ತ ಜಿ.ಎನ್. ಮೋಹನ್ ಅವರು ಕನ್ನಡಕ್ಕೆ ಅನುವಾದಿಸಿರುವ ’ಕೊನೆಯ ಹೀರೋಗಳು’ ಕೃತಿ ಬಿಡುಗಡೆಯಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು ರೂಪಿಸುತ್ತಿರುವ ಕಾಯಿದೆಗಳು ಜನ ವಿರೋಧಿಯಾಗಿದೆ. ಸಮಾಜವನ್ನು ನಿಧಾನವಾಗಿ ಉಸಿರುಗಟ್ಟಿಸುತ್ತಿದೆ. ರೈತರು ದೆಹಲಿಯಲ್ಲಿ ನಡೆಸಿದ ಪ್ರತಿಭಟನೆ ರೈತರ ಹಕ್ಕುಗಳನ್ನು ರಕ್ಷಿಸುವುದು ಮಾತ್ರವಾಗಿರಲಿಲ್ಲ, ಅದು ಪರೋಕ್ಷವಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಚಳವಳಿಯಾಗಿತ್ತು ಎಂದು ಹೇಳಿದರು.
‘ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಆದರೆ, ಬಿಡುಗಡೆ ಸಿಕ್ಕಿಲ್ಲ’ ಎನ್ನುವುದು ಬಹುತೇಕ ಸ್ವಾತಂತ್ರ್ಯ ಹೋರಾಟಗಾರರ ಅಳಲು. ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಕೊನೆಗೊಂಡಾಗ, ಜಾತಿ ತಾರತಮ್ಯಗಳಿಲ್ಲದೆ ಎಲ್ಲರಿಗೂ ಸಂಪನ್ಮೂಲಗಳು ಸಮಾನವಾಗಿ ಹಂಚಿಕೆಯಾದಾಗ ಸಂಪೂರ್ಣ ಬಿಡುಗಡೆ ಸಿಗುತ್ತದೆ ಎಂಬುದು ಅವರ ಅಭಿಪ್ರಾಯವಾಗಿದೆ. ಆದರೆ, ಬಿಡುಗಡೆ ಎಂಬುದರ ವ್ಯಾಪ್ತಿ ತುಂಬಾ ಹಿರಿದಾಗಿದೆ. ಇದನ್ನು ಪಡೆದುಕೊಳ್ಳಲು ನಾವೆಲ್ಲರೂ ಒಂದಾಗಬೇಕಿದೆ. ಈ ಕಾರಣಕ್ಕಾಗಿಯೇ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲಿನ ಹಲ್ಲೆಗಳನ್ನು ತಡೆಗಟ್ಟಬೇಕಾಗಿದೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
