ಬೆಂಗಳೂರು:ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು(Guarantee)ಜಾರಿಗೊಳಿಸಲು ಇಂದು ಕ್ಯಾಬಿನೆಟ್‌ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ಕೆಳಕಂಡಂತಿವೆ ಎಂದು ಉಪಮುಖ್ಯಮಂತ್ರಿ(Deputy Chiefminister)ಡಿ.ಕೆ. ಶಿವಕುಮಾರ್(DK Shivakumar)ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹೀಗಿವೆ:
ಗೃಹಜ್ಯೋತಿ:* ವಾರ್ಷಿಕ ವಿದ್ಯುತ್‌ ಬಿಲ್‌ನ ಸರಾಸರಿಯಲ್ಲಿ 200 ಯೂನಿಟ್‌ ಒಳಗೆ ಬಳಸಿದ್ದರೆ ಅಂತಹ ಕುಟುಂಬಕ್ಕೆ ಉಚಿತ ವಿದ್ಯುತ್‌ ನೀಡಲಾಗುವುದು.* ವಾರ್ಷಿಕ ಸರಾಸರಿ ಮೇಲೂ ಕೂಡ 10% ಅನ್ನು ಉಚಿತ ಎಂದು ಪರಿಗಣಿಸಲಾಗುವುದು.
ಇದನ್ನೂ ಓದಿ:ಘೋರ ದುರಂತ: ಆಟ ಆಡುತ್ತಿದ್ದಾಗಲೇ ಹಠಾತ್ ಸಾವು..!
ಗೃಹಲಕ್ಷ್ಮಿ ಗ್ಯಾರಂಟಿ:* ಅರ್ಹ ಫಲಾನುಭವಿಯಾಗಲು ಮನೆಯ ಯಜಮಾನಿಯರು ಜೂನ್‌ 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಿ ಮೊಬೈಲ್‌ ಸಂಖ್ಯೆ, ಬ್ಯಾಂಕ್‌ ಖಾತೆ, ಆಧಾರ್‌ ಕಾರ್ಡ್‌ ಮೊದಲಾದ ವಿವರಗಳನ್ನು ನೀಡಬೇಕಿದೆ. ಆಗಸ್ಟ್‌ 15ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ಮನೆಯ ಯಜಮಾನಿ ಖಾತೆಗೆ ನೇರ 2000 ರೂ. ಜಮಾವಣೆಯಾಗಲಿದೆ.* ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವವರು, ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುವವರೂ ಕೂಡ ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.

ಶಕ್ತಿ ಗ್ಯಾರಂಟಿ:* ಜೂನ್‌ 11ರಿಂದ ಈ ಯೋಜನೆ ಜಾರಿಗೆ ಬರಲಿದೆ. ಸಿಟಿ ಬಸ್‌ಗಳು ಸೇರಿದಂತೆ ರಾಜ್ಯ ಸಾರಿಗೆಯ ಎಲ್ಲ ಬಸ್‌ಗಳಲ್ಲೂ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು. ಆದರೆ, ರಾಜ್ಯ ಸಾರಿಗೆ ಬಸ್‌ಗಳಲ್ಲೇ ಹೊರ ರಾಜ್ಯಗಳಿಗೆ ಪ್ರಯಾಣಿಸಲು ಅವಕಾಶವಿಲ್ಲ.
ಇದನ್ನೂ ಓದಿ:3ನೇ ಬಾರಿ ಕೂಡ ಹೆಣ್ಣು ಮಗು ಜನಿಸಿತು ಎಂದು ಮಗುವನ್ನೇ ಎಸೆದ ತಂದೆ!
ಅನ್ನ ಭಾಗ್ಯ:ಈಗಾಗಲೇ ಪ್ರಸಕ್ತ ತಿಂಗಳ ಪಡಿತರ ವಿಲೇವಾರಿಯಾಗಿರುವ ಕಾರಣ, ಜುಲೈ 1ರಿಂದ ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ದಾರರಿಗೆ ಮಾಸಿಕ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುವುದು.
ಇದನ್ನೂ ಓದಿ:ತಂಬಾಕು ವಿರೋಧಿ ಎಚ್ಚರಿಕೆಯಿಂದ ಎಷ್ಟು ಜನರ ಮೇಲೆ ಪ್ರಭಾವ ಬೀರಿದೆ ದಾಖಲೆ ತೋರಿಸಿ: ಚಿತ್ರ ತಯಾರಕರು
ಯುವನಿಧಿ:* 2022-23ರ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆ ಹೊಂದಿದವರಿಗೆ 6 ತಿಂಗಳ ಗ್ರೇಸ್‌ ಪಿರಿಯಡ್‌ ಇರುತ್ತದೆ. ಆರು ತಿಂಗಳ ನಂತರವೂ ಕೆಲಸ ಸಿಗದಿದ್ದರೆ 24 ತಿಂಗಳುಗಳ ಕಾಲ ಪಧವೀಧರರಿಗೆ ಮಾಸಿಕ 3ಸಾವಿರ ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುವುದು.* 6 ತಿಂಗಳ ಒಳಗೆ ಖಾಸಗಿ/ಸರ್ಕಾರಿ ಕೆಲಸ ದೊರೆತರೆ ಅಥವಾ ಅರ್ಜಿ ಸಲ್ಲಿಸಿದ ನಂತರ ಕೆಲಸ ಸಿಕ್ಕರೂ ಕೂಡ ಅಂತಹವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
