ಕಲಬುರಗಿ:ಚುನಾವಣೆ ಸಂದರ್ಭ ಪ್ರಚಾರದ ವೇಳೆ ನಾನಾ ವಿಚಾರಗಳು ಮುನ್ನೆಲೆಗೆ ಬರುವುದು ನಡೆಯುತ್ತಿರುತ್ತವೆ. ಕಲಬುರಗಿ ಜಿಲ್ಲೆಯಲ್ಲೂ ಅಂಥದ್ದೇ ಒಂದು ಸಂಗತಿ ನಡೆದಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿಷಯವೊಂದನ್ನು ಪ್ರಸ್ತಾಪ ಮಾಡಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದದಲ್ಲಿ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಭಾಗಿಯಾಗಿರುವ ನಿರ್ಮಲಾ ಸೀತಾರಾಮನ್, ಸುಭಾಷ್ ಗುತ್ತೇದಾರ್ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ನಿಮ್ಮೆಲ್ಲರ ಆಶೀರ್ವಾದದಿಂದ ಸುಭಾಷ್ ಗುತ್ತೇದಾರ್ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಈಗ ಐದನೇ ಬಾರಿ ನೀವು ಅವರನ್ನು ಆಶೀರ್ವದಿಸಬೇಕು ಎನ್ನುವ ಮೂಲಕ ಅವರಿಗೇ ಮತ ಚಲಾಯಿಸುವಂತೆ ಮನವಿ ಮಾಡಿದರು.
ಇದನ್ನೂ ಓದಿ:ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು?; ಇಲ್ಲಿದೆ ಶ್ವಾನಭವಿಷ್ಯ!
ಆಳಂದದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ ಪೂಜೆ ಕುರಿತ ವಿಚಾರವನ್ನು ಇದೇ ವೇಳೆ ಪ್ರಸ್ತಾಪಿಸಿದ ನಿರ್ಮಲಾ ಸೀತಾರಾಮನ್, ದರ್ಗಾದಲ್ಲಿನ ಶಿವಲಿಂಗ ಪೂಜೆ ಅವಕಾಶ ನಮಗೆ ಬೇಕು ಎಂದರು. ಶಿವಲಿಂಗ ಪೂಜೆ ನಮ್ಮ ಹಕ್ಕು, ಆದರೆ ಪೂಜೆ ಮಾಡುವುದಕ್ಕೂ ಜೀವಭಯ ನಿರ್ಮಾಣವಾಗಿದೆ, ಪೂಜೆ ಮಾಡಲು ಕಾನೂನು ಹೋರಾಟ ಮಾಡಬೇಕಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಮಹಿಳೆಯರ ಸ್ವಸಹಾಯ ಸಂಘಗಳ ಉತ್ತೇಜನಕ್ಕೆ ಬಜೆಟ್​ನಲ್ಲಿ ಒತ್ತು ನೀಡಲಾಗಿದೆ ಎಂದ ಅವರು, ಮಹಿಳೆಯರು ಕೂಡ ಹೆಚ್ಚು ಹೆಚ್ಚು ಸ್ಟಾರ್ಟಪ್​ಗಳಲ್ಲಿ ಭಾಗಿಯಾಗಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಸೌಲಭ್ಯ ಕಲ್ಪಿಸಿದೆ ಎಂದು ಸಚಿವೆ ನಿರ್ಮಲಾ ಹೇಳಿದರು.
ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + ten =
Remember me
